Home Uncategorized IND vs BAN 2nd Test: ಭಾರತ-ಬಾಂಗ್ಲಾದೇಶ ಎರಡನೇ ಟೆಸ್ಟ್: ಟಾಸ್ ಗೆದ್ದ ಬಾಂಗ್ಲಾ ಬ್ಯಾಟಿಂಗ್...

IND vs BAN 2nd Test: ಭಾರತ-ಬಾಂಗ್ಲಾದೇಶ ಎರಡನೇ ಟೆಸ್ಟ್: ಟಾಸ್ ಗೆದ್ದ ಬಾಂಗ್ಲಾ ಬ್ಯಾಟಿಂಗ್ ಆಯ್ಕೆ

2
0
bengaluru

ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಹಾಗೂ ಬಾಂಗ್ಲಾದೇಶ (India vs Bangladesh) ನಡುವಣ ಅಂತಿಮ ಎರಡನೇ ಟೆಸ್ಟ್ ಪಂದ್ಯಕ್ಕೆ ಚಾಲನೆ ಸಿಕ್ಕಿದೆ. ಈಗಾಗಲೇ ಟಾಸ್ ಗೆದ್ದ ಬಾಂಗ್ಲಾದೇಶ ತಂಡ ನಾಯಕ ಶಕಿಬ್ ಅಲ್ ಹಸನ್ (Shakib Al Hasan) ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ (Team India) ಒಂದು ಬದಲಾವಣೆ ಮಾಡಲಾಗಿದೆ. ಕುಲ್ದೀಪ್ ಯಾದವ್ ಅಲಭ್ಯರಾಗಿದ್ದು ಇವರ ಬದಲು ಜಯದೇವ್ ಉನಾದ್ಕಟ್ ಸ್ಥಾನ ಪಡೆದುಕೊಂಡಿದ್ದಾರೆ. ಇತ್ತ ಬಾಂಗ್ಲಾ ಪಡೆಯಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ.

ಮೊದಲ ಟೆಸ್ಟ್ ಪಂದ್ಯದಲ್ಲಿ 188 ರನ್​ಗಳ ಅಮೋಘ ಜಯ ಸಾಧಿಸಿದ ಟೀಮ್ ಇಂಡಿಯಾ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿತು. ಹೀಗಾಗಿ ದ್ವಿತೀಯ ಟೆಸ್ಟ್ ಪಂದ್ಯ ಎರಡೂ ತಂಡಕ್ಕೆ ಮಹತ್ವದ್ದಾಗಿದೆ. ಸರಣಿ ವಶಪಡಿಸಿಕೊಳ್ಳಬೇಕಾದರೆ ಟೀಮ್ ಇಂಡಿಯಾಕ್ಕೆ ಈ ಮ್ಯಾಚ್ ಗೆಲ್ಲಲೇ ಬೇಕು. ಇತ್ತ ಸರಣಿ ಸೋಲಿನಿಂದ ತಪ್ಪಿಸಿಕೊಳ್ಳಲು ಶಕಿಬ್ ಪಡೆ ಸಮಬಲಕ್ಕೆ ಹೋರಾಟ ನಡೆಸಬೇಕಿದೆ.

ಭಾರತ ಪರ ಶುಭ್​ಮನ್ ಗಿಲ್, ಚೇತೇಶ್ವರ್ ಪೂಜಾರ ಹಾಗೂ ಶ್ರೇಯಸ್ ಅಯ್ಯರ್ ಬೊಂಬಾಟ್ ಫಾರ್ಮ್​ನಲ್ಲಿದ್ದಾರೆ. ಇವರಿಗೆ ನಾಯಕ ಕೆಎಲ್ ರಾಹುಲ್, ವಿರಾಟ್ ಕೊಹ್ಲಿ ಹಾಗೂ ರಿಷಭ್ ಪಂತ್ ಸಾಥ್ ನೀಡಬೇಕಿದೆ. ಅಕ್ಷರ್ ಪಟೇಲ್ ಹಾಗೂ ರವಿಚಂದ್ರನ್ ಅಶ್ವಿನ್ ಆಲ್ರೌಂಡರ್​ಗಳಾಗಿದ್ದಾರೆ. ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಮೊಹಮ್ಮದ್ ಸಿರಾಜ್ ಘಾತಕ ವೇಗಿಗಳಾಗಿದ್ದಾರೆ.

 

bengaluru

2ND TEST. Bangladesh won the toss and elected to bat. https://t.co/CrrjGfFG2D #BANvIND

— BCCI (@BCCI) December 22, 2022

ಉಭಯ ತಂಡಗಳ ಪ್ಲೇಯಿಂಗ್ XI ಇಲ್ಲಿದೆ:

ಭಾರತ ತಂಡ: ಕೆಎಲ್ ರಾಹುಲ್ (ನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಬ್ ಪಂತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಸರ್ ಪಟೇಲ್, ಜಯದೇವ್ ಉನಾದ್ಕಟ್, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್.

ಬಾಂಗ್ಲಾದೇಶ ತಂಡ: ನಜ್ಮುಲ್ ಹುಸೇನ್ ಶಾಂಟೊ, ಜಾಕಿರ್ ಹಸನ್, ಮೊಮಿನುಲ್ ಹಕ್, ಲಿಟ್ಟನ್ ದಾಸ್, ಮುಶ್ಫಿಕರ್ ರಹೀಮ್, ಶಕೀಬ್ ಅಲ್ ಹಸನ್(ನಾಯಕ), ನೂರುಲ್ ಹಸನ್(ವಿಕೆಟ್ ಕೀಪರ್), ಮೆಹಿದಿ ಹಸನ್ ಮಿರಾಜ್, ತೈಜುಲ್ ಇಸ್ಲಾಂ, ಖಲೀದ್ ಅಹ್ಮದ್, ತಸ್ಕಿನ್ ಅಹ್ಮದ್.

IPL Auction 2023: ಮಿನಿ ಹರಾಜಿನಿಂದ ಹೊರಬಿದ್ದ ಸ್ಟಾರ್ ವಿದೇಶಿ ಆಟಗಾರರು ಇವರೇ! ಪಟ್ಟಿಯಲ್ಲಿ 9 ಮಂದಿ

ಭಾರತ ಗೆದ್ದರೆ ಅಗ್ರ ಎರಡರಲ್ಲಿ ಸ್ಥಾನ ಭದ್ರ:

ಭಾರತ ದ್ವಿತೀಯ ಟೆಸ್ಟ್ ಪಂದ್ಯವನ್ನು ಗೆದ್ದರೆ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಅಂಕಪಟ್ಟಿಯ ಅಗ್ರ ಎರಡರಲ್ಲಿ ಸ್ಥಾನ ಗಟ್ಟಿಗೊಳಿಸಲಿದೆ. ದಕ್ಷಿಣ ಆಫ್ರಿಕಾ ತಂಡವು ಆಸ್ಟ್ರೇಲಿಯಾ ಎದುರಿನ ಟೆಸ್ಟ್‌ನಲ್ಲಿ ಹೀನಾಯ ಸೋಲು ಅನುಭವಿಸಿತ್ತು. ಭಾರತ ತಂಡವು ಬಾಂಗ್ಲಾ ಎದುರಿನ ಸರಣಿಯ ಮೊದಲ ಪಂದ್ಯದಲ್ಲಿ ಗೆದ್ದಿತ್ತು. ಅದರಿಂದಾಗಿ ಈ ಪಟ್ಟಿಯಲ್ಲಿ ಭಾರತ ತಂಡವು ಎರಡನೇ ಸ್ಥಾನಕ್ಕೇರಿದೆ. ಆಸ್ಟ್ರೇಲಿಯಾ (76.92%) ಪ್ರಥಮ ಸ್ಥಾನದಲ್ಲಿದೆ. ಭಾರತ (55.77%) ಹಾಗೂ ದಕ್ಷಿಣ ಆಫ್ರಿಕಾ (54.55%) ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿವೆ. ಆದರೆ ಆಸ್ಟ್ರೇಲಿಯಾ ಸರಣಿಯಲ್ಲಿ ಇನ್ನೂ ಎರಡು ಪಂದ್ಯಗಳು ಬಾಕಿಯಿವೆ. ಆದ್ದರಿಂದ ಆದ್ದರಿಂದ ಬಾಂಗ್ಲಾ ಎದುರಿನ ಈ ಪಂದ್ಯ ಟೀಮ್ ಇಂಡಿಯಾಕ್ಕೆ ಮಹತ್ವದ್ದಾಗಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

bengaluru

LEAVE A REPLY

Please enter your comment!
Please enter your name here