ಚೇತೇಶ್ವರ ಪೂಜಾರ ಮತ್ತು ಶ್ರೇಯಸ್ ಅಯ್ಯರ್ ಅವರ ಅತ್ಯುತ್ತಮ ಇನ್ನಿಂಗ್ಸ್ ಆಧಾರದ ಮೇಲೆ ಭಾರತ ಕ್ರಿಕೆಟ್ ತಂಡ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟವನ್ನು 6 ವಿಕೆಟ್ ನಷ್ಟಕ್ಕೆ 278 ರನ್ ಗಳಿಸುವುದರೊಂದಿಗೆ ಅಂತ್ಯಗೊಳಿಸಿದೆ. ಚಟ್ಟೋಗ್ರಾಮ್‌ನ ಜಹುರ್ ಅಹ್ಮದ್ ಚೌಧರಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟೀಂ ಇಂಡಿಯಾದ ಹಂಗಾಮಿ ನಾಯಕ ಕೆಎಲ್ ರಾಹುಲ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಆದರೆ ತಂಡಕ್ಕೆ ಬಯಸಿದ ಆರಂಭ ಸಿಗದಿದ್ದರೂ, ಅಯ್ಯರ್ ಮತ್ತು ಪೂಜಾರ ಅವರ ಶತಕದ ಜೊತೆಯಾಟದಿಂದ ಟೀಂ ಇಂಡಿಯಾ ಸಂಕಷ್ಟದಿಂದ ಪಾರಾಗಿದೆ. ಆದರೆ, ಬಾಂಗ್ಲಾದೇಶ 85 ಮತ್ತು 90ನೇ ಓವರ್‌ಗಳಲ್ಲಿ ಎರಡು ವಿಕೆಟ್‌ಗಳನ್ನು ಕಬಳಿಸುವ ಮೂಲಕ ಭಾರತವನ್ನು ಮತ್ತೆ ಒತ್ತಡಕ್ಕೆ ಸಿಲುಕಿಸಿದೆ.