Home ಬೆಂಗಳೂರು ನಗರ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

42
0
Independence Day Celebration at Karnataka BJP State office in Bengaluru

ಬೆಂಗಳೂರು:

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಅದ ಶ್ರೀ ನಳಿನ್‍ಕುಮಾರ್ ಕಟೀಲ್ ಅವರು ರಾಷ್ಟ್ರಧ್ವಜಾರೋಹಣ ಮಾಡಿದರು. ಬಳಿಕ ಅವರು ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು.

ಭಾರತವು ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕಳೆದ ಏಳು ವರ್ಷಗಳಲ್ಲಿ ಅಭೂತಪೂರ್ವ ಅಭಿವೃದ್ಧಿಯನ್ನು ಸಾಧಿಸಿದೆ. ದೇಶವು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಚಾರ ಎಂದು ಅವರು ತಿಳಿಸಿದರು. ಕೇಂದ್ರ ಸರಕಾರ ಮತ್ತು ರಾಜ್ಯದಲ್ಲಿ ಶ್ರೀ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರಕಾರಗಳ ದೂರದೃಷ್ಟಿಯ ಜನಪರ ಯೋಜನೆಗಳನ್ನು ಅವರು ಶ್ಲಾಘಿಸಿದರು.

Independence Day Celebration at Karnataka BJP State office in Bengaluru

ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಮತ್ತು ಮಾಜಿ ಕೇಂದ್ರ ಸಚಿವರಾದ ಶ್ರೀ ಡಿ.ವಿ. ಸದಾನಂದ ಗೌಡ, ರಾಜ್ಯ ಉಪಾಧ್ಯಕ್ಷರಾದ ಶ್ರೀ ವಿಜಯೇಂದ್ರ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಎನ್. ರವಿಕುಮಾರ್, ಶ್ರೀ ಸಿದ್ದರಾಜು, ರಾಜ್ಯ ಪದಾಧಿಕಾರಿಗಳು, ವಿವಿಧ ಮೋರ್ಚಾದ ರಾಜ್ಯ ಅಧ್ಯಕ್ಷರು, ಪಕ್ಷದ ಹಲವು ಮುಖಂಡರು ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಶ್ರೀ ನಳಿನ್‍ಕುಮಾರ್ ಕಟೀಲ್ ಮತ್ತು ಇತರ ಪದಾಧಿಕಾರಿಗಳು ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಮರ್ಪಿಸಿದರು.

LEAVE A REPLY

Please enter your comment!
Please enter your name here