Home ಬೆಂಗಳೂರು ನಗರ ನರೇಂದ್ರ ಮೋದಿ ನೇತೃತ್ವದಲ್ಲಿ ಅಭಿವೃದ್ಧಿ ಪಥದಲ್ಲಿ ಭಾರತ

ನರೇಂದ್ರ ಮೋದಿ ನೇತೃತ್ವದಲ್ಲಿ ಅಭಿವೃದ್ಧಿ ಪಥದಲ್ಲಿ ಭಾರತ

35
0

ರಾಜ್ಯಸಭಾ ಸದಸ್ಯರಾದ ಕೆ.ಸಿ.ರಾಮಮೂರ್ತಿ ಅಭಿಪ್ರಾಯ

ಬೆಂಗಳೂರು:

2014ಕ್ಕಿಂತ ಮೊದಲಿದ್ದ ಭಾರತಕ್ಕೂ ಅನಂತರದ ಭಾರತಕ್ಕೂ ಅಭಿವೃದ್ಧಿ ವಿಚಾರದಲ್ಲಿ ಅಜಗಜಾಂತರ ವ್ಯತ್ಯಾಸವಾಗಿದೆ. ಜನಪರ ಮತ್ತು ಅಭಿವೃದ್ಧಿಪರ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರಕಾರವು ನಮ್ಮ ದೇಶವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುತ್ತಿದೆ ಎಂದು ರಾಜ್ಯಸಭಾ ಸದಸ್ಯರಾದ ಕೆ.ಸಿ.ರಾಮಮೂರ್ತಿ ಅವರು ಅಭಿಪ್ರಾಯಪಟ್ಟರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಂಗಳವಾರ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, 370 ವಿಧಿ, ತ್ರಿವಳಿ ತಲಾಖ್ ಹಾಗೂ ಬೇಟಿ ಬಚಾವೊ ಸೇರಿದಂತೆ ಅನೇಕ ಸಾಮಾಜಿಕ ಬದಲಾವಣೆಗಳಿಗೆ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಕೋವಿಡ್ ಸೇರಿದಂತೆ ಹತ್ತಾರು ಸವಾಲುಗಳ ನಡುವೆಯೂ ದೇಶವು ವಿಶ್ವಗುರುವಾಗುವ ನಿಟ್ಟಿನಲ್ಲಿ ಮುನ್ನಡೆದಿದೆ ಎಂದು ಮೆಚ್ಚುಗೆ ಸೂಚಿಸಿದರು.

WhatsApp Image 2021 01 26 at 16.33.33

ವಿಶ್ವದ ಅತ್ಯುತ್ತಮ ಸಂವಿಧಾನವನ್ನು ನಾವು ಅಳವಡಿಸಿಕೊಂಡ ದಿನವಿದು. ಅತ್ಯಂತ ಹೆಚ್ಚು ಪರಿಶ್ರಮದಿಂದ ರಚಿಸಿದ ಹಾಗೂ ವಿವಿಧ ದೇಶಗಳ ಸಂವಿಧಾನಗಳನ್ನು ಅಧ್ಯಯನ ಮಾಡಿ ರಚಿಸಿದ ಈ ಸಂವಿಧಾನವು ಸಮಾಜದ ಎಲ್ಲ ವರ್ಗಗಳ ಜನರಿಗೆ ಒಳಿತಾಗುವ ಅಂಶವನ್ನು ಒಳಗೊಂಡಿದೆ ಎಂದು ತಿಳಿಸಿದರು.

ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಅರುಣ್‍ಕುಮಾರ್, ಸಂಸದರಾದ ಪಿ.ಸಿ.ಮೋಹನ್, ಶಾಸಕರಾದ ಮುನಿರತ್ನ, ವಿಧಾನ ಪರಿಷತ್ ಸದಸ್ಯರಾದ ಭಾರತಿ ಶೆಟ್ಟಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸಿದ್ದರಾಜು, ರಾಜ್ಯ ಉಪಾಧ್ಯಕ್ಷರಾದ ಶಂಕರಪ್ಪ, ರಾಜ್ಯ ಕಾರ್ಯದರ್ಶಿಗಳಾದ ಜಗದೀಶ ಹಿರೇಮನಿ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿಗಳಾದ ಲೋಕೇಶ್ ಅಂಬೆಕಲ್ಲು, ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷರಾದ ಚಲವಾದಿ ನಾರಾಯಣಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೇಂಗಳಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ನಾರಾಯಣಗೌಡ ಅವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here