ಬೆಂಗಳೂರು:
ಆರ್.ಎನ್.ಎಸ್. ಶಿಕ್ಷಣ ಮತ್ತು ಉದ್ಯಮ ಸಮೂಹಗಳ ಸ್ಥಾಪಕರು ಹಾಗೂ ಸಮಾಜಮುಖಿ ಚಿಂತಕ ಮತ್ತು ದಾನಿ, ಆರ್.ಎನ್. ಶೆಟ್ಟಿ ಗುರುವಾರ ನಸುಕಿನ 2 ಗಂಟೆ ಸುಮಾರಿನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.
ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಉತ್ತರ ಹಳ್ಳಿಯ ಆರ್.ಎನ್. ಎಸ್. ತಾಂತ್ರಿಕ ವಿದ್ಯಾಲಯ ಕಾಲೇಜು ಆವರಣದಲ್ಲಿ ಮಧ್ಯಾಹ್ನ 2 ಗಂಟೆಯ ನಂತರ ಇಡಲಾಗುವುದು, ಅಂತ್ಯಸಂಸ್ಕಾರ ಸಂಜೆ ನೆರವೇರಿಸಲಾಗುವುದು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ಆರ್. ಎನ್. ಶೆಟ್ಟಿ ಅವರ ಸಾಧನೆ; ಉತ್ತರ ಕನ್ನಡ ಜಿಲ್ಲೆಯ ಪವಿತ್ರ ಪುಣ್ಯ ಕ್ಷೇತ್ರ ಮುರುಡೇಶ್ವರದಲ್ಲಿ 1928ರ ಆಗಸ್ಟ್ 15ರಂದು ಜನಿಸಿದ ಆರ್.ಎನ್. ಶೆಟ್ಟಿ ಅವರು ರಾಜ್ಯದ ಮತ್ತು ದೇಶದ ಪ್ರಗತಿಗೆ ತಮ್ಮದೇ ಕೊಡುಗೆ ನೀಡಿದ್ದ ಹೆಸರಾಂತ ಉದ್ಯಮಿಯಾಗಿದ್ದರು
ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸಂತಾಪ
ಉದ್ಯಮಿ ಆರ್.ಎನ್. ಶೆಟ್ಟಿ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕೃಷಕ್ ಮನೆತನದಲ್ಲಿ ಜನಿಸಿ, ಉದ್ಯಮದತ್ತ ಮುಖ ಮಾಡಿದ ಆರ್.ಎನ್. ಶೆಟ್ಟಿ ಅವರು ನಿರ್ಮಾಣ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹೋಟೆಲ್ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದರು. ಶಿಕ್ಷಣ ಕ್ಷೇತ್ರಕ್ಕೂ ತಮ್ಮ ಕೊಡುಗೆ ನೀಡಿದ್ದರು.
ನಾಡಿನ ಖ್ಯಾತ ಉದ್ಯಮಿ ಆರ್.ಎನ್.ಶೆಟ್ಟಿ ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರು ನಿರ್ಮಾಣ, ಮೂಲಸೌಕರ್ಯ ಅಭಿವೃದ್ಧಿ, ಹೋಟೆಲ್ ಉದ್ಯಮ, ಶಿಕ್ಷಣ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದರು. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ. ಕುಟುಂಬದವರಿಗೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ
— B.S. Yediyurappa (@BSYBJP) December 17, 2020
ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ. ಕುಟುಂಬದವರಿಗೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸು ವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ನಾಡಿನ ಖ್ಯಾತ ಉದ್ಯಮಿ ಆರ್.ಎನ್.ಶೆಟ್ಟಿ ನಿಧನರಾದ ಸುದ್ದಿ ಬೇಸರ ತಂದಿದೆ.
— Dr. Ashwathnarayan C. N. (@drashwathcn) December 17, 2020
ಶಿಕ್ಷಣ ಕ್ಷೇತ್ರ, ಹಲವು ಉದ್ಯಮ ರಂಗಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಅವರ ಆತ್ಮಕ್ಕೆ ಭಗವಂತನು ಸದ್ಗತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/illfYNgk3B