Home ಬೆಂಗಳೂರು ನಗರ ಟಯೋಟಾ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಸಲಹೆ

ಟಯೋಟಾ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಸಲಹೆ

32
0
Advertisement
bengaluru

ಕಾರ್ಮಿಕ ಸಚಿವ ಶಿವರಾಮ್‌ ಹೆಬ್ಬಾರ್‌, ಸಂಸದ ಡಿಕೆ ಸುರೇಶ್‌, ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಸಭೆ

ಬೆಂಗಳೂರು:

ಬಹು ದಿನಗಳಿಂದ ನಡೆಯುತ್ತಿರುವ ಟಯೋಟಾ ಕಾರ್ಮಿಕರ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳುವುದು ಸೂಕ್ತ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಶ್ರೀ ಜಗದೀಶ್‌ ಶೆಟ್ಟರ್‌ ಸಲಹೆ ನೀಡಿದರು.

ಬೆಂಗಳೂರಿನ ಖನಿಜ ಭವನದ ಉದ್ಯೋಗ ಮಿತ್ರ ಸಭಾಂಗಣದಲ್ಲಿ ಇಂದು ಆಯೋಜಿಸಿದ್ದ ಸಭೆಯಲ್ಲಿ ಟಯೋಟಾ ಕಂಪನಿಯ ಅಧಿಕಾರಿಗಳು ಕಾರ್ಮಿಕ ಮುಖಂಡರುಗಳೊಂದಿಗೆ ವಿಸ್ತ್ರತ ಚರ್ಚೆಯನ್ನು ನಡೆಸಲಾಯಿತು. ಈ ಸಂಧರ್ಭದಲ್ಲಿ ಕಾರ್ಮಿಕ ಸಚಿವರಾದ ಶಿವರಾಮ್‌ ಹೆಬ್ಬಾರ್‌, ಸಂಸದರಾದ ಡಿ.ಕೆ ಸುರೇಶ್‌, ಮಾಗಡಿ ಶಾಸಕ ಎ.ಮಂಜು, ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ, ಕೈಗಾರಿಕಾಭಿವೃದ್ದಿ ಆಯುಕ್ತೆ ಶ್ರೀಮತಿ ಗುಂಜನ್‌ ಕೃಷ್ಣ ಉಪಸ್ಥಿತರಿದ್ದರು.

Industry Minister Jagdish Shettar advises to resolve Toyota issue amicably2

ಕಾರ್ಮಿಕ ಸಂಘಟನೆಯ ಮುಖಂಡರುಗಳು ಹಾಗೂ ಟಯೋಟಾ ಅಧಿಕಾರಿಗಳ ಸಮಸ್ಯೆಗಳನ್ನು ಆಲಿಸಲಾಯಿತು. ತನಿಖೆಯ ಉದ್ದೇಶದಿಂದ ಸಸ್ಪೆಂಡ್‌ ಮಾಡಿರುವ ಕಾರ್ಮಿಕರನ್ನು ಕೆಲಸಕ್ಕೆ ತಗೆದುಕೊಳ್ಳಬೇಕು ಹಾಗೂ ಒಂದು ಸಮಯದ ಕಾಲಮಿತಿಯಲ್ಲಿ ತನಿಖೆಯನ್ನು ಪೂರೈಸುವ ಭರವಸೆಯನ್ನು ನೀಡಬೇಕು ಎನ್ನುವ ಸಲಹೆಗಳು ಸಭೆಯಲ್ಲಿ ವ್ಯಕ್ತವಾದವು. ಈ ಸಂಧರ್ಭದಲ್ಲಿ ಕೈಗಾರಿಕಾ ಸಚಿವರಾದ ಜಗದೀಶ್‌ ಶೆಟ್ಟರ್‌ ಮಾತನಾಡಿ, ಕಾರ್ಮಿಕರು ಹಾಗೂ ಕಂಪನಿಯ ಆಡಳಿತ ಮಂಡಳಿಯ ನಡುವೆ ಸೌಹಾರ್ದಯುತವಾಗಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವುದು ಸೂಕ್ತ. ಕರ್ನಾಟಕ ರಾಜ್ಯ ಕೈಗಾರಿಕಾ ಸ್ನೇಹೀ ರಾಜ್ಯವಾಗಿದ್ದು, ರಾಜ್ಯದಲ್ಲಿ ಕೈಗಾರಿಕೆಗಳಿಗೆ ಇರುವ ವಾತಾವರಣದ ಬಗ್ಗೆ ಒಂದು ಸಕಾರಾತ್ಮಕ ಸಂದೇಶ ನೀಡುವುದು ಅದರ ಜೊತೆಯಲ್ಲಿಯೇ ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದು ರಾಜ್ಯ ಸರಕಾರದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಕಾರ್ಮಿಕ ಸಂಘಟನೆಯ ಪದಾಧಿಕಾರಿಗಳು ಹಾಗೂ ಆಡಳಿತ ಮಂಡಳಿ ತಮ್ಮ ನಡುವಿನ ಭಿನ್ನಾಭಿಪ್ರಾಯಗಳನ್ನು ಶೀಘ್ರ ಸರಿಪಡಿಸಿಕೊಳ್ಳಬೇಕು ಎಂದು ಹೇಳಿದರು.

bengaluru bengaluru
Industry Minister Jagdish Shettar advises to resolve Toyota issue amicably1

ಯಾವುದೇ ಸಮಸ್ಯೆಯನ್ನು ಹೆಚ್ಚು ದಿನಗಳ ಕಾಲ ಮುಂದುವರೆಸಿದಲ್ಲಿ ಸಮಸ್ಯೆಗಳು ಬಗೆಹರಿಯವುದು ಸುಲಭವಾಗಿರುವುದಿಲ್ಲ. ಪ್ರಾಥಮಿಕ ಹಂತದಲ್ಲಿಯೇ ಇದನ್ನು ಬಗೆಹರಿಸಿಕೊಂಡಿದ್ದಲ್ಲಿ ಈ ಮಟ್ಟದಲ್ಲಿ ದೊಡ್ಡದಾಗುತ್ತಿರಲಿಲ್ಲ. ಕಾಲಮಿತಿಯೊಳಗೆ ಸಮಸ್ಯೆಯನ್ನು ಬಗೆಹರಿಸುವ ಬಗ್ಗೆ ಕಂಪನಿ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ನಿರ್ಧಾರ ತಿಳಿಸುವಂತೆ ಟಯೋಟಾ ಅಧಿಕಾರಿಗಳಿಗೆ ಸೂಚನೆ ನೀಡಿದರು.


bengaluru

LEAVE A REPLY

Please enter your comment!
Please enter your name here