ನವ ದೆಹಲಿ : ನವ ದೆಹಲಿಯಲ್ಲಿ ನಿರ್ಮಾಣ ಹಂತದಲ್ಲಿರುವ ಕರ್ನಾಟಕ ಭವನದ ನೂತನ ಕಟ್ಟಡಕ್ಕೆ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಖುದ್ದು ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.
ಗುರುವಾರ ಕರ್ನಾಟಕ ಭವನದ ಅಧಿಕಾರಿಗಳೊಂದಿಗೆ ಸ್ಥಳಕ್ಕೇ ಭೇಟಿ ನೀಡಿದ ಥಾವರ್ ಚಂದ್ ಗೆಹ್ಲೋಟ್ ಅವರು, ಕಟ್ಟಡ ಕಾಮಗಾರಿಯನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಸರಕಾರದ ಹೊಸದಿಲ್ಲಿಯ ವಿಶೇಷ ಪ್ರತಿನಿಧಿ, ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಸೇರಿದಂತೆ ಕರ್ನಾಟಕ ಭವನದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.