Home ಕರ್ನಾಟಕ ದರ್ಶನ್‌ ಪ್ರೇರಣೆಯಿಂದ ಪ್ರಾಣಿಗಳ ಸಂರಕ್ಷಣೆಗಾಗಿ 40 ಲಕ್ಷ ಹಣ ಸಂಗ್ರಹ: ಅರವಿಂದ ಲಿಂಬಾವಳಿ

ದರ್ಶನ್‌ ಪ್ರೇರಣೆಯಿಂದ ಪ್ರಾಣಿಗಳ ಸಂರಕ್ಷಣೆಗಾಗಿ 40 ಲಕ್ಷ ಹಣ ಸಂಗ್ರಹ: ಅರವಿಂದ ಲಿಂಬಾವಳಿ

69
0

ಬೆಂಗಳೂರು:

ಮೃಗಾಲಯದ ಪ್ರಾಣಿಗಳನ್ನು ದತ್ತು ತೆಗೆದುಕೊಂಡು ಪೋಷಿಸುತ್ತಿರುವ ಹಾಗೂ ಮೃಗಾಲಯದ ಪ್ರಾಣಿ ದತ್ತು ತೆಗೆದುಕೊಳ್ಳಲು ಕರೆನೀಡಿದ ಕನ್ನಡ ಚಿತ್ರರಂಗದ ಜನಪ್ರಿಯ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಕೆಲಸಕ್ಕಾಗಿ ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಕೃತಜ್ಞತೆ ಸಲ್ಲಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಅವರು ಕನ್ನಡ ಚಿತ್ರರಂಗದ ಚಾಲೆಂಜಿಂಗ್ ಸ್ಟಾರ್ ಎಂದೇ ಖ್ಯಾತರಾದ ದರ್ಶನ್ ಅವರು ರಾಜ್ಯದ ಮೃಗಾಲಯದ ಪ್ರಾಣಿಗಳ ಬಗ್ಗೆ ಪ್ರೀತಿ ಮತ್ತು ಆಸಕ್ತಿ ಹೊಂದಿದ್ದಾರೆ, ಅವರು ಸ್ವಇಚ್ಛೆಯಿಂದ ಪ್ರಾಣಿ ಪ್ರಿಯರಲ್ಲಿ ಮೃಗಾಲಯದ ಪ್ರಾಣಿಗಳನ್ನು ದತ್ತು ಪಡೆಯುವಂತೆ ಕರೆಕೊಟ್ಟರು ಅವರ ಕರೆಯ ಮೇರೆಗೆ 40 ಲಕ್ಷಕ್ಕೂ ಹೆಚ್ಚು ಹಣ ಸಂಗ್ರಹವಾಗಿದೆ.

ಕೊರೋನಾದ ಈ ಕಷ್ಟಕಾಲದಲ್ಲಿ ಸರ್ಕಾರ ಜನರ ರಕ್ಷಣೆಯ ಹೊಣೆ ಹೊತ್ತಿರುವ ಹಾಗೆ ದರ್ಶನ್ ಅವರು ಮೃಗಾಲಯದ ಪ್ರಾಣಿಗಳ ರಕ್ಷಣೆಗೆ ಹೆಚ್ಚಿನ ಕಾಳಜಿ ವಹಿಸಿದ್ದಾರೆ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳು,

ಹಾಗೆಯೇ ಪ್ರಾಣಿ ದತ್ತು ಪಡೆಯಲು ದೇಣಿಗೆ ನೀಡಿದ ಎಲ್ಲ ಪ್ರಾಣಿಪ್ರಿಯರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ.

ನಾನು ಸಹ ರಾಜ್ಯದ ಎಲ್ಲಾ ಪ್ರಾಣಿ ಪ್ರಿಯರಲ್ಲಿ ಮೃಗಾಲಯದ ಪ್ರಾಣಿಗಳನ್ನು ದತ್ತು ಪಡೆಯಬೇಕು ಮತ್ತು ಈ ಉದ್ದೇಶಕ್ಕಾಗಿ ಹೆಚ್ಚಿನ ನೆರವು ನೀಡಬೇಕು ಎಂದು ಮನವಿ ಮಾಡುತ್ತೇನೆ ಎಂದು ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here