ಬೆಂಗಳೂರು, ಫೆಬ್ರವರಿ 18: ಅನಧಿಕೃತ , ರೆವಿನ್ಯೂ ಬಡಾವಣೆಗಳಿಗೆ ಬಿ ಖಾತಾ ನೀಡಲು ಬಿ ಖಾತಾ ಅಭಿಯಾನ ಪ್ರಾರಂಭಿಸುವಂತೆ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಯೋಜನಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಬಿ ಖಾತಾ ಅಭಿಯಾನಕ್ಕೆ ಸೂಚನೆ ನೀಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡುತ್ತಾ ಮಾತನಾಡಿದರು.
ಅರಣ್ಯ ಸಚಿವರ ನೇತೃತ್ವದಲ್ಲಿ ರಚಿಸಲಾಗಿದ್ದ ಸಮಿತಿಯ ವರದಿಯಾಧರಿಸಿ ಕಾನೂನು ರೂಪಿಸಲಾಗಿದ್ದು, ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದ ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ ಬರುವ ಅನಧಿಕೃತ, ರೆವಿನ್ಯೂ ಬಡಾವಣೆಗಳು ಹಾಗೂ ಆಸ್ತಿಗಳಿಗೆ ನಾಗರೀಕ ಸೌಲಭ್ಯಗಳನ್ನು ಒದಗಿಸಲಾಗಿದ್ದು, ಸರ್ಕಾರದಕ್ಕೆ ತೆರಿಗೆ ಸಂದಾಯವಾಗಬೇಕು. ಈ ದಿಸೆಯಲ್ಲಿ ಅನಧಿಕೃತ, ರೆವಿನ್ಯೂ ಬಡಾವಣೆಗಳಲ್ಲಿ ಮೂರು ತಿಂಗಳಲ್ಲಿ ಬಿ ಖಾತಾ ಗಳನ್ನು ನೀಡುವಂತೆ ಸೂಚನೆ ನೀಡಲಾಗಿದೆ ಎಂದರು.