Home ಬೆಂಗಳೂರು ನಗರ ‘Invest Karnataka Conclave-2022’ attracted investment proposals of Rs.5,41,369 crore- MB Patil |...

‘Invest Karnataka Conclave-2022’ attracted investment proposals of Rs.5,41,369 crore- MB Patil | `ಇನ್ವೆಸ್ಟ್ ಕರ್ನಾಟಕ’ ಮೂಲಕ ₹5.41 ಲಕ್ಷ ಕೋಟಿ, ಹುಬ್ಬಳ್ಳಿ ಸಮಾವೇಶದ ಮೂಲಕ ₹1,275 ಕೋಟಿ ಹೂಡಿಕೆಗೆ ಒಡಂಬಡಿಕೆ

33
0
'Invest Karnataka Conclave-2022' attracted investment proposals of Rs.5,41,369 crore- MB Patil

ಬೆಳಗಾವಿ (ಸುವರ್ಣ ವಿಧಾನಸೌಧ):

2022ರ ನವೆಂಬರ್ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಸಿದ ‘ಇನ್ವೆಸ್ಟ್ ಕರ್ನಾಟಕ’ ಸಮಾವೇಶದ ಮೂಲಕ 57 ಕಂಪನಿಗಳೊಂದಿಗೆ 5,41,369 ಕೋಟಿ ರೂ.ಗಳ ಹೂಡಿಕೆಗೆ ಸರಕಾರವು ಒಡಂಬಡಿಕೆ ಮಾಡಿಕೊಂಡಿದೆ. ಇದೇ ರೀತಿಯಲ್ಲಿ, ಹುಬ್ಬಳ್ಳಿಯಲ್ಲಿ ನಡೆಸಲಾದ ಎಫ್ಎಂಸಿಜಿ ಹೂಡಿಕೆದಾರರ ಸಮಾವೇಶದ ಮುಖಾಂತರ 16 ಕಂಪನಿಗಳೊಂದಿಗೆ ರಾಜ್ಯದಲ್ಲಿ 1,275 ಕೋಟಿ ರೂ. ಬಂಡವಾಳ ಹೂಡಿಕೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಅವರು ಕೇಳಿದ ಪ್ರಶ್ನೆಗೆ ಅವರು ಶುಕ್ರವಾರ ಉತ್ತರ ನೀಡಿದರು.

ಇನ್ವೆಸ್ಟ್ ಕರ್ನಾಟಕದಲ್ಲಿ ಕುದುರಿಸಲಾದ ಒಡಂಬಡಿಕೆಗಳ ಪೈಕಿ 7 ಯೋಜನೆಗಳಿಗೆ ಏಕಗವಾಕ್ಷಿ ಸಮಿತಿಯಲ್ಲಿ ಅನುಮೋದನೆ ನೀಡಲಾಗಿದ್ದು, ಇವುಗಳಿಗೆ ಭೂಮಿ, ನೀರು ಮತ್ತು ವಿದ್ಯುತ್ ಪೂರೈಕೆ ಒದಗಿಸಲಾಗುವುದು. ಇವು ಬೃಹತ್ ಯೋಜನೆಗಳಾದ್ದರಿಂದ ಕಾರ್ಯಾರಂಭ ಮಾಡಲು 3-4 ವರ್ಷಗಳು ಹಿಡಿಯುತ್ತವೆ ಎಂದು ಅವರು ವಿವರಿಸಿದ್ದಾರೆ.

ಎಫ್ಎಂಸಿಜಿ ಸಮಾವೇಶದಲ್ಲಾದ 16 ಒಡಂಬಡಿಕೆಗಳ ಪೈಕಿ 3 ಯೋಜನೆಗಳಿಗೆ ಏಕಗವಾಕ್ಷಿ ವ್ಯವಸ್ಥೆ ಮೂಲಕ ಅನುಮೋದನೆ ಕೊಡಲಾಗಿದ್ದು, ಇವುಗಳಿಗೂ ಮೂಲಸೌಕರ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಮೇಲ್ಕಂಡ ಎರಡೂ ಬಗೆಯ ಯೋಜನೆಗಳು ಅನುಷ್ಠಾನದ ನಾನಾ ಹಂತಗಳಲ್ಲಿವೆ ಎಂದು ಅವರು ತಿಳಿಸಿದರು.

ಇನ್ವೆಸ್ಟ್ ಕರ್ನಾಟಕ-2022 ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಹಿಂದಿನ ಸರಕಾರವು 74.99 ಕೋಟಿ ರೂ. ವೆಚ್ಚ ಮಾಡಿದೆ. ಹಾಗೆಯೇ, ಹುಬ್ಬಳ್ಳಿಯಲ್ಲಿ 2022ರ ನವೆಂಬರಿನಲ್ಲಿ ನಡೆಸಲಾದ ಹೂಡಿಕೆದಾರರ ಸಮಾವೇಶಕ್ಕೆ 12.23 ಲಕ್ಷ ರೂ.ಗಳನ್ನು ಸರಕಾರದ ವತಿಯಿಂದ ಖರ್ಚು ಮಾಡಲಾಗಿದೆ ಎಂದು ಪಾಟೀಲ ವಿವರಿಸಿದರು.

ಜೊತೆಗೆ, ಸರಕಾರದ ನಿಯಮಾವಳಿಗಳ ಪ್ರಕಾರ ಈ ಉದ್ಯಮಗಳಲ್ಲಿ `ಡಿ’ ಗ್ರೂಪ್ ಹುದ್ದೆಗಳನ್ನು ಕನ್ನಡಿಗರಿಗೆ ಶೇಕಡ 100ರಷ್ಟು ಮತ್ತು ಒಟ್ಟಾರೆಯಾಗಿ ಶೇ.70ರಷ್ಟು ಉದ್ಯೋಗಗಳನ್ನು ಸ್ಥಳೀಯರಿಗೆ ಕೊಡಬೇಕೆನ್ನುವ‌ ನಿಯಮ ರೂಪಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here