Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ವಿಜಯಪುರ
  • Chief Minister Siddaramaiah| ಸರ್ಕಾರ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿಡುವ ಠೇವಣಿ ಹಣವನ್ನು ಸಹಕಾರಿ ಬ್ಯಾಂಕುಗಳಲ್ಲಿಯೇ ತೊಡಗಿಸುವ ಬಗ್ಗೆ ಪರಿಶೀಲನೆ :ಮುಖ್ಯಮಂತ್ರಿ ಸಿದ್ದರಾಮಯ್ಯ
  • ವಿಜಯಪುರ

Chief Minister Siddaramaiah| ಸರ್ಕಾರ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿಡುವ ಠೇವಣಿ ಹಣವನ್ನು ಸಹಕಾರಿ ಬ್ಯಾಂಕುಗಳಲ್ಲಿಯೇ ತೊಡಗಿಸುವ ಬಗ್ಗೆ ಪರಿಶೀಲನೆ :ಮುಖ್ಯಮಂತ್ರಿ ಸಿದ್ದರಾಮಯ್ಯ

The Bengaluru Live November 20, 2023 6:00 PM 1 minute read
Investigating deposit money kept in nationalized banks by the government in cooperative banks: Chief Minister Siddaramaiah

Chief Minister Siddaramaiah| ಸರ್ಕಾರ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿಡುವ ಠೇವಣಿ ಹಣವನ್ನು ಸಹಕಾರಿ ಬ್ಯಾಂಕುಗಳಲ್ಲಿಯೇ ತೊಡಗಿಸುವ ಬಗ್ಗೆ ಪರಿಶೀಲನೆ :ಮುಖ್ಯಮಂತ್ರಿ ಸಿದ್ದರಾಮಯ್ಯ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ವಿಜಯಪುರ:

ಸರ್ಕಾರ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಇಡುವ ಠೇವಣಿ ಹಣವನ್ನು ಸಹಕಾರಿ ಬ್ಯಾಂಕುಗಳಲ್ಲಿಯೇ ತೊಡಗಿಸುವ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಅಖಿಲ ಬಾರತ ಸಹಕಾರಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು.

ಸಹಕಾರಿ ಬ್ಯಾಂಕುಗಳು ಸುಸ್ಥಿರವಾಗಿರಬೇಕು. ಸುಸ್ಥಿರವಾಗಿದ್ದರೇ ಮಾತ್ರ ಅವು ರೈತರಿಗೆ ಸಾಲ ನೀಡಲು ಸಾಧ್ಯ. ರೈತರಿಗೆ ವ್ಯವಸಾಯ ಮಾಡಲು ಸಕಾಲದಲ್ಲಿ ಸಾಲ ಸಿಕ್ಕರೆ ವ್ಯವಸಾಯ ಮಾಡಲು ಅನುಕೂಲವಾಗಿ ಉತ್ಪಾದನೆಯೂ ಹೆಚ್ಚಾಗಲಿದೆ ಎಂದರು. ಸರ್ಕಾರ ಒಂದು ವರ್ಷಕ್ಕೆ 1200 ಕೋಟಿ ರೂ.ಗಳನ್ನು ಹಾಲು ನೀಡು ಕ್ಷೀರ ಭಾಗ್ಯ ಕಾರ್ಯಕ್ರಮಕ್ಕೆ ಖರ್ಚು ಮಾಡುತ್ತಿದೆ. ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಸಹಕಾರ ಸಂಘಗಳಲ್ಲಿ ರೈತರು ಪಡೆದ ಸಾಲವನ್ನು ಮನ್ನಾ ಮಾಡಲು 50 ಸಾವಿರದವರಗೆ ಸಂಪೂರ್ಣ ಮನ್ನಾ ಮಾಡಲಾಯಿತು. ಹೀಗೆ ಮನ್ನಾ ಮಾಡದ್ದರಿಂದ ಸಹಕಾರಿ ಸಂಘಗಳು ಹಾಗೂ ಸಹಕಾರ ಬ್ಯಾಂಕುಗಳಿಗೆ ಶಕ್ತಿ ಬರಲು ಸಾಧ್ಯವಾಯಿತು ಎಂದರು.

ರೈತರಿಗೆ ಸಾಲ ನೀಡಲು ನಬಾರ್ಡ್ ಹಾಗೂ ಪ್ರಧಾನಮಂತ್ರಿಗಳಿಗೆ ನವರಿಗೆ ಕೂಡಲೇ ಪತ್ರ ನಮ್ಮ ಸರ್ಕಾರ ಬಜೆಟ್ ಮಂಡಿಸಿದಾಗ ಜೀರೋ ಪರ್ಸೆಂಟ್ ಸಾಲವನ್ನು 3 ರಿಂದ 5 ಲಕ್ಷದವರೆಗೆ ಏರಿಸುವ ಕೆಲಸ ಮಾಡಿದ್ದೇವೆ. ರೈತರಿಗೆ ಸಾಲ ನೀಡಬೇಕೆಂದು ನಬಾರ್ಡ್ ಹಾಗೂ ಪ್ರಧಾನಮಂತ್ರಿಗಳಿಗೆ ನವರಿಗೆ ಕೂಡಲೇ ಪತ್ರ ಬರೆಯುವ ಕೆಲಸ ಮಾಡುವುದಾಗಿ ಭರವಸೆ ನೀಡಿದರು. ಹಿಂದೆ ತಾವು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿಯೇ 3 ಲಕ್ಷದವರೆಗೆ ಶೇ. 3 ರಷ್ಟು ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿತ್ತು. ಈಗ ಅದನ್ನು ಬಡ್ಡಿ ರಹಿತವಾಗಿ 3-5 ಲಕ್ಷದವರೆಗೆ ಸಾಲ ನೀಡುವ ಕೆಲಸ ಮಾಡಲಾಗಿದೆ. ಶೇ 3 ರಷ್ಟು ಬಡ್ಡಿಯನ್ನು 15 ಲಕ್ಷ ಆಗುವವರೆಗೆ ಮಾತ್ರ ನೀಡಬೇಕು.

ಮುಖ್ಯಮಂತ್ರಿ @siddaramaiah ಅವರು ಇಂದು ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ನಿ. ಬೆಂಗಳೂರು ಮತ್ತು
ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಸಹಯೋಗದೊಂದಿಗೆ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ಆವರಣದಲ್ಲಿ ಆಯೋಜಿಸಲಾಗಿದ್ದ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು, ವಿಜಯಪುರ ಜಿಲ್ಲಾ ಕೇಂದ್ರ… pic.twitter.com/RyWtqL2vrX

— CM of Karnataka (@CMofKarnataka) November 20, 2023

ನಿಸ್ವಾರ್ಥವಾಗಿ ಕೆಲಸ ಮಾಡಿದರೆ ಮಾತ್ರ ಬ್ಯಾಂಕುಗಳು ಲಾಭದಾಯಕವಾಗಿ ನಡೆಯುತ್ತವೆ ಯಾವುದೇ ಬ್ಯಾಂಕಿನಲ್ಲಿ ಎಲ್ಲರೂ ನಿಸ್ವಾರ್ಥವಾಗಿ ಕೆಲಸ ಮಾಡಿದರೆ ಮಾತ್ರ ಅದು ಲಾಭದಾಯಕವಾಗಿ ನಡೆಯುತ್ತದೆ. ಸ್ವಾರ್ಥ ಬಿಟ್ಟು ಸೇವೆ ಮಾಡುವ ಕ್ಷೇತ್ರವಿದು ಎಂದರು. ಆ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಒಳ್ಳೆಯ ನಾಯಕತ್ವ ಬೆಳೆಸಿಕೊಳ್ಳುವ ಅವಕಾಶ ದೊರಯುತ್ತದೆ. ವಿಜಯಪುರ ಡಿಸಿಸಿ ಬ್ಯಾಂಕ್ ಪ್ರಾರಂಭವಾಗಿ 105 ವರ್ಷಗಳಾಗಿರುವ ಸ್ಮರಾಣಾರ್ಥ 15-16 ಕೋಟಿ ವೆಚ್ಚದಲ್ಲಿ ಹೊಸ ಕಟ್ಟಡ ಕಟ್ಟಿರುವುದರ ಅರ್ಥ ಬ್ಯಾಂಕು ಆರ್ಥಿಕವಾಗಿ ಸುಸ್ಥಿರವಾಗಿರುವುದರ ದ್ಯೋತಕ ಎಂದರು.

ಸಹಕಾರಿ ತತ್ವದ ಮೇಲೆ ಜಾಗೃತಿ, ಸಮಾಜದಲ್ಲಿನ ಬಡ ಬಡತನ, ಅಸಮಾನತೆ ಹೋಗಲಾಡಿಸುವ ಪ್ರಯತ್ನ ಮಾಡಬೇಕು ನಮ್ಮ ಸರ್ಕಾರ ಅಸಮಾನತೆ ತೊಲಗಿಸಲು ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇವೆ. ಶಕ್ತಿ ಯೋಜನೆಯಡಿ 1 ಕೋಟಿ ಮಹಿಳೆಯರು ಉಚಿತವಾಗಿ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದಾರೆ. ಸಣ್ಣ ಪುಟ್ಟ ದೋಷಗಳ ಹೊರತಾಗಿಯೂ ನೂರಕ್ಕೆ 90 ಭಾಗ ಬಡವರಿಗೆ, ಮಹಿಳೆಯರಿಗೆ, ದಲಿತರಿಗೆ, ಅಲ್ಪಸಂಖ್ಯಾತರಿಗೆ ಈ ಕಾರ್ಯಕ್ರಮ ರೂಪಿಸಿ ಆರ್ಥಿಕ ಶಕ್ತಿಯನ್ನು ತುಂಬಲಾಗಿದೆ. ಸಹಕಾರ ಕ್ಷೇತ್ರ ಹೇಗೆ ಜಾತಿ ಧರ್ಮಗಳಿಂದ ಹೊರತಾಗಿದೆಯೋ ಅದೇ ರೀತಿ ನಮ್ಮ ಕಾರ್ಯಕ್ರಮಗಳು ಎಲ್ಲಾ ಜಾರಿ ಧರ್ಮಗಳ ಜನರಿಗೆ, ಮೇಲ್ವರ್ಗದ ಬಡವರಿಗೂ ಕಾರ್ಯಕ್ರಮಗಳನ್ನು ಕೊಟ್ಟಿದ್ದೇವೆ.

ಬರಗಾಲವನ್ನು ಸಮರ್ಥವಾಗಿ ನಿಭಾಯಿಸುತ್ತೇವೆ 12 ರಾಜ್ಯಗಳಲ್ಲಿ ಬರಗಾಲವಿದ್ದು, ಕರ್ನಾಟಕದಲ್ಲಿಯೂ ಕೂಡ 236 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳಲ್ಲಿ ಬರ ಘೋಷಣೆ ಮಾಡಲಾಗಿದೆ. ಬರ ಪರಿಹಾರವನ್ನು ಕೇಂದ್ರ ಸರ್ಕಾರದಿಂದ ಬಿಡುಗಡೆ ಮಾಡಿಸುವ ಕೆಲಸವನ್ನು ನಮ್ಮ ಸಂಸದರು ಮಾಡಬೇಕು. ಕುಡಿಯುವ ನೀರಿಗೆ ಸಮಸ್ಯೆಯಾಗಬಾರದೆಂದ ಡಿಸಿ, ಸಿಇಒ ಗಳಿಗೆ ಸೂಚನೆ ನೀಡಲಾಗಿದ್ದು, ಜಿಲ್ಲಾಧಿಕಾರಿಗಳ ಬಳಿ 800 ಕೋಟಿ ರೂ.ಗಳು ಲಭ್ಯವಿದೆ. ಮೇವಿಗೆ, ಉದ್ಯೋಗ ನೀಡಲು, ಕುಡಿಯುವ ನೀರಿಗೆ ರಾಜ್ಯ ಸರ್ಕಾರ ಈಗಾಗಲೇ 800 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಬರಗಾಲವನ್ನು ನಮ್ಮ ಸರ್ಕಾರ ಸಮರ್ಥವಾಗಿ ನಿಭಾಯಿಸುತ್ತದೆ ಎಂದು ಬರವಸೆ ನೀಡಿದರು.

ಸಹಕಾರಿ ರಂಗ ಜಾತಿ ಧರ್ಮರಹಿತ ಕ್ಷೇತ್ರ: ಸ್ವಾತಂತ್ರ್ಯಪೂರ್ವದಿಂದಲೂ ಸಹಕಾರಿ ಕ್ಷೇತ್ರ ಬೆಳೆಯುತ್ತಾ ಬಂದಿದೆ. ಸಿದ್ದನಗೌಡ ಸಣ್ಣರಾಮನಗೌಡ ಪಾಟೀಲರು ಸಹಕಾರ ಸಂಘ ಪ್ರಾರಂಭಿಸಿದರು, ಇಂದು ರಾಜ್ಯದಲ್ಲಿ 45600 ಸಹಕಾರ ಸಂಘಗಳಿದ್ದು, ಭಾರತದಲ್ಲಿ ಸುಮಾರು 8.50 ಲಕ್ಷ ಸಹಕಾರ ಸಂಘಗಳಿದ್ದು, 31 ಕೋಟಿ ಸದಸ್ಯರಿದ್ದಾರೆ. ಸಹಕಾರಿ ಕ್ಷೇತ್ರದ ದೇಶದಾದ್ಯಂತ ವ್ಯಾಪಕವಾಗಿ ಬೆಳೆದಿರುವುದಕ್ಕೆ ಇದೇ ಸಾಕ್ಷಿ. ಈ ಬೆಳವಣಿಗೆ ದೇಶದ ಆರ್ಥಿಕ ಹಾಗೂ ಸಾಮಾಜಿಕ ಬೆಳವಣಿಗೆಯನ್ನೂ ಬಿಂಬಿಸುತ್ತದೆ. ಸಹಕಾರಿ ರಂಗ ಒಂದು ಕ್ಷೇತ್ರಕ್ಕೆ ಸೀಮಿತವಾಗಿಲ್ಲ. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಬದುಕಿನ ಎಲ್ಲ ಕ್ಷೇತ್ರಗಳಲ್ಲಿ ಸಹಕಾರ ರಂಗ ವ್ಯಾಪಿಸಿಕೊಂಡಿದೆ. ಸಹಕಾರಿ ರಂಗದ ಅಭಿವೃದ್ಧಿ , ರಾಜ್ಯ ಮತ್ತು ದೇಶದ ಜಿಡಿಪಿಯ ಬೆಳವಣಿಗೆಯ ಮೇಲೂ ಪರಿಣಾಮವನ್ನು ಬೀರುತ್ತದೆ. ದೇಶದ ಆಂತರಿಕ ಕೊಡುಗೆಯ ಹೆಚ್ಚಳದಲ್ಲಿ ಸಹಕಾರಿ ಕ್ಷೇತ್ರದ ಕೊಡುಗೆ ಅಪಾರವಾಗಿದೆ. ದೇಶದಲ್ಲಿ ಅನೇಕ ಜಾತಿ ಧರ್ಮಗಳಿವೆ. ಆದರೆ ಸಹಕಾರಿ ರಂಗಕ್ಕೆ ಯಾವ ಜಾತಿ ಧರ್ಮಗಳ ಸೋಂಕು ಇಲ್ಲ. ಜಾತಿ ರಹಿತವಾದ ಧರ್ಮರಹಿತವಾದ ಕ್ಷೇತ್ರವೆಂದರೆ ಸಹಕಾರಿ ಕ್ಷೇತ್ರ ಎಂದರು.

ದಲಿತರು, ಮಹಿಳೆಯರು ಸಹಕಾರಿ ಸದಸ್ಯರಾಗಲು ಪ್ರೋತ್ಸಾಹ: ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರನ್ನು ಸಹಕಾರ ಸಂಘದ ಸದಸ್ಯರಾಗಲು ಸರ್ಕಾರವೇ ಜನರ ಪರವಾಗಿ ಶೇರು ಮೊತ್ತವನ್ನು ಭರಿಸಲಾಗಿತ್ತು. ಈ ಕಾರ್ಯಕ್ರಮ ಇಂದಿಗೂ ಮುಂದುವರೆಯುತ್ತಿದೆ. ಎಲ್ಲ ದಲಿತರು ಹಾಗೂ ಮಹಿಳೆಯರು ಸಹಕಾರ ಸಂಘದ ಸದಸ್ಯರಾಗಬೇಕು. ಸರ್ಕಾರದ ಸಹಾಯದಿಂದಾಗಿ ದಲಿತರು ಹಾಗೂ ಮಹಿಳೆಯರು ಹಾಲು ಸಹಕಾರ ಸಂಘದಲ್ಲಿ ಸದಸ್ಯರಾಗುತ್ತಿದ್ದಾರೆ. ನಮ್ಮ ಸರ್ಕಾರ ಹಾಲಿನ ಪ್ರತಿ ಲೀ.ಗೆ ರೂ. 5 ಗಳ ಪ್ರೋತ್ಸಾಹಧನ ನೀಡಲಾಗುತ್ತಿದೆ. ಈಗ ಪ್ರೋತ್ಸಾಹ ಧನವನ್ನು ಪ್ರತಿ ಲೀ.ಗೆ 5 ರೂ. ನಿಂದ ಹಿಡಿದು 8 ರೂ.ಗೆ ಹೆಚ್ಚಳ ಮಾಡಿ ನೀಡಲಾಗುತ್ತಿದ್ದು, ಈ ಮೊತ್ತ ರೈತರಿಗೆ ನೇರವಾಗಿ ತಲುಪುತ್ತಿದೆ ಎಂದರು.

ಹಾಲು ಉತ್ಪಾದಕರ ಸಹಕಾರ ಸಂಘದವರು ಹಾಲು ಉತ್ಪಾದನೆ ಜಾಸ್ತಿಯಾಗಿದ್ದು, ಸರ್ಕಾರ ಈ ನಿಟ್ಟಿನಲ್ಲಿ ಸಹಾಯ ಮಾಡಬೇಕೆಂಬ ಬೇಡಿಕೆಯನ್ನು ಸಲ್ಲಿಸಿತ್ತು. ಆದ್ದರಿಂದ ಶಾಲಾ ಮಕ್ಕಳಿಗೆ ಉಚಿತವಾಗಿ ಹಾಲು ನೀಡುವ ಯೋಜನೆಯನ್ನು ಹಮ್ಮಿಕೊಂಡು , ಹಾಲು ಉತ್ಪಾದಕರ ಸಮಸ್ಯೆ ಬಗೆಹರಿಸುವ ಜೊತೆಗೆ ಮಕ್ಕಳ ಪೌಷ್ಟಿಕತೆ ಹೆಚ್ಚಳಕ್ಕೂ ಅನುಕೂಲ ಕಲ್ಪಿಸಲಾಯಿತು ಎಂದರು.

About the Author

The Bengaluru Live

Administrator

Visit Website View All Posts

Post navigation

Previous: DK Vs HDK | ಕುಮಾರಣ್ಣ ಬುದ್ದಿ ಸ್ಥಿಮಿತತೆ ಕಳೆದುಕೊಂಡಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು
Next: Bengaluru Tech Summit 2023 | ಬೆಂಗಳೂರು ಟೆಕ್ ಸಮ್ಮಿಟ್‌ – 2023 ರಲ್ಲಿ ಚಂದ್ರಯಾನ-ಇಸ್ರೋ-ಬಾಹ್ಯಾಕಾಶ ಉದ್ಯಮದ ಪ್ರದರ್ಶನ ಮಳಿಗೆ

Related Stories

ಶಾಲಾ ಕಾರ್ಯಕ್ರಮದಲ್ಲಿ ಬಣ್ಣದ ಕೈಪಿಡಿಗಳನ್ನು ಹಿಡಿದ ಸಮವಸ್ತ್ರದ ಇಬ್ಬರು ವಿದ್ಯಾರ್ಥಿನಿಯರು ಮತ್ತು ಕೆಲವು ಪುರುಷರು
  • ಕರ್ನಾಟಕ
  • ವಿಜಯಪುರ
  • ಶಿಕ್ಷಣ

ಮುಂದಿನ ವರ್ಷದಿಂದ ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಸೂರು; ಪೋಷಕರ ಸಭೆಗಳಿಂದ ಗುಣಮಟ್ಟ ಸುಧಾರಣೆ: ಮಧು ಬಂಗಾರಪ್ಪ

The Bengaluru Live November 14, 2026 10:47 PM
ಮಕ್ಕಳ ವಿಜ್ಞಾನ ಜಾತ್ರೆಯ ವೇದಿಕೆಯಲ್ಲಿ ಅಧಿಕಾರಿಗಳು ಮತ್ತು ಕೇಸರಿ ವಸ್ತ್ರದ ಸ್ವಾಮೀಜಿ ದೀಪ ಬೆಳಗುತ್ತಿರುವುದು
  • ಕರ್ನಾಟಕ
  • ವಿಜಯಪುರ
  • ಶಿಕ್ಷಣ

ಸರ್ಕಾರಿ ಶಾಲೆಗಳಿಗೆ ಸುಮಾರು ₹4,500 ಕೋಟಿ, ಉಚಿತ ಬಸ್, ಎಲ್‌ಕೆಜಿಯಿಂದ ಪಿಯುಸಿವರೆಗೆ ಒಂದೇ ಸೂರು: ತಿಕೋಟಾದಲ್ಲಿ ಮಧು ಬಂಗಾರಪ್ಪ

The Bengaluru Live November 14, 2026 10:30 PM
ವಿಜಯಪುರದಲ್ಲಿ ಪತ್ರಿಕಾಗೋಷ್ಠಿ ನಡೆಸುತ್ತಿರುವ ಎಂ.ಬಿ. ಪಾಟೀಲ್
  • ಕರ್ನಾಟಕ
  • ವಿಜಯಪುರ

ಕೃಷ್ಣಾ ನೀರು ವರ್ಗಾವಣೆ: ಮಹಾರಾಷ್ಟ್ರದ 40 ಟಿಎಂಸಿ ಪ್ರಸ್ತಾವಕ್ಕೆ ಪಾಟೀಲ್ ಪ್ರಶ್ನೆ

The Bengaluru Live November 1, 2026 3:59 PM

Latest Post

ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ ಟೋಕಿಯೊದಲ್ಲಿ ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಅವರೊಂದಿಗೆ ಹಸ್ತಲಾಘವ ಮಾಡುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ

November 25, 2026 10:58 AM
ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ ಮಳೆಯಲ್ಲಿ ರಸ್ತೆಯಲ್ಲಿ ಸಾಗುತ್ತಿರುವ ವಾಹನ ಹಾಗೂ ಕೊಡೆ ಹಿಡಿದ ಮಹಿಳೆ; ಸಾಂದರ್ಭಿಕ ಸಂಗ್ರಹ ಚಿತ್ರ
  • ನಗರ
  • ಬೆಂಗಳೂರು

ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ

November 25, 2026 10:01 AM
ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

November 24, 2026 10:00 PM
ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

November 24, 2026 9:49 PM
ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್ ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

November 24, 2026 9:28 PM
ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ ಜಪಾನ್ ಪ್ರವಾಸದ ವೇಳೆ ರೈಲಿನಲ್ಲಿ ಕುಳಿತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ

November 24, 2026 9:09 PM

ನೀವು ತಪ್ಪಿಸಿಕೊಂಡಿರಬಹುದು

ಟೋಕಿಯೊದಲ್ಲಿ ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಅವರೊಂದಿಗೆ ಹಸ್ತಲಾಘವ ಮಾಡುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ

The Bengaluru Live November 25, 2026 10:58 AM
ಮಳೆಯಲ್ಲಿ ರಸ್ತೆಯಲ್ಲಿ ಸಾಗುತ್ತಿರುವ ವಾಹನ ಹಾಗೂ ಕೊಡೆ ಹಿಡಿದ ಮಹಿಳೆ; ಸಾಂದರ್ಭಿಕ ಸಂಗ್ರಹ ಚಿತ್ರ
  • ನಗರ
  • ಬೆಂಗಳೂರು

ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ

The Bengaluru Live November 25, 2026 10:01 AM
ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ
  • ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ
  • ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ
  • ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ
©Copyright 2025 The Bengaluru Live All rights reserved. | MoreNews by AF themes.