Home ರಾಜಕೀಯ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿರನ್ನು ಹಂದಿಗೆ ಹೋಲಿಸಿದ IPS ಅಧಿಕಾರಿ ಬೆಲೆ ತೆರಬೇಕಾಗುತ್ತೆ: ಪ್ರಹ್ಲಾದ್‌...

ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿರನ್ನು ಹಂದಿಗೆ ಹೋಲಿಸಿದ IPS ಅಧಿಕಾರಿ ಬೆಲೆ ತೆರಬೇಕಾಗುತ್ತೆ: ಪ್ರಹ್ಲಾದ್‌ ಜೋಶಿ

8
0

ಹುಬ್ಬಳ್ಳಿ: ಕೇಂದ್ರ ಸಚಿವರನ್ನು ಹಂದಿಗೆ ಹೋಲಿಸಿದ ಎಡಿಜಿಪಿ ಬೆಲೆ ತೆರಬೇಕಾಗುತ್ತೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಗರಂ ಆಗಿದ್ದಾರೆ.

ಈ ಎಡಿಜಿಪಿಗೆ ಏನಾದರೂ ಸರ್ವೀಸ್ ಕಂಡಕ್ಟ್ ರೂಲ್ ಬಗ್ಗೆ ಜ್ಞಾನವಿದ್ದರೆ ತಕ್ಷಣ ಕ್ಷಮಾಪಣೆ ಕೇಳಲಿ ಎಂದು ಸೂಚಿಸಿದರು. ಒಬ್ಬ ಜನಪ್ರತಿನಿಧಿ, ಅದರಲ್ಲೂ ಕೇಂದ್ರ ಸಚಿವರ ಬಗ್ಗೆ ಹೀಗೆ ಅಸಭ್ಯ ಭಾಷೆಯಲ್ಲಿ, ಕೆಟ್ಟ ಪದ ಬಳಸುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಕೇಡರ್ ಕಂಟ್ರೋಲ್ ಇದನ್ನು ಗಂಭೀರವಾಗಿ ಪರಿಗಣಿಸಲಿದೆ ಎಂದು ತಿಳಿಸಿದರು.

ಎಚ್‌ ಡಿ ಕುಮಾರಸ್ವಾಮಿ ಅವರು ಯಾವತ್ತೂ ಯಾರ ಬಗ್ಗೆಯೂ ಹೀಗೆ ಅಸಭ್ಯ ಭಾಷೆ ಬಳಸಿದವರಲ್ಲ. ಈ ಅಧಿಕಾರಿ ಬಗ್ಗೆಯೂ ಹಾಗೆಲ್ಲ ಏಕವಚನದಲ್ಲಿ ಮಾತನಾಡಿಲ್ಲ ಎಂದು ಪ್ರಹ್ಲಾದ್‌ ಜೋಶಿ ಸ್ಪಷ್ಟಪಡಿಸಿದರು.

ಎಚ್‌ ಡಿ ಕುಮಾರಸ್ವಾಮಿ ಅವರ ಬಗ್ಗೆ ಕೆಟ್ಟ ಪದದಲ್ಲಿ ಸಂಬೋಧನೆ ಮಾಡಿರುವುದು ಅಧಿಕಾರಿಯ ಅಹಂಕಾರದ ಪರಮಾವಧಿಯಾಗಿದ್ದು, ಮುಂದಿನ ದಿನಗಳಲ್ಲಿ ಇದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ಪ್ರಹ್ಲಾದ್‌ ಜೋಶಿ ಎಚ್ಚರಿಸಿದರು.

ಸರ್ಕಾರದ ಆದೇಶವಿದ್ದರೆ ತನಿಖೆ ನಡೆಸಲಿ. ಎಚ್‌ಡಿ ಕುಮಾರಸ್ವಾಮಿ ಆರೋಪ ಮಾಡಿದ್ದರೆ ಗೌರವಯುತ ಭಾಷೆಯಲ್ಲಿ, ಸಭ್ಯ ಪದಗಳಲ್ಲಿ ಸ್ಪಷ್ಟನೆ ಕೊಡಲಿ. ಅದು ಬಿಟ್ಟು ಈ ರೀತಿ ಕೆಟ್ಟದಾಗಿ ಸಂಬೋಧಿಸುವುದು ಯಾವುದೇ ಅಧಿಕಾರಿಗಳಿಗೂ ಶೋಭೆ ತರುವುದಿಲ್ಲ ಎಂದು ಸಚಿವ ಜೋಶಿ ಹೇಳಿದರು.

ಒಬ್ಬ ಜನಪ್ರತಿನಿಧಿ ಬಗ್ಗೆ ಎಡಿಜಿಪಿ ಕೆಟ್ಟ ಪದ ಬಳಸಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ಹಿಡಿದ ಕೈಗನ್ನಡಿ. ಇದು ಕಾಂಗ್ರೆಸ್‌ಗೆ ಮುಳುವಾಗಲಿದೆ. ಕಾಂಗ್ರೆಸ್ ಎಂಥೆಂಥ ಅಧಿಕಾರಿಗಳನ್ನು ಬೆಳೆಸುತ್ತಿದೆಯಲ್ಲ ಎಂದು ಕಿಡಿ ಕಾರಿದರು.

LEAVE A REPLY

Please enter your comment!
Please enter your name here