Home ರಾಜಕೀಯ ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ನೇಮಕಾತಿಯಲ್ಲಿ ಅಕ್ರಮ: 10 ದಿನದೊಳಗೆ ವರದಿ ಸಲ್ಲಿಸುವಂತೆ...

ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ನೇಮಕಾತಿಯಲ್ಲಿ ಅಕ್ರಮ: 10 ದಿನದೊಳಗೆ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಆದೇಶ

301
0
Irregularity in appointment of Assistant Public Prosecutor, Assistant Public Advocate: Chief Minister orders to submit report within 10 days
Irregularity in appointment of Assistant Public Prosecutor, Assistant Public Advocate: Chief Minister orders to submit report within 10 days

ಬೆಂಗಳೂರು:

ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತನಿಖೆಗೆ ಆದೇಶಿಸಿದ್ದಾರೆ.

ಕಳೆದ ವರ್ಷ ಜು.23 ಮತ್ತು 24ರಂದು ನಡೆದ ಸಹಾಯಕ ಸರಕಾರಿ ಅಭಿಯೋಜಕರು, ಸಹಾಯಕ ಸರಕಾರಿ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ಭ್ರಷ್ಟಾಚಾರ ಅಕ್ರಮ ನಡೆದಿರುವ ಕುರಿತು ವ್ಯಾಪಕ ದೂರುಗಳು ಕೇಳಿಬಂದಿದ್ದವು.

ಈ ಸಂಬಂಧ ಸಲ್ಲಿಸಿದ್ದ ದೂರುಗಳನ್ನು ಆಧಾರಿಸಿ ಕೂಡಲೇ ನಿರ್ದಾಕ್ಷಿಣ್ಯವಾದ ಇಲಾಖಾ ತನಿಖೆ ನಡೆಸಿ ತಪ್ಪಿತಸ್ಥರ ವಿವರಗಳೊಂದಿಗೆ 10 ದಿನದೊಳಗೆ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here