Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಮಂಗಳೂರು
  • ಬೆಂಗಳೂರು ಆಚೆ ಐಟಿ ಉದ್ಯಮ ವಿಸ್ತರಣೆ: ಅಶ್ವತ್ಥನಾರಾಯಣ
  • ಮಂಗಳೂರು

ಬೆಂಗಳೂರು ಆಚೆ ಐಟಿ ಉದ್ಯಮ ವಿಸ್ತರಣೆ: ಅಶ್ವತ್ಥನಾರಾಯಣ

The Bengaluru Live February 24, 2021 3:00 PM 1 minute read
ಬೆಂಗಳೂರು ಆಚೆ ಐಟಿ ಉದ್ಯಮ ವಿಸ್ತರಣೆ: ಅಶ್ವತ್ಥನಾರಾಯಣ

ಬೆಂಗಳೂರು ಆಚೆ ಐಟಿ ಉದ್ಯಮ ವಿಸ್ತರಣೆ: ಅಶ್ವತ್ಥನಾರಾಯಣ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

5 ವರ್ಷಗಳಲ್ಲಿ 30 ಲಕ್ಷ ಹೆಚ್ಚುವರಿ ಉದ್ಯೋಗ ಸೃಷ್ಟಿ, ಮಾಹಿತಿ ತಂತ್ರಜ್ಞಾನ ಕ್ಲಸ್ಟರ್‌ ಆಗಿ ಮಂಗಳೂರು ಅಭಿವೃದ್ಧಿ

ಮಂಗಳೂರು:

ರಾಜಧಾನಿ ಬೆಂಗಳೂರಿನಿಂದ ಹೊರಗೆ ಮಾಹಿತಿ ತಂತ್ರಜ್ಞಾನ ಉದ್ಯಮವನ್ನು ವಿಸ್ತರಿಸಲು ದೊಡ್ಡ ಪ್ರಯತ್ನ ಮಾಡುತ್ತಿರುವ ರಾಜ್ಯ ಸರಕಾರವು ಮಂಗಳೂರು ನಗರವನ್ನು ಅತ್ಯಂತ ಪ್ರಮುಖ ಕ್ಲಸ್ಟರ್‌ ಆಗಿ ಗುರುತಿಸಿದೆ ಎಂದು ಐಟಿ-ಬಿಟಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ಮಂಗಳೂರಿನಲ್ಲಿಂದು ಬೆಳಗ್ಗೆ ನಡೆದ ʼಮಂಗಳೂರು ಆವಿಷ್ಕಾರ ಸಮಾವೇಶʼವನ್ನು ಉದ್ಘಾಟಿಸಿ  ಭಾಷಣ ಮಾಡಿದ ಅವರು, ಅನೇಕ ವರ್ಷಗಳಿಂದ ತನ್ನಲ್ಲಿ ಅಡಗಿರುವ ಸಂಪನ್ಮೂಲಗಳಿಂದ ಬೆಂಗಳೂರು ಐಟಿ ನಗರವಾಗಿ ಸಹಜವಾಗಿಯೇ ಬೆಳೆದಿದೆ. ಇದೀಗ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳನ್ನು ಒಳಗೊಂಡಂತೆ ಮಂಗಳೂರನ್ನು ಉದಯೋನ್ಮುಖ ತಂತ್ರಜ್ಞಾನ ಕ್ಲಸ್ಟರ್ ಆಗಿ ಗುರುತಿಸಿದ್ದು, ಅದನ್ನು ವೇಗಗತಿಯಲ್ಲಿ ಮುಂದಕ್ಕೆ ಕೊಂಡಯ್ಯಲಾಗುವುದು ಎಂದರು.

ಮುಂದಿನ ದಿನಗಳಲ್ಲಿ ಐಟಿ ಉದ್ಯಮಗಳ ನೆಲೆಯಾಗುವುದರ ಜತೆಗೆ, ನವೋದ್ಯಮಗಳ ತಾಣವಾಗಿಯೂ ಮಂಗಳೂರು ಹೊರಹೊಮ್ಮಲಿದೆ. ಅದಕ್ಕೆ ಬೇಕಾದ ಎಲ್ಲ ಕ್ರಮಗಳನ್ನು ಸರಕಾರ ಕೈಗೊಳ್ಳುತ್ತಿದೆ ಎಂದು ಡಿಸಿಎಂ ಹೇಳಿದರು.

ಉತ್ತಮ ಪರಿಸರ, ಪ್ರವಾಸೋದ್ಯಮ, ಅತ್ಯುತ್ತಮ ಶೈಕ್ಷಣಿಕ ವ್ಯವಸ್ಥೆ ಮುಂತಾದ ಪೂರಕ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಮಂಗಳೂರು ನಗರವನ್ನು ಆವಿಷ್ಕಾರ ಹಾಗೂ ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ರೂಪಿಸಲಾಗುವುದು ಎಂದರು ಡಿಸಿಎಂ.

Mangalore Mission DCM and Nalin Kateel1

ಐಟಿ ಉದ್ಯಮದ ಜತೆಗೆ ಎಲೆಕ್ಟ್ರಾನಿಕ್‌ ಸಿಸ್ಟಮ್ಸ್‌ ಮತ್ತು ಅಭಿವೃದ್ಧಿ ನಿರ್ವಹಣೆ ಕ್ಷೇತ್ರದಲ್ಲೂ ಮಂಗಳೂರು ನಗರವನ್ನು ಪ್ರಮುಖ ಕ್ಲಸ್ಟರ್‌ ಆಗಿ ನಾವು ಪರಿಗಣಿಸಿದ್ದೇವೆ. ಅಲ್ಲದೆ, ಬೆಂಗಳೂರು ಹೊರಗಿನ ನಮ್ಮ ಯೋಜನೆಗಳ ಮುಖ್ಯ ಭಾಗವಾಗಿದೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

ರಾಜ್ಯದ ಎಲೆಕ್ಟ್ರಾನಿಕ್ಸ್‌, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ ಇಲಾಖೆಗಳು ರಾಜ್ಯಾದ್ಯಂತ ಆವಿಷ್ಕಾರ ಹಬ್‌ಗಳನ್ನು ಸ್ಥಾಪಿಸುತ್ತಿವೆ. ಈ ಪಟ್ಟಿಯಲ್ಲಿ ಮಂಗಳೂರು ಕೂಡ ಇದೆ ಎಂದರು ಉಪ ಮುಖ್ಯಮಂತ್ರಿ.

ಇದರ ಜತೆಗೆ ಮಂಗಳೂರು ಸೇರಿದಂತೆ ರಾಜ್ಯದ ಐದು ನಗರಗಳಲ್ಲಿ ಸಿಐಎಫ್‌ ವ್ಯವಸ್ಥೆ ಮಾಡಲಾಗಿದ್ದು, ಓ ಪಟ್ಟಿಯಲ್ಲಿ ಶಿವಮೊಗ್ಗ, ಬೆಳಗಾವಿ, ಮೈಸೂರು ಹಾಗೂ ಬೆಂಗಳೂರು ನಗರಗಳೂ ಇವೆ. ವ್ಯವಸ್ಥೆಯೂ ಕ್ಲಸ್ಟರ್‌ಗಳ ಅಭಿವೃದ್ಧಿಗೆ ಪೂರಕವಾಗ ಕೆಲಸ ಮಾಡುತ್ತವೆ ಎಂದು ಡಿಸಿಎಂ ನುಡಿದರು.

ಡಿಜಿಟಲ್‌ ಎಕಾನಮಿ ಮಿಷನ್:‌

ಬೆಂಗಳೂರಿನ ಆಚೆಗಿನ ಪ್ರದೇಶಗಳಲ್ಲಿ ಆವಿಷ್ಕಾರ ಮತ್ತು ತಂತ್ರಜ್ಞಾನದ ಬೆಳವಣಿಗೆಯನ್ನು ಉತ್ತೇಜಿಸಲು, ಡಿಜಿಟಲ್ ಉದ್ಯಮವನ್ನು ಪ್ರೋತ್ಸಾಹಿಸಲು ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ರಚಿಸಿಸಲಾಗಿದೆ. ಉದ್ಯಮಗಳ ಬೆಳವಣಿಗೆ- ಹೂಡಿಕೆಗಳನ್ನು ಆಕರ್ಷಿಸಿ ತಂತ್ರಜ್ಞಾನ ಉದ್ಯಮವನ್ನು ಮುನ್ನಡೆಸುವ ನಿಟ್ಟಿನಲ್ಲಿ ಈ ಸಂಸ್ಥೆ ಕೆಲಸ ಮಾಡುತ್ತದೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

ಆವಿಷ್ಕಾರ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ರಾಜ್ಯದ ಆರ್ಥಿಕ ಶಕ್ತಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಈ ಮಿಷನ್‌ ಕೆಲಸ ಮಾಡುತ್ತದೆ. ಈ ಮೂಲಕ ನಮ್ಮ ರಾಜ್ಯದ ಜಿಎಸ್‌ಡಿಪಿಯನ್ನು 30% ಹೆಚ್ಚಿಸುವ ಹಾಗೂ ಮುಂದಿನ 5 ವರ್ಷಗಳಲ್ಲಿ 30 ಲಕ್ಷ ಹೆಚ್ಚುವರಿ ಉದ್ಯೋಗಗಳನ್ನು ಸೃಷ್ಟಿ ಮಾಡುವ ಕಾರ್ಯಸೂಚಿಯೊಂದಿಗೆ ಅದು ಕೆಲಸ ಮಾಡುತ್ತಿದೆ. ಅಲ್ಲದೆ, ಮುಂದಿನ ಐದು ವರ್ಷಗಳಲ್ಲಿ ಕರ್ನಾಟಕದ ಐಟಿ ರಫ್ತು ವಹಿವಾಟು 150 ಬಿಲಿಯನ್ ಡಾಲರ್‌ ಮೀರುವ ಗುರಿಯನ್ನು ಹಾಕಿಕೊಳ್ಳಲಾಗಿದೆ ಎಂದರು ಉಪ ಮುಖ್ಯಮಂತ್ರಿ.

ಆವಿಷ್ಕಾರ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಕರ್ನಾಟಕವು ಜಾಗತಿಕ ಮಟ್ಟದಲ್ಲಿ ದಾಪುಗಾಲು ಇಡುತ್ತಿದ್ದು, ವಿಶ್ವಶಕ್ತಿಯಾಗಿ ಹೊರಹೊಮ್ಮುವ ಎಲ್ಲ ಸಾಮರ್ಥ್ಯವೂ ನಮ್ಮ ರಾಜ್ಯಕ್ಕಿದೆ ಎಂದ ಅವರು; ಇವತ್ತು ಎಲ್ಲರೂ ಡಿಜಿಟಲ್‌ ಕೃಷಿಯ ಬಗ್ಗೆಯೂ ಮಾತನಾಡುತ್ತಿದ್ದಾರೆ. ರಾಜ್ಯವೂ ಈ ನಿಟ್ಟಿನಲ್ಲಿ ವೇಗಗತಿಯಲ್ಲಿ ಸಾಗುತ್ತಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಕೂಡ ಪೂರಕವಾಗಿದೆ ಎಂದರು.

ನಮ್ಮ #BeyondBengaluru ದೂರದೃಷ್ಟಿ ಯೋಜನೆಯಲ್ಲಿ 'ಮಂಗಳೂರು ಕ್ಲಸ್ಟರ್' ಕೂಡಾ ಉದಯೋನ್ಮುಖ ಕ್ಷೇತ್ರವಾಗಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಕೊಡಗು ಜಿಲ್ಲೆಗಳನ್ನು ಒಳಗೊಂಡಿದೆ. ಇಲ್ಲಿನ ಯುವಜನತೆಯ ಆಕಾಂಕ್ಷೆಗಳಿಗೆ ತಕ್ಕಂತೆ ಆವಿಷ್ಕಾರ, ತಂತ್ರಜ್ಞಾನ ಕ್ಷೇತ್ರಗಳ ಸಮೃದ್ಧಿಗೆ ಸರ್ಕಾರದ ಬೆಂಬಲ ಸದಾ ಇರಲಿದೆ.@nalinkateel pic.twitter.com/aTrJm05A7t

— Dr. Ashwathnarayan C. N. (@drashwathcn) February 24, 2021

ಸಂಸ್ಕೃತಿ, ಪರಂಪರೆಗೆ ಧಕ್ಕೆ ಆಗದಿರಲಿ: ಕಟೀಲ್‌

ಸಮಾವೇಶದ ಅಧ್ಯಕ್ಷತೆ ವಹಿಸಿ ಮತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಮಂಗಳೂರು ಸಂಸದ ನಳೀನ್‌ ಕುಮಾರ್‌ ಕಟೀಲ್‌ ಅವರು; ರಾಜ್ಯ ಕರಾವಳಿಯ ಮಹತ್ವದ ನಗರವಾದ ಮಂಗಳೂರಿನಲ್ಲಿ ಹೆಚ್ಚೆಚ್ಚು ಉದ್ಯೋಗಾವಕಾಶ ಸೃಷ್ಟಿಯಾಗಬೇಕು, ಉದ್ಯಮಗಳು ಬರಬೇಕು, ಆರ್ಥಿಕ ಚಟುವಟಿಕೆಗಳು ಹೆಚ್ಚಬೇಕು. ಆದರೆ, ಇವೆಲ್ಲವೂ ಮಂಗಳೂರಿನ ಸಂಸ್ಕೃತಿ ಮತ್ತು ಪರಂಪರೆಗೆ ಧಕ್ಕೆಯಾಗದಂತೆ ಆಗಬೇಕು ಎಂದು ಸಲಹೆ ಮಾಡಿದರು.

ಬೆಂಗಳೂರು ಸಾಕಷ್ಟು ಅಭಿವೃದ್ಧಿಯಾಗಿದೆ. ಆದರೆ, ಅಲ್ಲಿ ಮೂಲ ನಿವಾಸಿಗಳನ್ನು ಹುಡಕಬೇಕಾಗಿದೆ. ಅಲ್ಲಿ ಅಪ್ಪಟ ಕನ್ನಡಿಗರನ್ನು ಬಿಟ್ಟು ಉಳಿದ ಎಲ್ಲರೂ ತುಂಬಿಹೋಗಿದ್ದಾರೆ. ಮಂಗಳೂರಿಗೆ ಇಂಥ ಸ್ಥಿತಿ ಬರಬಾರದು. ಮಂಗಳೂರಿಗರನ್ನು ಉಳಿಸಿಕೊಂಡೇ ಮಂಗಳೂರು ಬೆಳೆಯಬೇಕು ಎಂದು ಕಟೀಲ್‌ ಅವರು ಹೇಳಿದರು.

ಈ ಹಿನ್ನೆಲೆಯಲ್ಲಿ ಇಲ್ಲಿನ ಶಿಕ್ಷಣ ತಜ್ಞರು, ಕೈಗಾರಿಕೋದ್ಯಮಿಗಳು, ಅಧಿಕಾರಿಗಳು ಹಾಗೂ ರಾಜಕೀಯ ನಾಯಕರನ್ನು ಒಳಗೊಂಡಂತೆ ಒಂದು ದೊಡ್ಡ ಚರ್ಚೆಯೂ ಆಗಲಿ. ಮಂಗಳೂರಿನಲ್ಲಿ 2023ರ ಹೊತ್ತಿಗೆ ವಾರ್ಷಿಕ 7,500 ಕೋಟಿ ರೂ. ಐಟಿ ವಹಿವಾಟು ನಡೆಸುವಷ್ಟು ಅನುಕೂಲವಿದೆ ಎಂದು ಒಂದು ಸಮೀಕ್ಷೆ ಹೇಳಿದೆ. ಮುಂದಿನ ದಿನಗಳಲ್ಲಿ ಮಂಗಳೂರಿಗೆ ಹೆಚ್ಚೆಚ್ಚು ಉದ್ಯಮಗಳು ಬರಲಿ, ಆ ಉದ್ಯಮಗಳಿಗೆ ಏಕಗವಾಕ್ಷಿ ವ್ಯವಸ್ಥೆ ಮೂಲಕ ಅಲ್ಲ ಒಪ್ಪಿಗೆಗಳನ್ನು ನೀಡಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಕಿಯೋನಿಕ್ಸ್‌ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್‌, ಐಟಿ ಬಿಟಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ, ಸಿಸಿಐ ಅಧ್ಯಕ್ಷ ಸ್ಟೀವನ್‌ ಡೇವಿಡ್‌, ಕಿಯೋನಿಕ್ಸ್‌ ವ್ಯವಸ್ಥಾಪಕ ನಿರ್ದೇಶಕ ಎಸ್.ಎನ್.‌ ಸಿದ್ದರಾಮಪ್ಪ ಮುಂತಾದವುರ ಸಮಾವೇಶದಲ್ಲಿ ಬಾಗಿಯಾಗಿದ್ದರು. ಬಳಿಕ ಕೆಲವಾರು ಚರ್ಚಾಗೋಷ್ಠಿಗಳು ನಡೆದವು.\

ವಿದ್ಯಾರ್ಥಿ ದಿನಗಳನ್ನು ನೆನೆದ ಡಿಸಿಎಂ

ಮಂಗಳೂರಿನಲ್ಲಿ ತಮ್ಮ ವಿದ್ಯಾರ್ಥಿ ದಿಗಳಗಳನ್ನು ಮೆಲುಕು ಹಾಕಿದ ಡಿಸಿಎಂ ಡಾ.ಅಶ್ವತ್ಥನಾರಾಯಣ ಅವರು; ನನ್ನ ಜೀವನದಲ್ಲಿ ಬಹಳ ಮುಖ್ಯ ಪಾತ್ರ ವಹಿಸಿದ್ದ ಜಾಗಗಳಲ್ಲಿ ಮಂಗಳೂರು ಕೂಡ ಒಂದು. ಈ ಊರಿನ ಋಣ ನನ್ನ ಮೇಲಿದೆ. ಅದೇ ರೀತಿ ಈ ನಗರವನ್ನು ಅಭಿವೃದ್ಧಿಗೊಳಿಸಬೇಕಾದ ಹೊಣೆಗಾರಿಕೆಯೂ ನನ್ನ ಮೇಲಿದೆ. ಇಲ್ಲಿ ಅವಕಾಶಗಳಿಗೆ ಅಂತ್ಯ ಎಂಬುದೇ ಇಲ್ಲ. ಈ ನಗರವು ಅವಕಾಶಗಳ ಹೆಬ್ಬಾಗಿಲು ಎಂದು ಹೇಳಿದರು.

About the Author

The Bengaluru Live

Administrator

Visit Website View All Posts

Post navigation

Previous: ‘ಪೊಗರು’ ಚಿತ್ರದ ಆಕ್ಷೇಪಾರ್ಹ ದೃಶ್ಯಗಳಿಗೆ ಕತ್ತರಿ ಹಾಕಲೇಬೇಕು
Next: ಅರಣ್ಯಪ್ರದೇಶದಲ್ಲಿ ಹಣ್ಣಿನ ಮರಗಳನ್ನು ಹೆಚ್ಚು ಬೆಳೆಸಿ- ಯಡಿಯೂರಪ್ಪ

Related Stories

ಸಿಎಂ ದಿಢೀರ್ ಭೇಟಿಯ ವೇಳೆ ಮಂಗಳೂರು ಮೀನುಗಾರಿಕಾ ಬಂದರಿನಲ್ಲಿ ವ್ಯಾಪಾರ ಸ್ಥಗಿತ; ವರದಿಗೆ ಡಿ.ಕೆ. ಶಿವಕುಮಾರ್ ಆದೇಶ, ಅಧಿಕಾರಿಗಳ ಅಮಾನತು ಎಚ್ಚರಿಕೆ
  • ಮಂಗಳೂರು

ಸಿಎಂ ದಿಢೀರ್ ಭೇಟಿಯ ವೇಳೆ ಮಂಗಳೂರು ಮೀನುಗಾರಿಕಾ ಬಂದರಿನಲ್ಲಿ ವ್ಯಾಪಾರ ಸ್ಥಗಿತ; ವರದಿಗೆ ಡಿ.ಕೆ. ಶಿವಕುಮಾರ್ ಆದೇಶ, ಅಧಿಕಾರಿಗಳ ಅಮಾನತು ಎಚ್ಚರಿಕೆ

The Bengaluru Live September 19, 2026 6:17 PM
ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು’ ಎಂದು ಮರುನಾಮಕರಣ ಪ್ರಸ್ತಾವ; ಕರಡು ಅಧಿಸೂಚನೆ ಹೊರಡಿಸಿ ಒಂದು ತಿಂಗಳು ಜನಾಭಿಪ್ರಾಯ ಸಂಗ್ರಹಿಸಲು ಸರ್ಕಾರ ನಿರ್ಧಾರ
  • ಮಂಗಳೂರು

ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು’ ಎಂದು ಮರುನಾಮಕರಣ ಪ್ರಸ್ತಾವ; ಕರಡು ಅಧಿಸೂಚನೆ ಹೊರಡಿಸಿ ಒಂದು ತಿಂಗಳು ಜನಾಭಿಪ್ರಾಯ ಸಂಗ್ರಹಿಸಲು ಸರ್ಕಾರ ನಿರ್ಧಾರ

The Bengaluru Live September 18, 2026 6:19 PM
ಸಚಿವರು ಮತ್ತು ಅಧಿಕಾರಿಗಳು ಭಾಗವಹಿಸಿರುವ ಕರ್ನಾಟಕ ಸಚಿವ ಸಂಪುಟ ಸಭೆಯ ಸಂಗ್ರಹಿತ ಚಿತ್ರ
  • ಮಂಗಳೂರು

ಉಡುಪಿ, ದಕ್ಷಿಣ ಕನ್ನಡದಲ್ಲಿ ತುಳು ಹೆಚ್ಚುವರಿ ಆಡಳಿತ ಭಾಷೆ; ಮಂಗಳೂರು ಸಂಪುಟ ಸಭೆಯಲ್ಲಿ ₹32,611 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ

The Bengaluru Live September 18, 2026 6:11 PM

Latest Post

ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ ಹೆಣ್ಣೂರು–ಬಾಗಲೂರು ರಸ್ತೆಯಲ್ಲಿ ಹೊಸದಾಗಿ ಹಾಕಿದ ಕಾಂಕ್ರೀಟ್ ಪಕ್ಕದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು.
  • ಬೆಂಗಳೂರು ನಗರ

ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ

November 11, 2026 1:28 AM
ಬಿಹಾರ ಕಾರ್ಟ್ರಿಡ್ಜ್ ವಶ ಪ್ರಕರಣದ ಚಿತ್ರಕ್ಕೆ ಆಕ್ಷೇಪ: ಪ್ರಿಯಾಂಕ್ ಖರ್ಗೆ ವಿರುದ್ಧ ತೇಜಸ್ವಿ ಸೂರ್ಯ, ಗಿರೀಶ್ ಭಾರದ್ವಾಜ್ ವಾಗ್ದಾಳಿ ಕೊಚ್ಚಿಯ ಮುಸ್ಲಿಂ ಯೂತ್ ಲೀಗ್ ರ‍್ಯಾಲಿಯಲ್ಲಿ ವೇದಿಕೆಯಲ್ಲಿ ಸಂವಿಧಾನದ ಪ್ರತಿ ಹಿಡಿದು ಮಾತನಾಡುತ್ತಿರುವ ಪ್ರಿಯಾಂಕ್ ಖರ್ಗೆ
  • ಕರ್ನಾಟಕ
  • ರಾಜಕೀಯ

ಬಿಹಾರ ಕಾರ್ಟ್ರಿಡ್ಜ್ ವಶ ಪ್ರಕರಣದ ಚಿತ್ರಕ್ಕೆ ಆಕ್ಷೇಪ: ಪ್ರಿಯಾಂಕ್ ಖರ್ಗೆ ವಿರುದ್ಧ ತೇಜಸ್ವಿ ಸೂರ್ಯ, ಗಿರೀಶ್ ಭಾರದ್ವಾಜ್ ವಾಗ್ದಾಳಿ

November 11, 2026 1:14 AM
ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್ ಎತ್ತರಿಸಿದ ಹಳಿಗಳ ಮೇಲೆ ಸಾಗುತ್ತಿರುವ ನಮ್ಮ ಮೆಟ್ರೋ ರೈಲು
  • ಬೆಂಗಳೂರು ನಗರ
  • ಕರ್ನಾಟಕ

ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್

November 11, 2026 12:25 AM
ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ ವಿಧಾನಸೌಧದಲ್ಲಿ ಮಧ್ಯಂತರ ಬರ ಪರಿಹಾರ ಪಾವತಿಗೆ ಚಾಲನೆ ನೀಡಿದ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ

November 10, 2026 11:27 PM
ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು ಡಾ. ಸಮೀಕ್ಷಾ ರೆಡ್ಡಿ ಅವರ ಭಾವಚಿತ್ರ ಮತ್ತು ಬನ್ನೇರುಘಟ್ಟದಲ್ಲಿ ನೀರಾನೆ ಮರಿಯ ಸಮೀಕ್ಷಾ ನಾಮಫಲಕದ ಬಳಿಯ ಸಂದರ್ಶಕರು
  • ಕರ್ನಾಟಕ
  • ಬೆಂಗಳೂರು ನಗರ

ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು

November 10, 2026 10:14 PM
ನ.13ರಂದು ಬೆಂಗಳೂರಿನಲ್ಲಿ ₹160 ಕೋಟಿ ವೆಚ್ಚದ ಸಂಕುಚಿತ ಜೈವಿಕ ಅನಿಲ ಘಟಕಕ್ಕೆ ಪ್ರಧಾನಿ ಮೋದಿ ವರ್ಚುವಲ್ ಶಿಲಾನ್ಯಾಸ ಪರಿಶೀಲನೆಯ ವೇಳೆ ಜೈವಿಕ ಅನಿಲ ಘಟಕದಲ್ಲಿ ಹಸಿರು ಚೌಕಟ್ಟಿನ ಗ್ಯಾಸ್ ಸಿಲಿಂಡರ್‌ಗಳ ಸುತ್ತ ನಿಂತಿರುವ ಪುರುಷರು
  • ಬೆಂಗಳೂರು

ನ.13ರಂದು ಬೆಂಗಳೂರಿನಲ್ಲಿ ₹160 ಕೋಟಿ ವೆಚ್ಚದ ಸಂಕುಚಿತ ಜೈವಿಕ ಅನಿಲ ಘಟಕಕ್ಕೆ ಪ್ರಧಾನಿ ಮೋದಿ ವರ್ಚುವಲ್ ಶಿಲಾನ್ಯಾಸ

November 10, 2026 5:55 PM

ನೀವು ತಪ್ಪಿಸಿಕೊಂಡಿರಬಹುದು

ಹೆಣ್ಣೂರು–ಬಾಗಲೂರು ರಸ್ತೆಯಲ್ಲಿ ಹೊಸದಾಗಿ ಹಾಕಿದ ಕಾಂಕ್ರೀಟ್ ಪಕ್ಕದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು.
  • ಬೆಂಗಳೂರು ನಗರ

ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ

The Bengaluru Live November 11, 2026 1:28 AM
ಕೊಚ್ಚಿಯ ಮುಸ್ಲಿಂ ಯೂತ್ ಲೀಗ್ ರ‍್ಯಾಲಿಯಲ್ಲಿ ವೇದಿಕೆಯಲ್ಲಿ ಸಂವಿಧಾನದ ಪ್ರತಿ ಹಿಡಿದು ಮಾತನಾಡುತ್ತಿರುವ ಪ್ರಿಯಾಂಕ್ ಖರ್ಗೆ
  • ಕರ್ನಾಟಕ
  • ರಾಜಕೀಯ

ಬಿಹಾರ ಕಾರ್ಟ್ರಿಡ್ಜ್ ವಶ ಪ್ರಕರಣದ ಚಿತ್ರಕ್ಕೆ ಆಕ್ಷೇಪ: ಪ್ರಿಯಾಂಕ್ ಖರ್ಗೆ ವಿರುದ್ಧ ತೇಜಸ್ವಿ ಸೂರ್ಯ, ಗಿರೀಶ್ ಭಾರದ್ವಾಜ್ ವಾಗ್ದಾಳಿ

The Bengaluru Live November 11, 2026 1:14 AM
ಎತ್ತರಿಸಿದ ಹಳಿಗಳ ಮೇಲೆ ಸಾಗುತ್ತಿರುವ ನಮ್ಮ ಮೆಟ್ರೋ ರೈಲು
  • ಬೆಂಗಳೂರು ನಗರ
  • ಕರ್ನಾಟಕ

ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್

The Bengaluru Live November 11, 2026 12:25 AM
ವಿಧಾನಸೌಧದಲ್ಲಿ ಮಧ್ಯಂತರ ಬರ ಪರಿಹಾರ ಪಾವತಿಗೆ ಚಾಲನೆ ನೀಡಿದ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ

The Bengaluru Live November 10, 2026 11:27 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ
  • ಬಿಹಾರ ಕಾರ್ಟ್ರಿಡ್ಜ್ ವಶ ಪ್ರಕರಣದ ಚಿತ್ರಕ್ಕೆ ಆಕ್ಷೇಪ: ಪ್ರಿಯಾಂಕ್ ಖರ್ಗೆ ವಿರುದ್ಧ ತೇಜಸ್ವಿ ಸೂರ್ಯ, ಗಿರೀಶ್ ಭಾರದ್ವಾಜ್ ವಾಗ್ದಾಳಿ
  • ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್
  • ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ
©Copyright 2025 The Bengaluru Live All rights reserved. | MoreNews by AF themes.