Home ರಾಜಕೀಯ ಇದೆಲ್ಲ ಷಡ್ಯಂತ್ರ, ಓಡಿ ಹೋಗಲ್ಲ, ಎಫ್‌ಐಆರ್ ನಂತರ ಎಚ್‌ಡಿ ರೇವಣ್ಣ ಅವರ ಮೊದಲ ಪ್ರತಿಕ್ರಿಯೆ

ಇದೆಲ್ಲ ಷಡ್ಯಂತ್ರ, ಓಡಿ ಹೋಗಲ್ಲ, ಎಫ್‌ಐಆರ್ ನಂತರ ಎಚ್‌ಡಿ ರೇವಣ್ಣ ಅವರ ಮೊದಲ ಪ್ರತಿಕ್ರಿಯೆ

22
0
HD Revanna

ಬೆಂಗಳೂರು: ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ಸರಗಳ್ಳತನ ಮತ್ತು ಕಿರುಕುಳ ಪ್ರಕರಣದಲ್ಲಿ ಪ್ರಾಥಮಿಕ ಶಂಕಿತ ಆರೋಪಿಯಾಗಿದ್ದಾರೆ. ಈ ಆರೋಪಗಳಿಗೆ ಪ್ರತಿಕ್ರಿಯೆಯಾಗಿ, ರೇವಣ್ಣ ಮೊದಲ ಬಾರಿಗೆ ಸಾರ್ವಜನಿಕವಾಗಿ ಪರಿಸ್ಥಿತಿಯನ್ನು ಪ್ರಸ್ತಾಪಿಸಿದ್ದಾರೆ. “ಇದೆಲ್ಲಾ ಷಡ್ಯಂತ್ರ, ಇದಕ್ಕೆಲ್ಲಾ ಹೆದರಿ ಓಡಿ ಹೋಗಲ್ಲ. ಕಾನೂನು ಹೋರಾಟ ಮಾಡ್ತಿನಿ,” ಎಂದು ರೇವಣ್ಣ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಜ್ವಲ್ ರೇವಣ್ಣ ಮತ್ತು ಹೆಚ್.ಡಿ ರೇವಣ್ಣ ವಿರುದ್ಧ ದೂರು ದಾಖಲಾಗಿದೆ. ಅದರನ್ವಯ ಎಫ್‌ಐಆರ್‌ನಲ್ಲಿ ಹೆಚ್.ಡಿ.ರೇವಣ್ಣ ಎ1 ಮತ್ತು ಪ್ರಜ್ವಲ್ ರೇವಣ್ಣ ಎ2 ಆರೋಪಿಯಾಗಿದ್ದಾರೆ. ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ದೂರು ದಾಖಲಿಸಿದ್ದಾರೆ.

ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ ಅವರು, ನಾಲ್ಕೈದು ವರ್ಷದ ಕಥೆ ತಂದು ಈಗ ದೂರು ಕೊಟ್ರೆ ಏನರ್ಥ ಎಂದಿದ್ದಾರೆ. ಇದೆಲ್ಲಾ ಷಡ್ಯಂತ್ರ, ಇದಕ್ಕೆಲ್ಲಾ ಹೆದರಿ ಓಡಿ ಹೋಗಲ್ಲ. ಕಾನೂನು ಹೋರಾಟ ಮಾಡ್ತಿನಿ. ನನ್ನ ವಿರುದ್ಧ ನೀಡಿದ ದೂರಿನ ಬಗ್ಗೆ, ಯಾವುದೇ ಪ್ರತಿಕ್ರಿಯೆ ಕೊಡಲ್ಲ. ಸರ್ಕಾರ ಎಸ್‌ಐಟಿಗೆ ವಹಿಸಿದೆಯಲ್ಲಾ, ಎಸ್‌ಐಟಿ ತನಿಖೆ ಮಾಡಲಿ ಎಂದು ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ವಿದೇಶ ಪ್ರಯಾಣ ಮೊದಲೇ ನಿರ್ಧಾರವಾಗಿತ್ತು. ಎಫ್‌ಐಆರ್ ಹಾಕ್ತಾರೆ ಅನ್ನೋದು ಗೊತ್ತಿರಲಿಲ್ಲ. ತನಿಖೆಗೆ ಕರೆದರೆ ಅವನೂ ಬರ‍್ತಾನೆ. ದೇವೇಗೌಡರ ಕುಟುಂಬದ ವಿರುದ್ಧ ಷಡ್ಯಂತ್ರ ಹೊಸದಲ್ಲ. ಇಂತಹ ಹಲವು ತನಿಖೆ ನಾವು ಎದುರಿಸಿದ್ದೇವೆ. ದೇವೇಗೌಡರ ಮೇಲೆ ಸಿಒಡಿ ತನಿಖೆ ನಡೆಸಿದ್ದರು, ನಾನು ದೇವೇಗೌಡರ ಬಳಿ ಈ ವಿಷಯ ಮಾತನಾಡಿಲ್ಲ. ಕಾನೂನು ರೀತಿ ಏನಿದೆ ಅದು ನಡೆಯಲಿ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here