File Image of Jagadish Shettar with DK Shivakumar, Siddaaramaiah during filing his Nomination Paper as MLC.
ನವದೆಹಲಿ:
ಕಾಂಗ್ರೆಸ್ ಪಕ್ಷದಿಂದ ಮತ್ತೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ಬಳಿಕ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ಅವರು ಮಾತನಾಡಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಸಂದರ್ಭದಲ್ಲಿ ಅವರು ಕೂಡ ಒಳ್ಳೆಯ ರೀತಿಯಲ್ಲಿ ಗೌರವ ಸ್ಥಾನ-ಮಾನವನ್ನು ಕೊಟ್ಟಿದ್ದಾರೆ ಎಂದರು. ಇಲ್ಲಿಯವರೆಗೆ ಸಹಕಾರ ಕೊಟ್ಟಿದಕ್ಕಾಗಿ ಡಿ.ಕೆ ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಈ ಸಂದರ್ಭದಲ್ಲಿ ಜಗದೀಶ್ ಶೆಟ್ಟರ್ ಧನ್ಯವಾದಗಳನ್ನು ತಿಳಿಸಿದ್ದಾರೆ.
ಇನ್ನೂ ಎಂಎಲ್‌ಸಿ ಸ್ಥಾನಕ್ಕೆ ಇ-ಮೇಲ್ ಮೂಲಕ ರಾಜೀನಾಮೆ ಸಲ್ಲಿಕೆ ಮಾಡಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೂ ರಾಜೀನಾಮೆ ಸಲ್ಲಿಸಿದ್ದೇನೆ. 8-9 ತಿಂಗಳಿನಿಂದಲೂ ಕಾಂಗ್ರೆಸ್ಸಲ್ಲಿ ಸಾಕಷ್ಟು ಒತ್ತಡವಿತ್ತು. ಇದೀಗ ನಾನು ಬಿಜೆಪಿ ಮರು ಸೇರ್ಪಡೆಯಾಗಿದ್ದಕ್ಕೆ ಬಹಳ ಸಂತಸವಾಗಿದೆ ಎಂದು ಹೇಳಿದರು.
ಬಿಜೆಪಿಯಿಂದ ಅಸಮಾಧಾನಗೊಂಡಿದ್ದ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್‌ಗೆ ಸೇರಿದ್ದರು. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಇದೀಗ ಮತ್ತೆ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇಂದು ದೆಹಲಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಜೊತೆಯಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿ ಸುದೀರ್ಘವಾದ ಚರ್ಚೆ ನಡೆಸಿದರು. ಈ ವೇಳೆ ಹಾವೇರಿ ಅಥವಾ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಒಂದು ಕ್ಷೇತ್ರಕ್ಕೆ ಟಿಕೆಟ್ ಕೊಡಿಸುವ ಭರವಸೆಯನ್ನು ಹೈಕಮಾಂಡ್ ನೀಡಿದೆ.
