Home ರಾಜಕೀಯ ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ

ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ

19
0
Jagadish Shettar files Nomination Paper
File Image of Jagadish Shettar with DK Shivakumar, Siddaaramaiah during filing his Nomination Paper as MLC.

ಬೆಂಗಳೂರು:

ರಾಜ್ಯ‌ ವಿಧಾನಸಭೆ ಸದಸ್ಯರಿಂದ ವಿಧಾನಪರಿಷತ್ ನ ಖಾಲಿ ಇರುವ ಮೂರು ಸ್ಥಾನಗಳಿಗೆ ಜೂನ್ 30 ರಂದು ನಡೆಯಲಿರುವ ಚುನಾವಣೆಗೆ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಇಂದು ನಾಮಪತ್ರ ಸಲ್ಲಿಸಿದರು.

ವಿಧಾನಸಭೆಯ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಶ್ರೀಮತಿ ಎಂ.ಕೆ.ವಿಶಾಲಾಕ್ಷಿ ಅವರು ನಾಮಪತ್ರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಚಿವರಾದ ಎಂ.ಬಿ.ಪಾಟೀಲ್ ಅವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here