ಹೊಸದಿಲ್ಲಿ:
ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ಮತ್ತೆ ಬಿಜೆಪಿ ಸೇರಿದ್ದಾರೆ.
ಇಂದು ದಿಲ್ಲಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa), ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಹಾಗೂ ಜಗದೀಶ್ ಶೆಟ್ಟರ್ ಅವರು ದೆಹಲಿಯಲ್ಲಿನ ಅಮಿತ್ ಶಾ (Amit Shah) ನಿವಾಸದಲ್ಲಿ ಇಂದು ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ವೇಳೆ ಶೆಟ್ಟರ್ ಮನವೋಲಿಸುವಲ್ಲಿ ಅಮಿತ್ ಶಾ ಯಶಸ್ವಿಯಾಗಿದ್ದು, ಪಕ್ಷಕ್ಕೆ ಮರಳಲು ಶೆಟ್ಟರ್ ಒಪ್ಪಿಗೆ ಸೂಚಿಸಿದ್ದಾರೆ. ನಂತರ ದಿಲ್ಲಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಜಗದೀಶ್ ಶೆಟ್ಟರ್ ಬಿಜೆಪಿಗೆ ಸೇರಿದ್ದಾರೆ.
ನಂತರ ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗಿದ್ದಾರೆ. ದೆಹಲಿಯ ಬಿಜೆಪಿ ಕಚೇರಿಯಲ್ಲಿ ಜೆ.ಪಿ.ನಡ್ಡಾರನ್ನು ಭೇಟಿಯಾಗಿ ಚರ್ಚೆ ನಡೆಸುತ್ತಿದ್ದಾರೆ.
ಜಗದೀಶ್ ಶೆಟ್ಟರ್ ವಿಧಾನ ಪರಿಷತ್ ಸದಸ್ಯರಾಗಿರುವ ಹಿನ್ನೆಲೆ ವಿಧಾನ ಪರಿಷತ್ ಸಭಾಪತಿ ಹೊರಟ್ಟಿ ಅವರಿಗೆ ಶೆಟ್ಟರ್ ದೂರವಾಣಿ ಕರೆ ಮಾಡಿ ರಾಜೀನಾಮೆ ನೀಡುವ ಬಗ್ಗೆ ಮಾತುಕತೆ ನಡೆಸಿದ್ದಾರೆ.
Former Karnataka CM Shri @JagadishShettar joins BJP at party headquarters in New Delhi. #JoinBJP https://t.co/inNAusZgeC
— BJP (@BJP4India) January 25, 2024
“ಕರ್ನಾಟಕ ವಿಧಾನಪರಿಷತ್ತು ಸದಸ್ಯತ್ವಕ್ಕೆ ಈ ದಿನ ನಾನು ನನ್ನ ಸ್ವ-ಇಚ್ಛೆಯಿಂದ ರಾಜೀನಾಮೆ ಸಲ್ಲಿಸಿದ್ದೇನೆ. ನನ್ನ ರಾಜೀನಾಮೆಯನ್ನು ಸ್ವೀಕರಿಸಿಬೇಕಾಗಿ ವಿನಂತಿ. ಇಲ್ಲಿಯವರೆಗೆ ತಾವು ನೀಡಿದ ಸಹಕಾರಕ್ಕಾಗಿ ವಂದನೆಗಳು,” ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಸ್ಪೀಕರ್ ಬಸವರಾಜ ಹೊರಟ್ಟಿ ಅವರಿಗೆ ಬರೆದ ತಮ್ಮ ಇ-ಮೇಲ್ ಮೂಲಕ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.