Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಆರೋಗ್ಯ
  • ಕಲ್ಯಾಣ ಕರ್ನಾಟಕದಲ್ಲಿ ಕಣ್ಣು ತೆರೆಯುತ್ತಿರುವ ಜಯದೇವ
  • ಆರೋಗ್ಯ
  • ಕರ್ನಾಟಕ
  • ಕಲಬುರ್ಗಿ
  • ಬೆಂಗಳೂರು ನಗರ

ಕಲ್ಯಾಣ ಕರ್ನಾಟಕದಲ್ಲಿ ಕಣ್ಣು ತೆರೆಯುತ್ತಿರುವ ಜಯದೇವ

The Bengaluru Live December 21, 2024 4:46 PM 1 minute read
ಕಲ್ಯಾಣ ಕರ್ನಾಟಕದಲ್ಲಿ ಕಣ್ಣು ತೆರೆಯುತ್ತಿರುವ ಜಯದೇವ

ಕಲ್ಯಾಣ ಕರ್ನಾಟಕದಲ್ಲಿ ಕಣ್ಣು ತೆರೆಯುತ್ತಿರುವ ಜಯದೇವ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

KKRDB ಸಹಯೋಗದಲ್ಲಿ ಕಲ್ಬುರ್ಗಿಯಲ್ಲಿ ನೂತನ 371 ಹಾಸಿಗೆ ಸಾಮರ್ಥ್ಯದ ಹೃದ್ರೋಗ ಆಸ್ಪತ್ರೆ ಸಿ.ಎಂ ಸಿದ್ದರಾಮಯ್ಯ ಅವರಿಂದ ಲೋಕಾರ್ಪಣೆಗೆ ಕ್ಷಣ ಗಣನೆ

ಬೆಂಗಳೂರು ಡಿ21 : ಕಲ್ಯಾಣ ಕರ್ನಾಟಕದ ಕೇಂದ್ರ ಕಲಬುರಗಿಯಲ್ಲಿ ಕೆ.ಕೆ.ಆರ್.ಡಿ.ಬಿ.ಯ 302 ಕೋಟಿ ರೂ. ಸೇರಿ ಒಟ್ಟಾರೆ 327.17 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 371 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯ ಕಲಬುರಗಿ ಶಾಖಾ ಆಸ್ಪತ್ರೆ ಲೋಕಾರ್ಪಣೆ ನಾಳೆ ಮುಖ್ಯಮಂತ್ರಿಗಳಿಂದ ನೆರವೇರಲಿದೆ.

ಖಾಸಗಿ ಕಾರ್ಪೊರೇಟ್ ಆಸ್ಪತ್ರೆ ಮೀರಿಸುವ ಗುಣಮಟ್ಟದ ಸೇವೆ ಇಲ್ಲಿ ಸಾರ್ವಜನಿಕರಿಗೆ ಲಭ್ಯವಿದ್ದು,
ನೂತನ ಆಸ್ಪತ್ರೆಯ ಸಾಮರ್ಥ್ಯಕ್ಕೆ ತಕ್ಕಂತೆ ಈಗಿರುವ 10 ಹೃದ್ರೋಗ ವೈದ್ಯರ ಜೊತೆಗೆ ಹೆಚ್ಚುವರಿಯಾಗಿ 21 ವೈದ್ಯರು, 120 ಸ್ಟಾಫ್ ನರ್ಸ್ ಸೇರಿದಂತೆ ಇತರೆ ಸಿಬ್ಬಂದಿ ನೇಮಕಾತಿಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. ಅದರಂತೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ

ನೂತನ ಜಯದೇವ ಆಸ್ಪತ್ರೆಯಲ್ಲಿ 3 ಕ್ಯಾತಲ್ಯಾಬ್, ಮೂರು ಅಪರೇಷನ್ ಥಿಯೇಟರ್, ಒಂದು ಹೈಬ್ರಿಡ್ ಓ.ಟಿ. ಇರಲಿದೆ. ಎಕ್ಸ್ರೇ, ಇ.ಎಂ.ಆರ್.ಐ., ಬ್ಲಡ್ ಬ್ಯಾಂಕ್ ಸೇವೆ ಲಭ್ಯವಿರಲಿದೆ. 105 ಐ.ಸಿ.ಯು ಬೆಡ್, 120 ಜನರಲ್ ಬೆಡ್ ಸೇರಿದಂತೆ ಒಟ್ಟಾರೆ 371 ಹಾಸಿಗೆ ಸಾಮರ್ಥ್ಯ ಇದ್ದು, ಅತ್ಯಾಧುನಿಕ ಸೌಲಭ್ಯದೊಂದಿಗೆ ಬಿ.ಪಿ.ಎಲ್ ರೋಗಿಗಳಿಗೆ ಉಚಿತ ಮತ್ತು ಎ.ಪಿ.ಎಲ್. ರೋಗಿಗಳಿಗೆ ಶೇ.30ರ ರಿಯಾಯಿತಿ ದರದೊಂದಿಗೆ ಚಿಕಿತ್ಸೆ ಇಲ್ಲಿ ಸಿಗಲಿದೆ.

ಬೆಂಗಳೂರು, ಮೈಸೂರು ಬಿಟ್ಟರೆ ರಾಜ್ಯದಲ್ಲಿ ಮೂರನೇ ಸ್ವಂತ ಕಟ್ಟಡವನ್ನು ಕಲಬುರಗಿಯಲ್ಲಿ ಆಸ್ಪತ್ರೆ ಹೊಂದಲಿದ್ದು, ಬೆಂಗಳೂರು ಬಿಟ್ಟರೆ ಕಲಬುರಗಿ ಶಾಖಾ ಆಸ್ಪತ್ರೆಯಲ್ಲಿ ವಸ್ಕುಲರ್ ಸರ್ಜರಿ ಸೇವೆ ಸಹ ನೀಡಲು ಉದ್ದೇಶಿಸಲಾಗಿದೆ. ಇದು ಕಲ್ಯಾಣ ಕರ್ನಾಟಕ ಭಾಗದಲ್ಲಿಯೆ ಮೊದಲನೇಯದು ಎನ್ನುವ ಹೆಗ್ಗಳಿಕೆ.‌

ನೂತನ ಆಸ್ಪತ್ರೆಯಲ್ಲಿ ನೀರಿನ ಕೊರತೆ ಎದುರಾಗದಂತೆ 7 ಲಕ್ಷ ಲೀ. ನೀರು ಸಾಮರ್ಥ್ಯ ಟ್ಯಾಂಕ್ ಸ್ಥಾಪಿಸಿದ್ದು, 11ಕೆ.ವಿ. ವಿದ್ಯುತ್ ಕೇಂದ್ರವನ್ನು 33 ಕೆ.ವಿ.ಗೆ ಮೇಲ್ದರ್ಜೇಗೇರಿಸಲಾಗಿದೆ.

3 ತಿಂಗಳಲ್ಲಿ ಸೂಪರ್ ಸ್ಪೆಷಾಲಿಟ್ಟಿ ಆಸ್ಪತ್ರೆ ಲಭ್ಯ: ಜಯದೇವ ಆಸ್ಪತ್ರೆ ಉದ್ಘಾಟನೆ ನಂತರ ಮುಂದಿನ ಮೂರು ತಿಂಗಳಲ್ಲಿ ಜಿಮ್ಸ್ ಆಸ್ಪತ್ರೆಯಲ್ಲಿ ನಿರ್ಮಾಣವಾಗುತ್ತಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಗಾಟಿಸಿ ಸಾರ್ವಜನಿಕರ ಸೇವೆಗೆ ಮುಖ್ಯಮಂತ್ರಿಗಳು ಲೋಕಾರ್ಪಣೆ ಮಾಡುವರು.

ಹಳೇ ಜಿಲ್ಲಾ ಆಸ್ಪತ್ರೆ ಕಡೆವಿ ಅಲ್ಲಿ 100 ಹಾಸಿಗೆಯ ತಾಯಿ-ಮಕ್ಕಳ ಆಸ್ಪತ್ರೆ ನಿರ್ಮಿಸಲಾಗುವುದು. ಜಿಮ್ಸ್ ಆವರಣದಲ್ಲಿಯೇ 50 ಹಾಸಿಗೆಯ ಕ್ರಿಟಿಕಲ್ ಕೇರ್ ಯೂನಿಟ್, ಸುಟ್ಟು ಗಾಯಗಳ ಘಟಕ ಸ್ಥಾಪಿಸಲಾಗುತ್ತಿದೆ. ಇದಲ್ಲದೆ ಗುಲಬರ್ಗಾ ವಿ.ವಿ.ಯಲ್ಲಿ 10 ಎಕರೆ ಜಮೀನಿನಲ್ಲಿ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತದೆ.

ಜಯದೇವ ಆಸ್ಪತ್ರೆಯಿಂದ 5.75 ಲಕ್ಷ ಓ.ಪಿ.ಡಿ. ಸೇವೆ 2016ರಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿದ್ದ ಅವಧಿಯಲ್ಲಿಯೇ ಇಲ್ಲಿನ ಜಿಮ್ಸ್ ಆಸ್ಪತ್ರೆಯಲ್ಲಿ ಜಯದೇವ ಆಸ್ಪತ್ರೆ ತಾತ್ಕಲಿಕ ಆರಂಭಿಸಲಾಗಿತ್ತು.

ಕಳೆದ 8 ವರ್ಷಗಳ ಅವಧಿಯಲ್ಲಿ ಈ ಆಸ್ಪತ್ರೆಯಿಂದ 5.75 ಲಕ್ಷ ಜನ ಮತ್ತು 18,550 ಮಕ್ಕಳು ಓ.ಪಿ.ಡಿ. ಸೇವೆ ಪಡೆದಿದ್ದಾರೆ. 47,500 ಜನ ಒಳರೋಗಿಯಾಗಿ ಚಿಕಿತ್ಸೆ ಪಡೆದಿದ್ದು, 39,462 ಜನ ಕ್ಯಾತ್‌ಲ್ಯಾಬ್ ಸೇವೆಗೆ ಒಳಗಾಗಿದ್ದಾರೆ.

25,000 ಮಂದಿ ಎನ್ಜಿಯೋಗ್ರಾಮ್ ಮಾಡಿಸಿದ್ದು, 13,000 ಎನ್ಜಿಯೋಪ್ಲಾಸ್ಟಿಸ್, 300 ಜನ ಪೇಸ್ ಮೇಕರ್ ಹಾಕಿಕೊಂಡಿದ್ದು, 1,300 ಜನ ಓಪನ್ ಹಾರ್ಟ್ ಸರ್ಜರಿಗೆ ಒಳಗಾಗಿದ್ದಾರೆ. 3.92 ಲಕ್ಷ ಜನ ಇ.ಸಿ.ಜಿ, 2.14 ಲಕ್ಷ ಜನ ಎಕೊ ಟೆಸ್ಟ್ ಮಾಡಿಸಿದ್ದು, 53,399 ಜನ ಎಕ್ಸ್ರೇ ಮಾಡಿಸಿಕೊಂಡಿದ್ದಾರೆ. ಆಸ್ಪತ್ರೆ ಸ್ಥಾಪನೆಯಿಂದ ಇಲ್ಲಿನ ಜನರು ದೂರದ ಬೆಂಗಳೂರು, ಸೋಲಾಪೂರ ಹೋಗುವುದು ತಪ್ಪಿದೆ.

“ಶರಣ”ರ ನಾಡಿನಲ್ಲಿ ಆರೋಗ್ಯ ಕ್ಷೇತ್ರ “ಪ್ರಕಾಶ”ಮಾನ ಜಯದೇವ ಸಂಸ್ಥೆ ಎಂದರೆ “ಚಿಕಿತ್ಸೆ ಮೊದಲು, ಹಣ ನಂತರ (ಟ್ರೀಟ್‌ಮೆಂಟ್‌ ಫಸ್ಟ್‌-ಪೇಮೆಂಟ್‌ ನೆಕ್ಸ್ಟ್‌)

ತೊಗರಿ ಕಣಜ, ಶರಣರ ನಾಡು ಎಂದೇ ಖ್ಯಾತಿ ಹೊಂದಿರುವ ಕಲಬುರಗಿ ಜಿಲ್ಲೆ ಈಗ “ಕಲ್ಯಾಣ”ಮಯವಾಗುತ್ತಿದೆ. ಅಂದರೆ ಎಲ್ಲ ಕ್ಷೇತ್ರಗಳ ಅದರಲ್ಲೂ ಆರೋಗ್ಯ ಕ್ಷೇತ್ರ ಪ್ರಕಾಶಮಾನವಾಗುತ್ತಿದೆ.

ಕಾಂಗ್ರೆಸ್‌ ಸರ್ಕಾರದ ಅಧಿಕಾರಾವಧಿಯಲ್ಲಿ ಹಲವಾರು ಯೋಜನೆಗಳು ಇಲ್ಲಿ ಅನುಷ್ಠಾನಕ್ಕೆ ಬಂದಿವೆ.

ಈ ಸಾಧನೆಯಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್ ಅವರ ಕಾಳಜಿ ಮತ್ತು ಶ್ರಮ ಎದ್ದು ಕಾಣುತ್ತಿದೆ.

ಶರಣ ಪ್ರಕಾಶ್‌ ಪಾಟೀಲ್‌ ಅವರ ಇಚ್ಛಾಶಕ್ತಿ ಹಾಗೂ ಕಲ್ಯಾಣ ಕರ್ನಾಟಕದ ಜಿಲ್ಲೆಯ ಜನರಿಗೆ ಆರೋಗ್ಯ ಸಿರಿ ದೊರಕಿಸಿಕೊಡಲು ನಿರಂತರ ಶ್ರಮಿಸುತ್ತಿದ್ದಾರೆ. ಹಾಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿ ಕಲಬುರಗಿ ಜಿಲ್ಲೆ, ಕಲ್ಯಾಣ ಕರ್ನಾಟಕ ಭಾಗಕ್ಕೆ ಮಾತ್ರವಲ್ಲದೇ ಇಡೀ ಕರುನಾಡಿನಲ್ಲಿ ಹಲವಾರು ವಿನೂತನ ಹಾಗೂ ಜನೋಪಯೋಗಿ ಯೋಜನೆಗಳು ಕಾರ್ಯರೂಪಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದ ಆಡಳಿತಾವಧಿಯಲ್ಲಿ(2013–2018) ಜಯದೇವ ಸಂಸ್ಥೆಯ ಸ್ಥಾಪನೆಗೆ ಮುನ್ನುಡಿ ಬರೆಯಲಾಗಿತ್ತು. ಬೃಹತ್‌ ಆಸ್ಪತ್ರೆ ನಿರ್ಮಾಣ ಮಾಡಲು ಹಿಂದಿನ ಸರ್ಕಾರ ನಿರ್ಲಕ್ಷ್ಯ ತೋರಿದ್ದರಿಂದ ಯೋಜನೆ ನನೆಗುದಿಗೆ ಬಿದ್ದಿತ್ತು.
ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಶರಣ್‌ ಪ್ರಕಾಶ್‌ ಪಾಟೀಲ್‌ ಅವರು ವೈದ್ಯಕೀಯ ಶಿಕ್ಷಣ ಇಲಾಖೆಯ ಜವಾಬ್ದಾರಿ ವಹಿಸಿಕೊಂಡ ಕೂಡಲೇ ಈ ಯೋಜನೆ ಕೈಗೆತ್ತಿಕೊಂಡರು. ನಿರಂತರ ಪರಿಶೀಲನೆ ಹಾಗೂ ಯೋಜನೆಯನ್ನು ಅನುಷ್ಠಾನ ಮಾಡಲೇಬೇಕೆಂಬ ಸಂಕಲ್ಪ ತೊಟ್ಟಿದ್ದರಿಂದ ಇಂದು ಜಯದೇವ ಹೃದ್ರೋಗ ಸಂಸ್ಥೆಯ ಭವ್ಯ ಕಟ್ಟಡ ತಲೆ ಎತ್ತಿ ನಿಂತಿದೆ.

ಜಯದೇವ ಕಲಬುರಗಿ ನೂತನ ಶಾಖೆಯ ವಿಶೇಷತೆಗಳು

❖ 371 ಹಾಸಿಗೆ ಸಾಮರ್ಥ್ಯದ ಕಟ್ಟಡ
❖ 3 ಕ್ಯಾಥ್‌ಲ್ಯಾಬ್‌ಗಳು
❖ 3 ಆಪರೇಷನ್ ಥಿಯೇಟರ್‌ಗಳು
❖ 1 ಹೈಬ್ರಿಡ್ OT
❖ 105 ICCU ಹಾಸಿಗೆಗಳು
❖ 120 ಸಾಮಾನ್ಯ ವಾರ್ಡ್ ಬೆಡ್‌
❖ ಅರೆ-ವಿಶೇಷ, ವಿಶೇಷ ಮತ್ತು ಡೀಲಕ್ಸ್ ವಾರ್ಡ್ ಹಾಸಿಗೆಗಳು, 12 ರಿಕವರಿ ಮತ್ತು 12 ಪೋಸ್ಟ್ ಆಪರೇಟಿವ್ ಹಾಸಿಗೆಗಳು
❖ ಕಾರ್ಡಿಯಾಲಜಿ, ಕಾರ್ಡಿಯೋಥೊರಾಸಿಕ್ ಸರ್ಜರಿ, ವ್ಯಾಸ್ಕುಲಾರ್‌ಶಸ್ತ್ರಚಿಕಿತ್ಸೆ, ಪೀಡಿಯಾಟ್ರಿಕ್ ಕಾರ್ಡಿಯಾಲಜಿ, ರೇಡಿಯಾಲಜಿ, 128 ಸ್ಲೈಸ್ CT ಸ್ಕ್ಯಾನ್, 1.5T MRI, ಅಲ್ಟ್ರಾಸೋನೋಗ್ರಫಿ, ಹೈಟೆಕ್ಪ್ಯಾಥಾಲಜಿ ಮತ್ತು ರಕ್ತ ಬ್ಯಾಂಕ್ ಸೇವೆ ಒದಗಲಿದೆ.

About the Author

The Bengaluru Live

Administrator

Visit Website View All Posts

Post navigation

Previous: ಗೋಲ್ಡನ್ ಚಾರಿಯೇಟ್ ರೈಲು ಸೇವೆಗೆ ಮರುಚಾಲನೆ
Next: ನಾನಿನ್ನು ಸತ್ತಿಲ್ಲ, ಬದುಕಿದ್ದೇನೆ. ಈ ಡಿ.ಕೆ. ಶಿವಕುಮಾರ್ ಇನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷ: ಡಿಸಿಎಂ ಡಿ.ಕೆ. ಶಿವಕುಮಾರ್

Related Stories

ಶೋಧದ ವೇಳೆ ಗೇಟ್ ಬಳಿ ಲೋಕಾಯುಕ್ತ ಅಧಿಕಾರಿಗಳಿರುವ ಹಾಸನ ಜಿಲ್ಲೆಯ ಮನೆ
  • ಕರ್ನಾಟಕ

ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಸಂಬಂಧಿತ ಹಾಸನದ ಐದು ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ

The Bengaluru Live November 18, 2026 10:49 AM
ಗುಂಜೂರಿನ ಶಂಕುಸ್ಥಾಪನೆ ಸಮಾರಂಭದಲ್ಲಿ ಸಚಿವ ಕೃಷ್ಣ ಬೈರೇಗೌಡ ಮತ್ತು ಇತರ ಗಣ್ಯರೊಂದಿಗೆ ವೇದಿಕೆಯಲ್ಲಿ ದೀಪ ಬೆಳಗುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ

ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸರ್ಕಾರದ ಗುರಿ: ಗುಂಜೂರಿನಲ್ಲಿ ವಿಶ್ವಬ್ಯಾಂಕ್ ನೆರವಿನ ಕೆಡಬ್ಲ್ಯೂಎಸ್‌ಆರ್‌ಪಿ ಅಡಿ ರೂ 2,000 ಕೋಟಿ ಮೌಲ್ಯದ ಕಾಲುವೆ, ಪ್ರವಾಹ ಕಾಮಗಾರಿಗೆ ಸಿಎಂ ಶಿವಕುಮಾರ್ ಶಂಕುಸ್ಥಾಪನೆ

The Bengaluru Live November 18, 2026 7:04 AM
ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ

The Bengaluru Live November 18, 2026 5:12 AM

Latest Post

ಬೆಂಗಳೂರು: ಗಿರಿನಗರದಲ್ಲಿ ಸುಟ್ಟ ಗಾಯಗಳೊಂದಿಗೆ ವ್ಯಕ್ತಿ ಪತ್ತೆ; ಶಂಕಿತ ದಾಳಿಯ ಬಗ್ಗೆ ಪೊಲೀಸ್ ತನಿಖೆ ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯ ಸಂಗ್ರಹ ಚಿತ್ರ; ಘಟನಾ ಸ್ಥಳವಲ್ಲ
  • ಅಪರಾಧ
  • ಬೆಂಗಳೂರು

ಬೆಂಗಳೂರು: ಗಿರಿನಗರದಲ್ಲಿ ಸುಟ್ಟ ಗಾಯಗಳೊಂದಿಗೆ ವ್ಯಕ್ತಿ ಪತ್ತೆ; ಶಂಕಿತ ದಾಳಿಯ ಬಗ್ಗೆ ಪೊಲೀಸ್ ತನಿಖೆ

November 18, 2026 2:02 PM
ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಸಂಬಂಧಿತ ಹಾಸನದ ಐದು ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ ಶೋಧದ ವೇಳೆ ಗೇಟ್ ಬಳಿ ಲೋಕಾಯುಕ್ತ ಅಧಿಕಾರಿಗಳಿರುವ ಹಾಸನ ಜಿಲ್ಲೆಯ ಮನೆ
  • ಕರ್ನಾಟಕ

ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಸಂಬಂಧಿತ ಹಾಸನದ ಐದು ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ

November 18, 2026 10:49 AM
ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸರ್ಕಾರದ ಗುರಿ: ಗುಂಜೂರಿನಲ್ಲಿ ವಿಶ್ವಬ್ಯಾಂಕ್ ನೆರವಿನ ಕೆಡಬ್ಲ್ಯೂಎಸ್‌ಆರ್‌ಪಿ ಅಡಿ ರೂ 2,000 ಕೋಟಿ ಮೌಲ್ಯದ ಕಾಲುವೆ, ಪ್ರವಾಹ ಕಾಮಗಾರಿಗೆ ಸಿಎಂ ಶಿವಕುಮಾರ್ ಶಂಕುಸ್ಥಾಪನೆ ಗುಂಜೂರಿನ ಶಂಕುಸ್ಥಾಪನೆ ಸಮಾರಂಭದಲ್ಲಿ ಸಚಿವ ಕೃಷ್ಣ ಬೈರೇಗೌಡ ಮತ್ತು ಇತರ ಗಣ್ಯರೊಂದಿಗೆ ವೇದಿಕೆಯಲ್ಲಿ ದೀಪ ಬೆಳಗುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ

ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸರ್ಕಾರದ ಗುರಿ: ಗುಂಜೂರಿನಲ್ಲಿ ವಿಶ್ವಬ್ಯಾಂಕ್ ನೆರವಿನ ಕೆಡಬ್ಲ್ಯೂಎಸ್‌ಆರ್‌ಪಿ ಅಡಿ ರೂ 2,000 ಕೋಟಿ ಮೌಲ್ಯದ ಕಾಲುವೆ, ಪ್ರವಾಹ ಕಾಮಗಾರಿಗೆ ಸಿಎಂ ಶಿವಕುಮಾರ್ ಶಂಕುಸ್ಥಾಪನೆ

November 18, 2026 7:04 AM
ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ

November 18, 2026 5:12 AM
ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ ಬೆಂಗಳೂರಿನಲ್ಲಿ ಗೋಲ್ಡನ್ ಅಂಬೇಡ್ಕರ್ ಫೌಂಡೇಷನ್ ಸನ್ಮಾನ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿರುವವರು
  • ಕರ್ನಾಟಕ

ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ

November 17, 2026 11:59 PM
ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ ಬೆಂಗಳೂರಿನ ಆರೋಗ್ಯ ಸೌಧದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಿರುವ ಆರೋಗ್ಯ ಸಚಿವರು
  • ಕರ್ನಾಟಕ

ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ

November 17, 2026 11:02 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯ ಸಂಗ್ರಹ ಚಿತ್ರ; ಘಟನಾ ಸ್ಥಳವಲ್ಲ
  • ಅಪರಾಧ
  • ಬೆಂಗಳೂರು

ಬೆಂಗಳೂರು: ಗಿರಿನಗರದಲ್ಲಿ ಸುಟ್ಟ ಗಾಯಗಳೊಂದಿಗೆ ವ್ಯಕ್ತಿ ಪತ್ತೆ; ಶಂಕಿತ ದಾಳಿಯ ಬಗ್ಗೆ ಪೊಲೀಸ್ ತನಿಖೆ

The Bengaluru Live November 18, 2026 2:02 PM
ಶೋಧದ ವೇಳೆ ಗೇಟ್ ಬಳಿ ಲೋಕಾಯುಕ್ತ ಅಧಿಕಾರಿಗಳಿರುವ ಹಾಸನ ಜಿಲ್ಲೆಯ ಮನೆ
  • ಕರ್ನಾಟಕ

ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಸಂಬಂಧಿತ ಹಾಸನದ ಐದು ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ

The Bengaluru Live November 18, 2026 10:49 AM
ಗುಂಜೂರಿನ ಶಂಕುಸ್ಥಾಪನೆ ಸಮಾರಂಭದಲ್ಲಿ ಸಚಿವ ಕೃಷ್ಣ ಬೈರೇಗೌಡ ಮತ್ತು ಇತರ ಗಣ್ಯರೊಂದಿಗೆ ವೇದಿಕೆಯಲ್ಲಿ ದೀಪ ಬೆಳಗುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ

ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸರ್ಕಾರದ ಗುರಿ: ಗುಂಜೂರಿನಲ್ಲಿ ವಿಶ್ವಬ್ಯಾಂಕ್ ನೆರವಿನ ಕೆಡಬ್ಲ್ಯೂಎಸ್‌ಆರ್‌ಪಿ ಅಡಿ ರೂ 2,000 ಕೋಟಿ ಮೌಲ್ಯದ ಕಾಲುವೆ, ಪ್ರವಾಹ ಕಾಮಗಾರಿಗೆ ಸಿಎಂ ಶಿವಕುಮಾರ್ ಶಂಕುಸ್ಥಾಪನೆ

The Bengaluru Live November 18, 2026 7:04 AM
ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ

The Bengaluru Live November 18, 2026 5:12 AM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬೆಂಗಳೂರು: ಗಿರಿನಗರದಲ್ಲಿ ಸುಟ್ಟ ಗಾಯಗಳೊಂದಿಗೆ ವ್ಯಕ್ತಿ ಪತ್ತೆ; ಶಂಕಿತ ದಾಳಿಯ ಬಗ್ಗೆ ಪೊಲೀಸ್ ತನಿಖೆ
  • ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಸಂಬಂಧಿತ ಹಾಸನದ ಐದು ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ
  • ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸರ್ಕಾರದ ಗುರಿ: ಗುಂಜೂರಿನಲ್ಲಿ ವಿಶ್ವಬ್ಯಾಂಕ್ ನೆರವಿನ ಕೆಡಬ್ಲ್ಯೂಎಸ್‌ಆರ್‌ಪಿ ಅಡಿ ರೂ 2,000 ಕೋಟಿ ಮೌಲ್ಯದ ಕಾಲುವೆ, ಪ್ರವಾಹ ಕಾಮಗಾರಿಗೆ ಸಿಎಂ ಶಿವಕುಮಾರ್ ಶಂಕುಸ್ಥಾಪನೆ
  • ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ
©Copyright 2025 The Bengaluru Live All rights reserved. | MoreNews by AF themes.