ಬೆಂಗಳೂರು:
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಕಣ ರಂಗೇರಿದೆ. ಜಯನಗರದ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿ.ಕೆ. ರಾಮಮೂರ್ತಿ ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಿದರು. ಜಯನಗರ ಬಿಡಿಎ ಕಾಂಪ್ಲೆಕ್ಸ್ ನಲ್ಲಿರುವ ಬಿಬಿಎಂಪಿ ಕಚೇರಿಯಲ್ಲಿ ಅವರು ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು. ಬಳಿಕ ದೇವಸ್ಥಾನದಿಂದ ಜಯನಗರ ಬಿಡಿಎ ಕಾಂಪ್ಲೆಕ್ಸ್ ತನಕ ಬೃಹತ್ ರ್ಯಾಲಿ ನಡೆಯಿತು ಸಾವಿರಾರು ಬೆಂಬಲಿಗರು ಹಾಗೂ ಕಾರ್ಯಕರ್ತರು ಹಾಜರಿದ್ದರು. ಬಿಜೆಪಿ ಕಾರ್ಯಕರ್ತರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಆವರ ಮುಖವಾಡ ಧರಿಸಿ ಬಂದಿದ್ದು ವಿಶೇಷವಾಗಿತ್ತು. ವಿನಾಯಕ ದೇವಾಲಯದ ಬಳಿ ಪಟಾಕಿ ಸಿಡಿಸಿ ಸಂಭ್ರಮಾಚರಿಸಿದರು.
ಇನ್ನು ಈ ಸಂದರ್ಭದಲ್ಲಿ ಮಾತನಾಡಿದ ಎಸ್ ಟಿ ಸೋಮಶೇಖರ್ “ಭಾರತೀಯ ಜನತಾಪಕ್ಷ ಕಾರ್ಯಕರ್ತರ ಸಂಘಟನೆಯ ಪಕ್ಷ.ಒಬ್ಬರೋ ಇಬ್ಬರೋ ಪಕ್ಷದಿಂದ ಹೊರಕ್ಕೆ ಹೋದರೆ ಪಕ್ಷಕ್ಕೆ ಧಕ್ಕೆಯಾಗಲ್ಲ.ಈ ಪಕ್ಷದಲ್ಲಿ ಒಂದು ಸಂಘಟನೆ ಇದೆ.ವೀರಶೈವರು, ಲಿಂಗಾಯಿತರು ಮೊದಲಿನಿಂದಲೂ ಭಾರತೀಯ ಜನತಾಪಕ್ಷದ ನೇತೃತ್ವ ವಹಿಸಿದಂಥವರು. ಯಾರೇ ಹೋಗಲಿ ಪಕ್ಷದ ಸಂಘಟನೆ ಚೆನ್ನಾಗಿರುತ್ತದೆ” ಎಂದು ಹೇಳಿದರು
ಈ ಸಂದರ್ಭದಲ್ಲಿ ಹಲವು ಸಾಂಸ್ಕೃತಿಕ ತಂಡಗಳಿಂದ ನೃತ್ಯ ಕಾರ್ಯಕ್ರಮ ನಡೆಯಿತು. ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಹಲವು ಪ್ರಮುಖ ನಾಯಕರೊಂದಿಗೆ ನಾಮಪತ್ರ ಸಲ್ಲಿಸಿದರು.