Home ಹಾವೇರಿ ಹಾನಗಲ್ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡಿದ ಜೆಡಿಎಸ್

ಹಾನಗಲ್ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡಿದ ಜೆಡಿಎಸ್

183
0
bengaluru

ಬೆಂಗಳೂರು:

ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನಿಯಾಜ್ ಶೇಖ್ ಅವರನ್ನು ಜೆಡಿಎಸ್ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ.

ನಿಯಾಜ್ ಶೇಖ್ ಅವರು ಇಂದು ತಮ್ಮ ಬೆಂಬಲಿಗರೊಂದಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.

ಪಕ್ಷದ ಬಾವುಟ ನೀಡಿ ನಿಯಾಜ್ ಶೇಖ್ ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಸಯ್ಯದ್ ಅಲ್ತಾï ಉಪಸ್ಥಿತರಿದ್ದರು.

bengaluru

ನಿಯಾಜ್ ಶೇಖ್ ಅವರು ಹಾವೇರಿ ಜಿಲ್ಲಾ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.

ಕಳೆದ ವಾರ ಅನಾರೋಗ್ಯದ ಹಿನ್ನೆಲೆಯಲ್ಲಿ ಹಾಲಿ ಹಾನಗಲ್ ವಿಧಾನಸಬಾ ಕ್ಷೇತ್ರದ ಶಾಸಕರಾಗಿದ್ದ ಮಾಜಿ ಸಚಿವ ಸಿ.ಎಂ.ಉದಾಸಿ ಅವರು ನಿಧಾನರಾದ ಹಿನ್ನೆಲೆಯಲ್ಲಿ ತೆರವಾಗಿರುವ ಈ ಕ್ಷೇತ್ರಕ್ಕೆ ಉಪಚುನಾವಣೆ ಸದ್ಯದಲ್ಲೇ ನಡೆಯಲಿದ್ದು, ಜೆಡಿಎಸ್‍ನಿಂದ ನಿಯಾಜ್ ಶೇಖ್ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲಿದೆ.

bengaluru

LEAVE A REPLY

Please enter your comment!
Please enter your name here