Home ಬೆಂಗಳೂರು ನಗರ JDS BJP Alliance | ಬಿಜೆಪಿ ಮೈತ್ರಿ ಬಗ್ಗೆ ಅನುಮಾನ ಗೊಂದಲ ನಿವಾರಿಸಿದ ಜೆಡಿಎಸ್ ವರಿಷ್ಠರು,...

JDS BJP Alliance | ಬಿಜೆಪಿ ಮೈತ್ರಿ ಬಗ್ಗೆ ಅನುಮಾನ ಗೊಂದಲ ನಿವಾರಿಸಿದ ಜೆಡಿಎಸ್ ವರಿಷ್ಠರು, ಪಕ್ಷದ ನಿರ್ಧಾರಕ್ಕೆ ಬದ್ಧ ಎಂದು ಘೋಷಿಸಿದ ಶಾಸಕರು, ನಾಯಕರು

31
0
JDS BJP Alliance | MLAs and leaders declared that they are bound by the party's decision
JDS BJP Alliance | MLAs and leaders declared that they are bound by the party's decision

ಬಿಲ್ಡಪ್ ನಾಯಕರನ್ನು ಪಕ್ಷದಿಂದ ಹೊರ ಹಾಕಿ ಎಂದು ಒತ್ತಾಯಿಸಿದ ಮುಸ್ಲಿಮ್ ನಾಯಕರು

ಬೆಂಗಳೂರು/ರಾಮನಗರ:

ಬಿಜೆಪಿ ಜತೆ ಮೈತ್ರಿ ಸಂಬಂಧಿಸಿದಂತೆ ಪಕ್ಷದ ಮುಖಂಡರಲ್ಲಿ, ಕಾರ್ಯಕರ್ತರಲ್ಲಿ ಉಂಟಾಗಿದ್ದ ಕೆಲ ಗೊಂದಲಗಳನ್ನು ಜೆಡಿಎಸ್ ವರಿಷ್ಠ ನಾಯಕರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನಿವಾರಿಸಿದರು.

ಹಾಗೆಯೇ, ಪಕ್ಷದ ಹಿತಕ್ಕಾಗಿ ವರಿಷ್ಠರು ತೆಗೆದುಕೊಂಡಿರುವ ನಿರ್ಧಾರ ಸರಿ ಇದೆ. ಅವರ ನಿರ್ಧಾರಕ್ಕೆ ನಾವು ಬದ್ಧ ಇದ್ದೇವೆ ಎಂದು ಎಲ್ಲಾ ಮುಖಂಡರು, ಶಾಸಕರು ಸ್ಪಷ್ಟ ಮಾತುಗಳಲ್ಲಿ ಸಭೆ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಪ್ರಧಾನಿಗಳು ಮತ್ತು ಮಾಜಿ ಮುಖ್ಯಮಂತ್ರಿಗಳು; ಬಿಜೆಪಿ ಮೈತ್ರಿ ವಿಚಾರದಲ್ಲಿ ಯಾರನ್ನು ಕತ್ತಲೆಯಲ್ಲಿ ಇಟ್ಟಿಲ್ಲ, ಇಡುವ ಅಗತ್ಯವೂ ಇಲ್ಲ ಎಂದು ನೇರ ಮಾತುಗಳಲ್ಲಿ ಹೇಳಿದರು.

ಪಕ್ಷದ ಜಿಲ್ಲಾಧ್ಯಕ್ಷರು, ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು, ಕಳೆದ ಚುನಾವಣೆಯಲ್ಲಿ ಪರಾಜಿತ ಅಭ್ಯರ್ಥಿಗಳು, ಪಕ್ಷದ ಜಿಲ್ಲಾಧ್ಯಕ್ಷರು ಸೇರಿದಂತೆ ಪಕ್ಷದ ಅನೇಕ ಆಹ್ವಾನಿತ ಮುಖಂಡರ ಸಭೆಯಲ್ಲಿ ವರಿಷ್ಠ ನಾಯಕರು ಮಾತನಾಡಿದರು.

ಅಲ್ಲದೆ, ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು, ಮಾಜಿ ಸಚಿವ ಬಂಡೆಪ್ಪ ಕಾಷೆಂಪೋರ, ಶಾಸಕರಾದ ಸಮೃದ್ಧಿ ಮಂಜುನಾಥ್, ಮಾಜಿ ಶಾಸಕರಾದ ಗುರು ಪಾಟೀಲ್, ರಾಜಾ ವೆಂಕಟಪ್ಪ ನಾಯಕ ಮುಂತಾದವರು; ಪಕ್ಷ ಮತ್ತು ವರಿಷ್ಠರು ಕೈಗೊಂಡ ನಿರ್ಧಾರ ದೂರದೃಷ್ಟಿಯಿಂದ ಕೂಡಿದೆ. ಪಕ್ಷದ ಹಿತ ಅದರಲ್ಲಿ ಅಡಗಿದೆ. ನಾವೆಲ್ಲರೂ ಈ ನಿರ್ಧಾರಕ್ಕೆ ಬದ್ಧವಾಗಿದ್ದೇವೆ. ಕಾಂಗ್ರೆಸ್ ಮಾಡುತ್ತಿರುವ ಅಪಪ್ರಚಾರಕ್ಕೆ ಸೊಪ್ಪು ಹಾಕುವುದಿಲ್ಲ ಎಂದು ಹೇಳಿದರು.

ಪಕ್ಷದ ಹಿತಕ್ಕಾಗಿ ವರಿಷ್ಠರು ನಿರ್ಧಾರ ಕೈಗೊಂಡಿದ್ದಾರೆ. ಅದಕ್ಕೆ ಪೂರಕವಾಗಿ ನಾವು ಕೆಲಸ ಮಾಡುತ್ತೇವೆ. ಪಕ್ಷ ಉಳಿದರೆ ನಾವು ಉಳಿಯುತ್ತವೆ. ಪ್ರಾದೇಶಿಕ ಪಕ್ಷವನ್ನು ಉಳಿಸಿಕೊಳ್ಳುವುದು ಎಲ್ಲರ ಕರ್ತವ್ಯ ಆಗಿದೆ ಎಂದು ಅವರೆಲ್ಲರೂ ಹೇಳಿದರು.

ಅಲ್ಲದೆ ತಮ್ಮ ಭಾಷಣದ ನಡುವೆ ಮುಖಂಡರಿಂದ ಪಕ್ಷ ನಿಷ್ಠೆ ಬಗ್ಗೆ ಪ್ರಮಾಣ ಮಾಡಿಸಿದರು ಜಿಟಿ ದೇವೇಗೌಡರು.

ಬಿಲ್ಡಪ್ ಕೊಡುವ ನಾಯಕರನ್ನು ಉಚ್ಚಾಟಿಸಿ:

ಪಕ್ಷದ ಅಲ್ಪಸಂಖ್ಯಾತರ ವಿಭಾಗದ ಉಪಾಧ್ಯಕ್ಷ ಇಮ್ತಿಯಾಜ್ ರಫೀಕ್ ಅವರು ಮಾತನಾಡಿ, ಪಕ್ಷಕ್ಕೆ ನಾವು ನಿಷ್ಠರಾಗಿದೇವೆ. ಅಲ್ಪಸಂಖ್ಯಾತರು ಯಾರು ಪಕ್ಷ ಬಿಟ್ಟು ಹೋಗಿಲ್ಲ, ಪಕ್ಷ ಮತ್ತು ವರಿಷ್ಠರು ಕೈಗೊಂಡ ನಿರ್ಧಾರಕ್ಕೆ ನಾವು ಬದ್ಧವಾಗಿದ್ದೇವೆ. ಅನಗತ್ಯವಾಗಿ ಪಕ್ಷದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಕಾಂಗ್ರೆಸ್ ಸುಮ್ಮನೆ ಮುಸ್ಲಿಮರನ್ನು ಒಡೆದು ಆಳುವ ಬದಲು ಮುಸ್ಲೀಮರಿಗೆ ನೀಡಿದ್ದ ಭರವಸೆಯನ್ನು ಈಡೇರಿಸಲಿ ಎಂದು ಒತ್ತಾಯ ಮಾಡಿದರು.

ಕಾಂಗ್ರೆಸ್ ಎಂದಿಗೂ ಮುಸ್ಲಿಂ ಪರವಾದ ಪಕ್ಷ. ಅದು ಯಾವಾಗಲೂ ಮುಸ್ಲಿಂ ವಿರೋಧಿ ನಿರ್ಧಾರಗಳನ್ನೆ ಕೈಗೊಂಡರು. ಇದನ್ನು ನಾವು ನೆನಪಿಟ್ಟುಕೊಳ್ಳಬೇಕು. ಇದು ಅಲ್ಪಸಂಖ್ಯಾತ ಸಮುದಾಯದವರು ಒಳ್ಳೊಳ್ಳೆ ಸರಕಾರಿ ಕೆಲಸಗಳಲ್ಲಿ ಇದ್ದರೆ ಅದಕ್ಕೆ ದೇವೇಗೌಡರು ಕಾರಣ ಎಂದು ಅವರು ಹೇಳಿದರು.

ಮತ್ತೊಬ್ಬ ಮುಸ್ಲಿಮರ ನಾಯಕ ಸಿರಸಿಯ ರಜಾಕ್ ಅವರು ಮಾತನಾಡಿ, ಅಲ್ಪಸಂಖ್ಯಾತರು ಪಕ್ಷ ಬಿಟ್ಟು ಹೋಗಿದ್ದಾರೆ ಎನ್ನುವುದು ಶುದ್ಧ ಸುಳ್ಳು. ಯಾರಿಂದ ಪಕ್ಷಕ್ಕೆ ಉಪಯೋಗ ಇಲ್ಲವೋ ಅಂತವರು ಪ್ರತ್ಯೇಕ ಸಭೆ ನಡೆಸಿದ್ದಾರೆಯೋ ಅವರು ಕೇವಲ ಬಿಲ್ಡಪ್ ವೀರರು ಮಾತ್ರ. ಅವರನ್ನು ಕೂಡಲೇ ಪಕ್ಷದಿಂದ ಉಚ್ಛಾಟನೆ ಮಾಡಬೇಕು ಎಂದು ಒತ್ತಾಯ ಮಾಡಿದರು.

ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕಿ ಶಾರದಾ ಪೂರ್ಯ ನಾಯಕ್, ಮಾಜಿ ಸಚಿವ ಹೆಚ್.ರೇವಣ್ಣ, ವೆಂಕಟರಾವ್ ನಾಡಗೌಡ, ಅಲ್ಕೋಡ್ ಹನುಮಂತಪ್ಪ, ಬಿ.ಎಂ.ಫಾರೂಕ್, ಪಕ್ಷದ ಮಾಜಿ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ, ಶಾಸಕರಾದ ಕರೆಮ್ಮ ನಾಯಕ್, ನೇಮಿರಾಜ್ ನಾಯಕ್, ಎ.ಮಂಜು, ಸಮೃದ್ಧಿ ಮಂಜುನಾಥ್, ಜಿ.ಟಿ.ಹರೀಶ್ ಗೌಡ, ವೆಂಕಟ ಶಿವಾರೆಡ್ಡಿ, ಹೆಚ್.ಸಿ.ಬಾಲಕೃಷ್ಣ, ಟಿ.ಎ.ಶರವಣ, ಸೂರಜ್ ರೇವಣ್ಣ, ಸ್ವರೂಪ್ ಪ್ರಕಾಶ್, ರಾಜೂಗೌಡ ಪಾಟೀಲ, ಮೇಲೂರು ರವಿ, ಎಂ.ಟಿ.ಕೃಷ್ಣಪ್ಪ, ಕೆ ಆರ್ ಪೇಟೆ ಮಂಜುನಾಥ್ ಸೇರಿದಂತೆ ಎಲ್ಲಾ ಶಾಸಕರು ಮತ್ತು ಎಲ್ಲ ವಿಧಾನ ಪರಿಷತ್ ಸದಸ್ಯರು ಹಾಜರಿದ್ದರು.

ಮಾಜಿ ಸಚಿವರಾದ ಸಿ.ಎಸ್. ಪುಟ್ಟರಾಜು,ಲೀಲಾದೇವಿ ಆರ್ ಪ್ರಸಾದ್, ಪಕ್ಷದ ಹಿರಿಯ ನಾಯಕ ಬಿ.ಸಿ.ಗೌರಿಶಂಕರ್, ಜೆಡಿಎಸ್ ರಾಜ್ಯ ಯುವಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಪಕ್ಷದ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಸುರೇಶ್ ಬಾಬು, ಮಾಜಿ ಉಪ ಸ್ಪೀಕರ್ ಕೆ.ಎಂ.ಕೃಷ್ಣಾರೆಡ್ಡಿ, ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here