Home ಬೆಂಗಳೂರು ನಗರ JDS BJP Alliance | ಬಿಎಸ್ ಯಡಿಯೂರಪ್ಪ ಭೇಟಿಯಾಗಿ, ಕಾಲಿಗೆ ನಮಸ್ಕರಿಸಿದ ನಿಖಿಲ್ ಕುಮಾರಸ್ವಾಮಿ

JDS BJP Alliance | ಬಿಎಸ್ ಯಡಿಯೂರಪ್ಪ ಭೇಟಿಯಾಗಿ, ಕಾಲಿಗೆ ನಮಸ್ಕರಿಸಿದ ನಿಖಿಲ್ ಕುಮಾರಸ್ವಾಮಿ

85
0
JDS BJP Alliance | Nikhil Kumaraswamy met and bowed to BS Yeddyurappa
JDS BJP Alliance | Nikhil Kumaraswamy met and bowed to BS Yeddyurappa

ಬೆಂಗಳೂರು:

ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ಖಾಸಗಿ ನಿವಾಸ ಧವಳಗಿರಿಗೆ ಇಂದು ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿದರು‌. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ (ಎನ್​ಡಿಎ) ಜೆಡಿಎಸ್ ಸೇರ್ಪಡೆಯಾದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರನ್ನು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ್ ಸ್ವಾಮಿ ಅವರು, ಭಾನುವಾರ ಭೇಟಿಯಾಗಿ ಆಶೀರ್ವಾದ ಪಡೆದರು.

ಈ ವೇಳೆ ನಿಖಿಲ್ ಅವರ ಮುಂದಿನ ರಾಜಕೀಯ ಜೀವನಕ್ಕೆ ಯಡಿಯೂರಪ್ಪ ಅವರು ಶುಭ ಕೋರಿದರು. ಎನ್​ಡಿಎಗೆ ಜೆಡಿಎಸ್​​ ಸೇರ್ಪಡೆ ಹಿನ್ನೆಲೆಯಲ್ಲಿ ಪರಸ್ಪರರು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ನಾಯಕ ಮಾಜಿ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಪುತ್ರ ಸಿರೀಶ್ ಹಾಗೂ ಮಾಜಿ ಸಚಿವ ಮುನಿರತ್ನ ಸೇರಿ ಹಲವರು ಉಪಸ್ಥಿತರಿದ್ದರು.

ಯಡಿಯೂರಪ್ಪ ಭೇಟಿ ಬಳಿಕ ಮಾತನಾಡಿದ ನಿಖಿಲ್ ಅವರು, ಎನ್’ಡಿಎ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದು ಎಲ್ಲರಿಗೂ ತಿಳಿದಿದೆ. ಅದರ ಆಧಾರದ ಮೇಲೆ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದೇನೆ. ಯಡಿಯೂರಪ್ಪ ಕರ್ನಾಟಕದ ಹಿರಿಯ ನಾಯಕರು. ಹೀಗಾಗಿ ವೈಯಕ್ತಿಕವಾಗಿ ಅವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದುಕೊಂಡೆ ಎಂದು ಹೇಳಿದರು.

LEAVE A REPLY

Please enter your comment!
Please enter your name here