ಹೊಸದಲ್ಲಿ:
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಶಾಸಕ ಎಚ್.ಡಿ ರೇವಣ್ಣ ಸೇರಿದಂತೆ ಜೆಡಿಎಸ್ ನಿಯೋಗವು ಗುರುವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಸೀಟು ಹಂಚಿಕೆ ವಿಚಾರವಾಗಿ ಜೆಡಿಎಸ್ ನಿಯೋಗವು ಪ್ರಧಾನಿ ಮೋದಿಯನ್ನು ಭೇಟಿಯಾಗಿದೆ. ಈ ಬಗ್ಗೆ ʼಎಕ್ಸ್ʼ ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಪ್ರಧಾನಿ ಮೋದಿ, ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರನ್ನು ಭೇಟಿಯಾಗುವುದು ಯಾವಾಗಲೂ ಸಂತಸದ ವಿಚಾರ ಎಂದು ಬರೆದುಕೊಂಡಿದ್ದಾರೆ.
Always a delight to meet former PM Shri @H_D_Devegowda Ji, Shri @hd_kumaraswamy Ji and Shri HD Revanna Ji.
— Narendra Modi (@narendramodi) December 21, 2023
India greatly cherishes Deve Gowda Ji's exemplary contribution to the nation's progress. His thoughts on diverse policy matters are insightful and futuristic. pic.twitter.com/Xa3YImOLYz