ವಿಜಯಪುರ/ಬೆಂಗಳೂರು:
ರಾಜ್ಯ ವಿದಾನಮಂಡಲದ ಅಧಿವೇಶನ ಇಂದಿನಿಂದ ಆರಂಭವಾಗುತ್ತಿರುವ ಸಮಯದಲ್ಲೆ ವಿಯಪುರ ಜಿಲ್ಲೆ ಸಿಂಧಗಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ(85) ವಿಧಿವಶರಾಗಿದ್ದಾರೆ.
ಉಸಿರಾಟದ ತೊಂದರೆ ಹಿನ್ನಲೆಯಲ್ಲಿ ಬನ್ನೇರುಘಟ್ಟ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ತಡರಾತ್ರಿ ಒಂದು ವಿಧಿವಶರಾಗಿದ್ದಾರೆ.
ಸಿಂಧಗಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕರಾಗಿದ್ದ ಅವರು ಮೈತ್ರಿ ಸರ್ಕಾರದಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಸೆಪ್ಟಂಬರ್ 29, 1937 ರಂದು ಜನಿಸಿದ ಅವರು 1994 ರಲ್ಲಿ ಮೊದಲ ಬಾರಿಗೆ ಜನತಾದಳದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.
ಮುಖ್ಯಮಂತ್ರಿ ಕಂಬನಿ
ಮಾಜಿ ಪ್ರಧಾನಿ ದೇವೇಗೌಡರ ಮಾನಸ ಪುತ್ರ ಎಂದೇ ಖ್ಯಾತರಾಗಿದ್ದ , ಮಾಜಿ ಸಚಿವ ಹಾಗೂ ಸಿಂಧಗಿ ಶಾಸಕ ಎಂ. ಸಿ. ಮನಗೂಳಿ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಎರಡು ಬಾರಿ ಶಾಸಕರಾಗಿ, ಸಚಿವರಾಗಿ ಸೇವೆ ಸಲ್ಲಿಸಿದ್ದ, ಅವರು ಸರಳ, ಸಜ್ಜನ ರಾಜಕಾರಣಿಯಾಗಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.
ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬದವರು ಹಾಗೂ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. (2/2)
— CM of Karnataka (@CMofKarnataka) January 28, 2021
ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬ ಹಾಗೂ ಅವರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.ತೋಟಗಾರಿಕೆ ಇಲಾಖೆ ಸಚಿವರಾಗಿ ಮನಗೂಳಿ ಜಿಲ್ಲೆಗೆ ತೋಟಗಾರಿಕೆ ಕಾಲೇಜು ಸ್ಥಾಪಿಸುವಲ್ಲಿ ಸಫಲರಾಗಿದ್ದರು. ಅಲ್ಲದೇ ಸದರಿ ಕಾಲೇಜು ತಮ್ಮ ಕ್ಷೇತ್ರದ ಆಲಮೇಲದಲ್ಲಿಯೇ ಆಗಬೇಕೆಂಬ ಕನಸು ಕಂಡಿದ್ದರು. ಅದಕ್ಕಾಗಿ ಸಾಕಷ್ಟು ಪ್ರಯತ್ನ ಮಾಡಿದ್ದರು.
ದೇವೇಗೌಡ, ಕುಮಾರಸ್ವಾಮಿ ಸಂತಾಪ
ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ ನಿಧನಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ಎಚ್.ಡಿ.ದೇವೇಗೌಡ, ರಾಜಕೀಯ ಮತ್ತು ವೈಯಕ್ತಿಕವಾಗಿ ನನ್ನ ಹಲವು ದಶಕಗಳ ಒಡನಾಡಿಯಾಗಿದ್ದ ಮಾಜಿ ಸಚಿವ, ಸಿಂದಗಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕರಾದ ಎಂ.ಸಿ. ಮನಗೂಳಿ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಆಘಾತವಾಗಿದೆ. ಭಗವಂತ ಅವರ ಕುಟುಂಬ ಮತ್ತು ಅಪಾರ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ಸಂತಾಪ ಸೂಚಿಸಿದ್ದಾರೆ.
ರಾಜಕೀಯ ಮತ್ತು ವೈಯಕ್ತಿಕವಾಗಿ ನನ್ನ ಹಲವು ದಶಕಗಳ ಒಡನಾಡಿಯಾಗಿದ್ದ ಮಾಜಿ ಸಚಿವ, ಸಿಂದಗಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕರಾದ ಶ್ರೀ ಎಂ.ಸಿ. ಮನಗೂಳಿ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಆಘಾತವಾಗಿದೆ. ಭಗವಂತ ಅವರ ಕುಟುಂಬ ಮತ್ತು ಅಪಾರ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಕರುಣಿಸಲಿ. pic.twitter.com/8jndpLN4sn
— H D Devegowda (@H_D_Devegowda) January 28, 2021
ಕುಮಾರಸ್ವಾಮಿ ಟ್ವೀಟ್ ಮಾಡಿ, ನನ್ನ ಮಾರ್ಗದರ್ಶಕರಂತೆ ಇದ್ದ, ಜೆಡಿಎಸ್ ಪಕ್ಷದ ಪ್ರಬಲ ಪ್ರತಿಪಾದಕರಾಗಿದ್ದ, ದೇವೇಗೌಡರ ಪ್ರತಿಮೆ ಸ್ಥಾಪಿಸಿ ಅವರನ್ನು ದೇವರಂತೆ ಕಾಣುತ್ತಿದ್ದ ಎಂ.ಸಿ.ಮನಗೂಳಿ ಅವರು ಇಂದು ನಿಧನರಾಗಿದ್ದಾರೆ. ಅಧಿಕಾರ ಇರಲಿ, ಇರದೇ ಹೋಗಲಿ ಅವರು ಎಂದೂ ನಮ್ಮವರೇ ಆಗಿದ್ದರು. ಮನಗೂಳಿ ಅವರ ಅಗಲಿಕೆ ಜೆಡಿಎಸ್ ಕುಟುಂಬಕ್ಕೆ ಆದ ನಷ್ಟ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಂತಾಪ ಸೂಚಿಸಿದ್ದಾರೆ.
ನನ್ನ ಮಾರ್ಗದರ್ಶಕರಂತೆ ಇದ್ದ, ಜೆಡಿಎಸ್ ಪಕ್ಷದ ಪ್ರಬಲ ಪ್ರತಿಪಾದಕರಾಗಿದ್ದ, ದೇವೇಗೌಡರ ಪ್ರತಿಮೆ ಸ್ಥಾಪಿಸಿ ಅವರನ್ನು ದೇವರಂತೆ ಕಾಣುತ್ತಿದ್ದ ಎಂ.ಸಿ.ಮನಗೂಳಿ ಅವರು ಇಂದು ನಿಧನರಾಗಿದ್ದಾರೆ. ಅಧಿಕಾರ ಇರಲಿ, ಇರದೇ ಹೋಗಲಿ ಅವರು ಎಂದೂ ನಮ್ಮವರೇ ಆಗಿದ್ದರು. ಮನಗೂಳಿ ಅವರ ಅಗಲಿಕೆ ಜೆಡಿಎಸ್ ಕುಟುಂಬಕ್ಕೆ ಆದ ನಷ್ಟ. ಅವರ ಆತ್ಮಕ್ಕೆ ಶಾಂತಿ ಸಿಗಲಿ. pic.twitter.com/AVDKDo8TRJ
— H D Kumaraswamy (@hd_kumaraswamy) January 28, 2021