ಬೆಂಗಳೂರು:
ಜೆಡಿಎಸ್ ಹಿರಿಯ ಮುಖಂಡ ಬಸವರಾಜ ಹೊರಟ್ಟಿ, ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ.
ಸಭಾಪತಿ ಸ್ಥಾನಕ್ಕೆ ಪ್ರತಾಪ್ಚಂದ್ರ ಶೆಟ್ಟಿ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಇಂದು ಚುನಾವಣೆ ನಿಯೋಜನೆಗೊಂಡಿತ್ತು.
ವಿಧಾನಪರಿಷತ್ತಿನ ನೂತನ ಸಭಾಪತಿಗಳಾಗಿ ಜೆಡಿಎಸ್ನ ಮಾನ್ಯ ಹಿರಿಯ ಸದಸ್ಯರಾದ ಶ್ರೀ ಬಸವರಾಜ ಹೊರಟ್ಟಿ ಅವರು ಚುನಾಯಿತರಾಗಿದ್ದಾರೆ@CMofKarnataka @BSYBJP @HorattiOfficial pic.twitter.com/tR56jLwURx
— DIPR Karnataka (@KarnatakaVarthe) February 9, 2021
75 ಸದಸ್ಯರ ಬಲದಲ್ಲಿರುವ ವಿಧಾನ ಪರಿಷತ್ನಲ್ಲಿ ಬಿಜೆಪಿ 31 ಸದಸ್ಯರನ್ನು ಹೊಂದಿದ್ದರೆ ಕಾಂಗ್ರೆಸ್ 28, ಜೆಡಿಎಸ್ 13 ಸದಸ್ಯರನ್ನು ಹಾಗೂ ಒಂದು ಪಕ್ಷೇತರ ಸದಸ್ಯರಿದ್ದಾರೆ. ಆದರೆ ಸಭಾಪತಿ ಸ್ಥಾನಕ್ಕೆ ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆ ನೀಡಿದ ಕಾರಣ ಆ ಸ್ಥಾನ ಖಾಲಿಯಿತ್ತು.
ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್ನ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ನೂತನ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ನಜೀರ್ ಅಹಮದ್ ನಾಮಪತ್ರ ಸಲ್ಲಿಸಿದ್ದರೂ, ನಜೀರ್ ಅಹಮ್ಮದ್ ಸೇರಿದಂತೆ ಯಾವುದೇ ಕಾಂಗ್ರೆಸ್ ಸದಸ್ಯರು ಚುನಾವಣೆ ಪ್ರಕ್ರಿಯೆಯಲ್ಲಿ ಭಾಗಿಯಾಗಲಿಲ್ಲ. ಕಾಂಗ್ರೆಸ್ ಸದಸ್ಯರ ಗೋಜುಗದ್ದಲದ ನಡುವೆ ಮತದಾನ ನಡೆಯದೇ ಚುನಾವಣೆ ಪೂರ್ಣವಾಗಿದ್ದು, ಬಿಜೆಪಿ ಬೆಂಬಲದೊಂದಿಗೆ ಬಸವರಾಜ ಹೊರಟ್ಟಿ ಆಯ್ಕೆಯಾಗಿದ್ದಾರೆ.