Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ನವೀನ್ ಸಾವಿನ ಬೆನ್ನಲ್ಲೇ ನೀಟ್ ​ ಪ್ರವೇಶ ಪರೀಕ್ಷೆ ವಿರುದ್ಧ ಸಮರ ಸಾರಿದ ಕುಮಾರಸ್ವಾಮಿ
  • ಬೆಂಗಳೂರು ನಗರ

ನವೀನ್ ಸಾವಿನ ಬೆನ್ನಲ್ಲೇ ನೀಟ್ ​ ಪ್ರವೇಶ ಪರೀಕ್ಷೆ ವಿರುದ್ಧ ಸಮರ ಸಾರಿದ ಕುಮಾರಸ್ವಾಮಿ

The Bengaluru Live March 3, 2022 2:00 PM 1 minute read
📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

ಬೆಂಗಳೂರು: ನೀಟ್‌ ವ್ಯವಸ್ಥೆಯಿಂದ ಬಡ ಮತ್ತು ಮಧ್ಯಮ ವರ್ಗದ, ಗ್ರಾಮೀಣ ವಿದ್ಯಾರ್ಥಿಗಳ ವೈದ್ಯಶಿಕ್ಷಣದ ಕನಸು ನುಚ್ಚುನೂರು ಆಗುತ್ತಿದೆ ಎಂದು ಕಿಡಿಕಾರಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ವೈದ್ಯಶಿಕ್ಷಣ ವೆಚ್ಚದ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ನೀಡಿರುವ ಹೇಳಿಕೆ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದ್ದಾರೆ.

ನೀಟ್‌ ಬಂದ ಮೇಲೆ ಟ್ಯೂಷನ್‌ ದಂಧೆ ಮೇರೆ ಮೀರಿದ್ದು, ಅದಕ್ಕೆ ಕೇಂದ್ರ ಸರಕಾರವೇ ಪ್ರೋತ್ಸಾಹ ನೀಡುತ್ತಿರುವಂತಿದೆ. ಕೇಂದ್ರ ಸಚಿವರ ಹೇಳಿಕೆ ಅನೇಕ ಗುಮಾನಿಗಳಿಗೆ ಕಾರಣವಾಗಿದೆ ಎಂದು ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಮಾಜಿ ಮುಖ್ಯಮಂತ್ರಿಗಳು ಸರಣಿ ಟ್ವೀಟ್‌ ಮಾಡಿದ್ದು, ಅದರ ಪೂರ್ಣಪಾಠ ಇಲ್ಲಿದೆ.

ವೈದ್ಯಶಿಕ್ಷಣದ ಕನಸು ಕಾಣುವ ಬಡ, ಮಧ್ಯಮ ವರ್ಗದ ಬದುಕನ್ನು ಛಿದ್ರಗೊಳಿಸುತ್ತಿರುವ ನೀಟ್ (ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ- NEET), ವಿದ್ಯಾರ್ಥಿಗಳು & ಪೋಷಕರ ಪಾಲಿಗೆ ಮರಣಶಾಸನವಾಗಿದೆ. ಉನ್ನತ ಶಿಕ್ಷಣವನ್ನು ಉಳ್ಳವರಿಗೆ ಮೀಸಲಿಟ್ಟು ಉಳಿದವರಿಗೆ ವ್ಯವಸ್ಥಿತವಾಗಿ ನಿರಾಕರಿಸಲಾಗುತ್ತಿದೆ.

ಪ್ರಶ್ನೆ ಮಾಡಿದರೆ ದ್ರೋಹವೇ? ಧನದಾಹವೇ?
ಕರ್ನಾಟಕದ ಉನ್ನತ ಶಿಕ್ಷಣ ಸಚಿವರು ಕಟ್ಟಿರುವ ಈ ಹಣಿಪಟ್ಟಿ ಬಗ್ಗೆ ಏನೂ ಹೇಳಬೇಕೋ ಕಾಣೆ. ನೀಟ್ ವಿರೋಧಿಸುವವರು ಧನಧಾಹಿಗಳು, ದ್ರೋಹಿಗಳು ಎಂದು ಅವರು ಯಾರನ್ನು ಉದ್ದೇಶಿಸಿ ಹೇಳಿದ್ದು ಎನ್ನುವುದನ್ನು ಅವರೇ ತಿಳಿಸಬೇಕು. 2/7

— H D Kumaraswamy (@hd_kumaraswamy) March 3, 2022

ಉಕ್ರೇನ್ʼಗೆ ಮೆಡಿಕಲ್ ಓದಲು ಹೋಗಿ ರಷ್ಯಾ ದಾಳಿಗೆ ತುತ್ತಾದ ವಿದ್ಯಾರ್ಥಿ ನವೀನ್ ದುರಂತ ಸಾವು ʼ ನೀಟ್ ವ್ಯವಸ್ಥೆಯ ನಿರ್ಲಜ್ಜ ಮುಖʼವನ್ನು ಇಡೀ ದೇಶಕ್ಕೆ ದರ್ಶನ ಮಾಡಿಸಿದೆ. ʼಅರ್ಹತೆʼ ನೆಪದಲ್ಲಿ ಪ್ರತಿಭಾವಂತ ಆರ್ಥಿಕ ದುರ್ಬಲ & ಗ್ರಾಮೀಣ ವಿದ್ಯಾರ್ಥಿಗಳಿಗೆ ಮಾಡಲಾಗುತ್ತಿರುವ ʼಅನ್ಯಾಯʼಕ್ಕೆ ಅಂತ್ಯ ಹಾಡಬೇಕಿದೆ.

10ನೇ ತರಗತಿಯಲ್ಲಿ 96%, 2ನೇ ಪಿಯುಸಿಯಲ್ಲಿ 97% ಅಂಕ ಗಳಿಸಿದ್ದರೂ ನವೀನ್ʼಗೆ ʼಜಗತ್ತಿನ ಶಿಕ್ಷಣ ಕಾಶಿʼ ಭಾರತದಲ್ಲಿ ವೈದ್ಯಸೀಟು ಸಿಗಲ್ಲ. ಗ್ರಾಮೀಣ ವಿದ್ಯಾರ್ಥಿಯೊಬ್ಬ ಇಷ್ಟು ಉತ್ತಮ ಅಂಕ ಗಳಿಸುವುದು ಸುಲಭವಲ್ಲ. ಆದರೂ, ಆತನಿಗೆ ನಮ್ಮ ದೇಶದಲ್ಲಿ ವೈದ್ಯಶಿಕ್ಷಣವನ್ನು ನಿರಾಕರಿಸಲಾಗಿದೆ.

ಭಾರತದಲ್ಲಿ ನಿರಾಕರಿಸಲ್ಪಟ್ಟ ಶಿಕ್ಷಣವನ್ನು ಹುಡುಕಿಕೊಂಡು ಉಕ್ರೇನ್ʼಗೆ ಹೋಗಿ, ಅಲ್ಲಿ ಕಲಿತು ಇನ್ನೊಬ್ಬರ ಜೀವ ಉಳಿಸಲು ನೂರುಕಾಲ ಬಾಳಿ ಬದುಕಬೇಕಿದ್ದ ನವೀನ್ ಇಂದು ಜೀವ ಕಳೆದುಕೊಂಡು ʼವಿಶ್ವಗುರುʼ ಆಗಬೇಕೆಂದು ಹಾತೊರೆಯುತ್ತಿರುವ ʼಭಾರತದ ಆತ್ಮಸಾಕ್ಷಿʼಗೆ ಪ್ರಶ್ನೆಯಾಗಿದ್ದಾನೆ. ಇದಕ್ಕೆ ಯಾರು ಹೊಣೆ?

ಆದರೂ, ಉನ್ನತ ಶಿಕ್ಷಣ ಸಚಿವ ಮಾನ್ಯ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ದ್ರೋಹಿಗಳು, ಧನಧಾಹಿಗಳು ಎಂದು ನಾಲಿಗೆ ಜಾರಿ, ತಮ್ಮ ಉನ್ನತ ಗುಣವನ್ನು ಜಗಜ್ಜಾಹೀರು ಮಾಡಿಕೊಂಡಿದ್ದಾರೆ. 4/7

— H D Kumaraswamy (@hd_kumaraswamy) March 3, 2022

ನೀಟ್ ಭಾರತದ ಮಧ್ಯಮ, ಬಡವರ್ಗದ ಮಕ್ಕಳ ಮೆಡಿಕಲ್ ಕನಸನ್ನು ಮರೀಚಿಕೆಯನ್ನಾಗಿಸಿದೆ. ಅದು ವಕ್ಕರಿಸಿದ ಮೇಲೆ ʼಟ್ಯೂಷನ್ ಅಂಗಡಿʼಗಳು ನಾಯಿಕೊಡೆಗಳಂತೆ ಮೇಲೆದ್ದಿವೆ. ಕೋಟಿ ಕೋಟಿ ವ್ಯಾಪಾರ ಆಗುತ್ತಿದೆ. ಅವು ವಿದ್ಯಾರ್ಥಿಗಳಿಂದ ಲಕ್ಷ ಲಕ್ಷ ಪೀಕುತ್ತಿವೆ ಮತ್ತೂ ಶೇ.99ರಷ್ಟು ಕೋಚಿಂಗ್ ಪಡೆದ ವಿದ್ಯಾರ್ಥಿಗಳೇ ನೀಟ್ ಪಾಸ್ ಮಾಡುತ್ತಿದ್ದಾರೆ!

ಸರಕಾರಿ ಶಾಲೆ-ಕಾಲೇಜು ವಿದ್ಯಾರ್ಥಿಗಳಿಗೆ ನೀಟ್ ತೇರ್ಗಡೆ ಕಷ್ಟಸಾಧ್ಯ. ಈ ದೌರ್ಬಲ್ಯವನ್ನರಿತೇ ʼಟ್ಯೂಷನ್ ಅಂಗಡಿʼಗಳು ಮಾರುಕಟ್ಟೆ ವಿಸ್ತರಿಸಿ ನವೀನ್ʼರಂಥ ವಿದ್ಯಾರ್ಥಿಗಳ ಶವಗಳ ಮೇಲೆ ರಣಕೇಕೆ ಹಾಕುತ್ತಿವೆ. ನೀಟ್ ಹೆಸರಿನಲ್ಲಿ ನೀಟಾಗಿ ಉಳ್ಳವರಿಗೆ ವೈದ್ಯ ಶಿಕ್ಷಣವನ್ನು ʼದಾಸೋಹʼ ಮಾಡುವ ದಂಧೆ ವಿರುದ್ಧ ಎಲ್ಲರೂ ದನಿ ಎತ್ತಬೇಕಿದೆ.

ನೀಟ್ ಬಂದ ಮೇಲೆ ಬಡ, ಮಧ್ಯಮ ವರ್ಗದ ಮಕ್ಕಳಿಗೆ ಅನ್ಯಾಯ ಆಗಿಲ್ಲವೇ? ಲಕ್ಷ ಲಕ್ಷ ಕಿತ್ತು ಪೋಷಕರ ರಕ್ತ ಹೀರುವ ಟ್ಯೂಷನ್ ಅಂಗಡಿಗಳು ಸರಕಾರದ ಕಣ್ಣಿಗೆ ಕಾಣುತ್ತಿಲ್ಲವೇ? ನೀಟ್ ಸುಳಿಗೆ ಸಿಕ್ಕಿ ಜೀವ ಕಳೆದುಕೊಂಡ ಮಕ್ಕಳ ಅತ್ಮರೋಧನೆ ಕೇಳುತ್ತಿಲ್ಲವೇ? 6/7

— H D Kumaraswamy (@hd_kumaraswamy) March 3, 2022

ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಅವರ ಹೇಳಿಕೆ ನನಗೆ ಅಚ್ಚರಿ ತಂದಿದೆ. “ವಿದೇಶದಲ್ಲಿ ವೈದ್ಯಪದವಿ ಪಡೆಯುವ 90% ವಿದ್ಯಾರ್ಥಿಗಳು ಭಾರತದಲ್ಲಿ ಅಗತ್ಯ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದಿಲ್ಲ. ವಿದೇಶ & ಭಾರತದಲ್ಲಿ ವೈದ್ಯಶಿಕ್ಷಣಕ್ಕೆ ಆಗುವ ವೆಚ್ಚದ ಬಗ್ಗೆ ಚರ್ಚೆ ಬೇಡ. ಆ ಚರ್ಚೆಗೆ ಇದು ಸಮಯವೂ ಅಲ್ಲ” ಎಂದಿದ್ದಾರೆ ಅವರು.

ಕೇಂದ್ರದ ಕಾನೂನು & ಸಂಸದೀಯ ವ್ಯವಹಾರ ಖಾತೆ ಮಂತ್ರಿಗಳೇ, “ವೆಚ್ಚದ ಹೋಲಿಕೆ ಮಾಡಲು ನಾನು ಬಯಸುವುದಿಲ್ಲ. ಯಾವುದೇ ವಿವಾದ ಅಥವಾ ಚರ್ಚೆಗೆ ನಾನೀಗ ಕಾರಣನಾಗುವುದಿಲ್ಲ” ಎಂದು ಹೇಳುವುದರ ಹಿಂದಿನ ಮರ್ಮವೇನು? ಅವರ ಹೇಳಿಕೆ ಅನೇಕ ಗುಮಾನಿಗಳಿಗೆ ಕಾರಣವಾಗಿದೆ.

ʼಟ್ಯೂಷನ್ ಅಂಗಡಿʼಗಳ ಹಿಂದೆ ಯಾರಿದ್ದಾರೆ? ಯಾರಿಗೂ ಕಾಣದಂತೆ ಕೇಂದ್ರ ಸರಕಾರವೇ ಅವಿತು ಕೂತಿದೆಯಾ? ನೀಟ್ ಸೃಷ್ಟಿಸಿದ ʼಶೈಕ್ಷಣಿಕ ಅರಾಜಕತೆʼಗೆ ಇನ್ನೆಷ್ಟು ವಿದ್ಯಾರ್ಥಿಗಳು ಬಲಿಯಾಗಬೇಕು?

ಇದೆಲ್ಲವೂ ಸರಕಾರಗಳ ಕಣ್ಣಿಗೆ ಕಾಣುತ್ತಿಲ್ಲ, ವಿದ್ಯಾರ್ಥಿಗಳ ಆರ್ತನಾದ ಕೇಳುತ್ತಿಲ್ಲ ಎಂದರೆ ಸಚಿವರು ಮತ್ತು ಸರಕಾರಕ್ಕೆ ಕಣ್ಣು, ಕಿವಿ ಇಲ್ಲ ಎಂದು ಭಾವಿಸಬೇಕಾಗುತ್ತದೆ. 7/7#ನೀಟ್_ನಿಲ್ಲಲಿ #stopneet #SaveKAStudents

— H D Kumaraswamy (@hd_kumaraswamy) March 3, 2022

ನವೀನ್ ಸಾವು ನೀಟ್ ಸಾಚಾತನವನ್ನೇ ಪ್ರಶ್ನಿಸಿದೆ. ಬಡಮಕ್ಕಳ ರಕ್ತವನ್ನು ಹೀರುವ, ಶ್ರೀಮಂತರಿಗಷ್ಟೇ ಮೀಸಲಾಗಿರುವ ವೈದ್ಯಶಿಕ್ಷಣದ ʼವ್ಯಾಪಾರೀಕರಣʼ ದೇಶಕ್ಕೆ ಅಪಮಾನಕರ. ವಿಶ್ವಗುರು, ರಾಷ್ಟ್ರೀಯ ಶಿಕ್ಷಣ ನೀತಿ ಎಂದೆಲ್ಲಾ ಬೊಬ್ಬೆ ಹೊಡೆಯುವ ಕೇಂದ್ರವು ಒಮ್ಮೆ ಶುದ್ಧ ಅಂತಃಕರಣದಿಂದ ಆಲೋಚಿಸಲಿ.”

ಎಂದು ಮಾಜಿ ಮುಖ್ಯಮಂತ್ರಿಗಳು ಒತ್ತಾಯ ಮಾಡಿದ್ದಾರೆ.

About the Author

The Bengaluru Live

Administrator

Visit Website View All Posts

Post navigation

Previous: ರಾಷ್ಟ್ರಧ್ವಜಕ್ಕೆ ಕೇಸರಿಯೇ ನೆಹರು ಪಟೇಲರ ಆಯ್ಕೆಯಾಗಿತ್ತು
Next: ಬೆಂಗಳೂರಲ್ಲಿ ಪ್ರತಿಭಟನೆ, ಮೆರವಣಿಗೆಗೆ ಹೈಕೋರ್ಟ್ ನಿರ್ಬಂಧ

Related Stories

ಡಾ. ಸಮೀಕ್ಷಾ ರೆಡ್ಡಿ ಅವರ ಭಾವಚಿತ್ರ ಮತ್ತು ಬನ್ನೇರುಘಟ್ಟದಲ್ಲಿ ನೀರಾನೆ ಮರಿಯ ಸಮೀಕ್ಷಾ ನಾಮಫಲಕದ ಬಳಿಯ ಸಂದರ್ಶಕರು
  • ಕರ್ನಾಟಕ
  • ಬೆಂಗಳೂರು ನಗರ

ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು

The Bengaluru Live November 10, 2026 10:14 PM
ಸಿಂಗಸಂದ್ರದಲ್ಲಿ ಕಟ್ಟಡದ ಮುಂದೆ ವ್ಯಕ್ತಿಯೊಬ್ಬರಿಗೆ ದಂಡದ ರಸೀದಿ ನೀಡುತ್ತಿರುವ ಸಮವಸ್ತ್ರಧಾರಿ ಬಿಎಸ್‌ಡಬ್ಲ್ಯುಎಂಎಲ್ ಮಾರ್ಷಲ್
  • ಬೆಂಗಳೂರು ನಗರ
  • ಬೆಂಗಳೂರು

ಬೆಂಗಳೂರಿನಲ್ಲಿ ಕಸ ಎಸೆಯುವವರ ವಿರುದ್ಧ ಕಾರ್ಯಾಚರಣೆ: ಬಿಎಸ್‌ಡಬ್ಲ್ಯುಎಂಎಲ್ ಮಾರ್ಷಲ್‌ಗಳಿಂದ 68 ಪ್ರಕರಣ, ₹76,500 ದಂಡ ವಸೂಲಿ

The Bengaluru Live November 9, 2026 11:35 AM
ಇ-ಖಾತಾ ಮೇಳದ ವೇಳೆ ಜೆ.ಪಿ. ನಗರದ ಕಚೇರಿಯಲ್ಲಿ ಸಿಬ್ಬಂದಿ ಕೆಲಸ ಮಾಡುತ್ತಿರುವ ಲ್ಯಾಪ್‌ಟಾಪ್ ಪರದೆಯನ್ನು ಮೂವರು ಅಧಿಕಾರಿಗಳು ನೋಡುತ್ತಿರುವುದು
  • ಬೆಂಗಳೂರು ನಗರ
  • ಬೆಂಗಳೂರು

ಇ-ಖಾತಾ ಮೇಳ: ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ ಒಂದೇ ದಿನ 254 ಹೊಸ ಅರ್ಜಿ ಸ್ವೀಕೃತಿ, 93 ವಿಲೇವಾರಿ

The Bengaluru Live November 8, 2026 5:49 PM

Latest Post

ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ ವಿಧಾನಸೌಧದಲ್ಲಿ ಮಧ್ಯಂತರ ಬರ ಪರಿಹಾರ ಪಾವತಿಗೆ ಚಾಲನೆ ನೀಡಿದ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ

November 10, 2026 11:27 PM
ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು ಡಾ. ಸಮೀಕ್ಷಾ ರೆಡ್ಡಿ ಅವರ ಭಾವಚಿತ್ರ ಮತ್ತು ಬನ್ನೇರುಘಟ್ಟದಲ್ಲಿ ನೀರಾನೆ ಮರಿಯ ಸಮೀಕ್ಷಾ ನಾಮಫಲಕದ ಬಳಿಯ ಸಂದರ್ಶಕರು
  • ಕರ್ನಾಟಕ
  • ಬೆಂಗಳೂರು ನಗರ

ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು

November 10, 2026 10:14 PM
ನ.13ರಂದು ಬೆಂಗಳೂರಿನಲ್ಲಿ ₹160 ಕೋಟಿ ವೆಚ್ಚದ ಸಂಕುಚಿತ ಜೈವಿಕ ಅನಿಲ ಘಟಕಕ್ಕೆ ಪ್ರಧಾನಿ ಮೋದಿ ವರ್ಚುವಲ್ ಶಿಲಾನ್ಯಾಸ ಪರಿಶೀಲನೆಯ ವೇಳೆ ಜೈವಿಕ ಅನಿಲ ಘಟಕದಲ್ಲಿ ಹಸಿರು ಚೌಕಟ್ಟಿನ ಗ್ಯಾಸ್ ಸಿಲಿಂಡರ್‌ಗಳ ಸುತ್ತ ನಿಂತಿರುವ ಪುರುಷರು
  • ಬೆಂಗಳೂರು

ನ.13ರಂದು ಬೆಂಗಳೂರಿನಲ್ಲಿ ₹160 ಕೋಟಿ ವೆಚ್ಚದ ಸಂಕುಚಿತ ಜೈವಿಕ ಅನಿಲ ಘಟಕಕ್ಕೆ ಪ್ರಧಾನಿ ಮೋದಿ ವರ್ಚುವಲ್ ಶಿಲಾನ್ಯಾಸ

November 10, 2026 5:55 PM
ನ.17-18ರಂದು ಬೆಂಗಳೂರಿನಲ್ಲಿ ದೇಶದ ಮೊದಲ ಸಿಡಬ್ಲ್ಯುಪಿ ಭಾರತ ಪ್ರಾದೇಶಿಕ ಸಮ್ಮೇಳನ; ಓಂ ಬಿರ್ಲಾ, ಡಿ.ಕೆ. ಶಿವಕುಮಾರ್ ಉದ್ಘಾಟನೆ ಸಿಡಬ್ಲ್ಯುಪಿ ಬ್ಯಾನರ್ ಮತ್ತು ಕರ್ನಾಟಕ ಲಾಂಛನದ ಮುಂದೆ ಮೈಕ್ರೋಫೋನ್‌ಗಳಿರುವ ಮೇಜಿನ ಹಿಂದೆ ನಿಂತಿರುವ ಎಂಟು ಮಂದಿ, ಅವರಲ್ಲಿ ಇಬ್ಬರು ಕಾಗದ ಹಿಡಿದಿದ್ದಾರೆ
  • ಕರ್ನಾಟಕ
  • ರಾಜಕೀಯ

ನ.17-18ರಂದು ಬೆಂಗಳೂರಿನಲ್ಲಿ ದೇಶದ ಮೊದಲ ಸಿಡಬ್ಲ್ಯುಪಿ ಭಾರತ ಪ್ರಾದೇಶಿಕ ಸಮ್ಮೇಳನ; ಓಂ ಬಿರ್ಲಾ, ಡಿ.ಕೆ. ಶಿವಕುಮಾರ್ ಉದ್ಘಾಟನೆ

November 10, 2026 5:03 PM
ಬ್ಲೂ ಲೈನ್ ಮೆಟ್ರೋ ಪ್ರಾಯೋಗಿಕ ಸಂಚಾರ ಬೈಯಪ್ಪನಹಳ್ಳಿಯಿಂದ ಕೆ.ಆರ್. ಪುರ, ದೊಡ್ಡನೆಕ್ಕುಂದಿಯತ್ತ ಮುಂದುವರಿದಿದೆ: ಕೃಷ್ಣ ಬೈರೇಗೌಡ ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಹೂವಿನ ಹಾರ ಹಾಕಿದ ನೀಲಿ-ಬೆಳ್ಳಿ ಬಣ್ಣದ ಮೆಟ್ರೋ ರೈಲಿನ ಪಕ್ಕ ಸುರಕ್ಷತಾ ಕವಚ, ಹೆಲ್ಮೆಟ್ ಧರಿಸಿ ನಿಂತಿರುವ ಯೋಜನಾ ಸಿಬ್ಬಂದಿ
  • ಬೆಂಗಳೂರು

ಬ್ಲೂ ಲೈನ್ ಮೆಟ್ರೋ ಪ್ರಾಯೋಗಿಕ ಸಂಚಾರ ಬೈಯಪ್ಪನಹಳ್ಳಿಯಿಂದ ಕೆ.ಆರ್. ಪುರ, ದೊಡ್ಡನೆಕ್ಕುಂದಿಯತ್ತ ಮುಂದುವರಿದಿದೆ: ಕೃಷ್ಣ ಬೈರೇಗೌಡ

November 10, 2026 4:52 PM
ಕರ್ನಾಟಕ ಹವಾಮಾನ: ನವೆಂಬರ್ 14ರವರೆಗೆ ಒಣ ಹವೆ; ನವೆಂಬರ್ 15-16ರಂದು ಬೆಂಗಳೂರು, ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸಾಧ್ಯತೆ ಗ್ರಾಮೀಣ ಪ್ರದೇಶದ ಮೇಲೆ ಮೋಡ ಕವಿದ ಆಕಾಶದ AI ಸೃಷ್ಟಿಸಿದ ಪ್ರಾತಿನಿಧಿಕ ಚಿತ್ರ
  • ಕರ್ನಾಟಕ
  • ಬೆಂಗಳೂರು

ಕರ್ನಾಟಕ ಹವಾಮಾನ: ನವೆಂಬರ್ 14ರವರೆಗೆ ಒಣ ಹವೆ; ನವೆಂಬರ್ 15-16ರಂದು ಬೆಂಗಳೂರು, ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸಾಧ್ಯತೆ

November 10, 2026 4:38 PM

ನೀವು ತಪ್ಪಿಸಿಕೊಂಡಿರಬಹುದು

ವಿಧಾನಸೌಧದಲ್ಲಿ ಮಧ್ಯಂತರ ಬರ ಪರಿಹಾರ ಪಾವತಿಗೆ ಚಾಲನೆ ನೀಡಿದ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ

The Bengaluru Live November 10, 2026 11:27 PM
ಡಾ. ಸಮೀಕ್ಷಾ ರೆಡ್ಡಿ ಅವರ ಭಾವಚಿತ್ರ ಮತ್ತು ಬನ್ನೇರುಘಟ್ಟದಲ್ಲಿ ನೀರಾನೆ ಮರಿಯ ಸಮೀಕ್ಷಾ ನಾಮಫಲಕದ ಬಳಿಯ ಸಂದರ್ಶಕರು
  • ಕರ್ನಾಟಕ
  • ಬೆಂಗಳೂರು ನಗರ

ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು

The Bengaluru Live November 10, 2026 10:14 PM
ಪರಿಶೀಲನೆಯ ವೇಳೆ ಜೈವಿಕ ಅನಿಲ ಘಟಕದಲ್ಲಿ ಹಸಿರು ಚೌಕಟ್ಟಿನ ಗ್ಯಾಸ್ ಸಿಲಿಂಡರ್‌ಗಳ ಸುತ್ತ ನಿಂತಿರುವ ಪುರುಷರು
  • ಬೆಂಗಳೂರು

ನ.13ರಂದು ಬೆಂಗಳೂರಿನಲ್ಲಿ ₹160 ಕೋಟಿ ವೆಚ್ಚದ ಸಂಕುಚಿತ ಜೈವಿಕ ಅನಿಲ ಘಟಕಕ್ಕೆ ಪ್ರಧಾನಿ ಮೋದಿ ವರ್ಚುವಲ್ ಶಿಲಾನ್ಯಾಸ

The Bengaluru Live November 10, 2026 5:55 PM
ಸಿಡಬ್ಲ್ಯುಪಿ ಬ್ಯಾನರ್ ಮತ್ತು ಕರ್ನಾಟಕ ಲಾಂಛನದ ಮುಂದೆ ಮೈಕ್ರೋಫೋನ್‌ಗಳಿರುವ ಮೇಜಿನ ಹಿಂದೆ ನಿಂತಿರುವ ಎಂಟು ಮಂದಿ, ಅವರಲ್ಲಿ ಇಬ್ಬರು ಕಾಗದ ಹಿಡಿದಿದ್ದಾರೆ
  • ಕರ್ನಾಟಕ
  • ರಾಜಕೀಯ

ನ.17-18ರಂದು ಬೆಂಗಳೂರಿನಲ್ಲಿ ದೇಶದ ಮೊದಲ ಸಿಡಬ್ಲ್ಯುಪಿ ಭಾರತ ಪ್ರಾದೇಶಿಕ ಸಮ್ಮೇಳನ; ಓಂ ಬಿರ್ಲಾ, ಡಿ.ಕೆ. ಶಿವಕುಮಾರ್ ಉದ್ಘಾಟನೆ

The Bengaluru Live November 10, 2026 5:03 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ
  • ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು
  • ನ.13ರಂದು ಬೆಂಗಳೂರಿನಲ್ಲಿ ₹160 ಕೋಟಿ ವೆಚ್ಚದ ಸಂಕುಚಿತ ಜೈವಿಕ ಅನಿಲ ಘಟಕಕ್ಕೆ ಪ್ರಧಾನಿ ಮೋದಿ ವರ್ಚುವಲ್ ಶಿಲಾನ್ಯಾಸ
  • ನ.17-18ರಂದು ಬೆಂಗಳೂರಿನಲ್ಲಿ ದೇಶದ ಮೊದಲ ಸಿಡಬ್ಲ್ಯುಪಿ ಭಾರತ ಪ್ರಾದೇಶಿಕ ಸಮ್ಮೇಳನ; ಓಂ ಬಿರ್ಲಾ, ಡಿ.ಕೆ. ಶಿವಕುಮಾರ್ ಉದ್ಘಾಟನೆ
©Copyright 2025 The Bengaluru Live All rights reserved. | MoreNews by AF themes.