ಬೆಂಗಳೂರು ;- ರಾಜಧಾನಿ ಬೆಂಗಳೂರಿನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಜವಾಹರ್ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು. ಸಿಲಿಕಾನ್ ಸಿಟಿಯಲ್ಲಿ ಉದ್ಯೋಗ ಮಾಡಲು ಬಯಸುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಅಕ್ಟೋಬರ್ 13, 2023ಕ್ಕೆ ಮುನ್ನ ಇ-ಮೇಲ್ ಮಾಡುವ ಮೂಲಕ ಅರ್ಜಿ ಹಾಕಬಹುದು.
ಜವಾಹರ್ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
ಅಭ್ಯರ್ಥಿಗಳ ವಯಸ್ಸು ಗರಿಷ್ಠ 46 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
The post Job Vacancy: ವರ್ಕ್ಶಾಪ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – ಬೆಂಗಳೂರಿನಲ್ಲಿ ಕೆಲಸ appeared first on Ain Live News.