ಕೊರಮಂಗಲ ವಾಟರ್ ಟ್ಯಾಂಕ್ ಜಂಕ್ಷನ್ನಲ್ಲಿ ಸಂಚಾರ ಸುಧಾರಣೆ ಪರಿಶೀಲನೆ ನಡೆಸಿದ ಜಂಟಿ ಪೊಲೀಸ್ ಆಯುಕ್ತ ಕಾರ್ತಿಕ್ ರೆಡ್ಡಿ
ಬೆಂಗಳೂರು: ಬೆಂಗಳೂರು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಕಾರ್ತಿಕ್ ರೆಡ್ಡಿ ಅವರು ಗುರುವಾರ ಅಡುಗೋಡಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಕೊರಮಂಗಲ ವಾಟರ್ ಟ್ಯಾಂಕ್ ಜಂಕ್ಷನ್ನಲ್ಲಿ ಜಂಟಿ ಪರಿಶೀಲನೆ ನಡೆಸಿ, ಪ್ರಸ್ತುತ ಸಂಚಾರ ಪರಿಸ್ಥಿತಿ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಕೈಗೊಳ್ಳಬಹುದಾದ ಸಂಚಾರ ಮಾರ್ಪಾಡುಗಳ ಕುರಿತು ಪರಿಶೀಲನೆ ನಡೆಸಿದರು.
ಎಕ್ಸ್ (X) ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, ಜಂಕ್ಷನ್ನಲ್ಲಿ ವಾಹನ ಸಂಚಾರದ ಹರಿವು, ದಟ್ಟಣೆ ಉಂಟಾಗುವ ಪ್ರದೇಶಗಳು, ಸಾರ್ವಜನಿಕರ ಸಂಚಾರ ಹಾಗೂ ಕಾರ್ಯಾಚರಣೆಗೆ ಸಂಬಂಧಿಸಿದ ಸವಾಲುಗಳನ್ನು ಸಮಗ್ರವಾಗಿ ಮೌಲ್ಯಮಾಪನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಪರಿಶೀಲನೆ ವೇಳೆ ಜಂಕ್ಷನ್ನ ಕಾರ್ಯಕ್ಷಮತೆಯನ್ನು ಹೆಚ್ಚಿಸಲು, ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಲು ಹಾಗೂ ಸಾರ್ವಜನಿಕರಿಗೆ ಆಗುವ ತೊಂದರೆಯನ್ನು ಕಡಿಮೆ ಮಾಡಲು ಸೂಕ್ತ ಸಂಚಾರ ನಿರ್ವಹಣಾ ಕ್ರಮಗಳು ಮತ್ತು ಸಂಚಾರ ಮಾರ್ಪಾಡುಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ.
ನಗರದಲ್ಲಿ ಪರಿಣಾಮಕಾರಿ ಸಂಚಾರ ನಿರ್ವಹಣೆ ಹಾಗೂ ರಸ್ತೆ ಬಳಕೆದಾರರಿಗೆ ಉತ್ತಮ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ಪರಿಶೀಲನೆ ನಡೆಸಲಾಗಿದೆ ಎಂದು ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ.
