Home ರಾಜಕೀಯ June 2, Karnataka Cabinet Meeting — ಎಲ್ಲಾ ಐದು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ :...

June 2, Karnataka Cabinet Meeting — ಎಲ್ಲಾ ಐದು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ : ಮುಖ್ಯಮಂತ್ರಿ ಸಿದ್ಧರಾಮಯ್ಯ

75
0
June 2, Karnataka Cabinet Meeting — Implementation of all five guarantee schemes: Chief Minister Siddaramaiah
June 2, Karnataka Cabinet Meeting — Implementation of all five guarantee schemes: Chief Minister Siddaramaiah

ಬೆಂಗಳೂರು:

ಐದು ಗ್ಯಾರೆಂಟಿಗಳನ್ನು ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ತೀರ್ಮಾನಿಸಿದ್ದು, ಜೂನ್ 2 ರಂದು ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಿಳಿಸಿದರು.

ಅವರು ಇಂದು ಗ್ಯಾರಂಟಿ ಯೋಜನೆಗಳ ಕುರಿತು ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಐದು ಗ್ಯಾರೆಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯ ಅಧಿಕಾರಿಗಳು ಸಚಿವರಿಗೆ ಗ್ಯಾರೆಂಟಿ ಯೋಜನೆಗಳ ಆರ್ಥಿಕ ಪರಿಣಾಮ ಸೇರಿದಂತೆ ವಿವರಗಳ ಪ್ರಾತ್ಯಕ್ಷಿಕೆಯನ್ನು ಸಲ್ಲಿಸಿದ್ದಾರೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.

LEAVE A REPLY

Please enter your comment!
Please enter your name here