ಬೆಂಗಳೂರು: ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ ವೀರಪ್ಪ ನೇಮಕ ಆಗಿದ್ದಾರೆ. ವೀರಪ್ಪ ರನ್ನು ನೇಮಕ ಮಾಡಲು ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತು. ಅದರಂತೆ ನೇಮಕ ಮಾಡಲಾಗಿದೆ.
ಈ ಹಿಂದೆ ಕರ್ನಾಟಕ ಹೈಕೋರ್ಟ್ನ್ಯಾಯಮೂರ್ತಿಯಾಗಿದ್ದ ವೀರಪ್ಪ ಅವರು ಭ್ರಷ್ಟಾಚಾರ ನಿಗ್ರಹ ದಳಕ್ಕೆ ಅಧಿಕಾರವನ್ನು ರದ್ದುಗೊಳಿಸಿ ಲೋಕಾಯುಕ್ತ ಸಂಸ್ಥೆಯ ಅಧಿಕಾರವನ್ನು ಪುನರ್ ಸ್ಥಾಪನೆ ಮಾಡಿದ್ದರು.
ಅಲ್ಲದೇ ಬಿ. ವೀರಪ್ಪ ಅವರು ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಾದ ಪಿಎಸ್ಐ ನೇಮಕಾತಿ ಹಗರಣದ ತನಿಖಾ ವರದಿ ಸಿದ್ದಗೊಳಿಸಿ ಸಿಎಂ ಸಿದ್ದರಾಮಯ್ಯನವರಿಗೆ ಸಲ್ಲಸಿದ್ದರು. ಇದೀಗ ವೀರಪ್ಪ ಅವರನ್ನೇ ರಾಜ್ಯ ಸರ್ಕಾರ, ಕರ್ನಾಟಕ ಉಪ ಲೋಕಾಯುಕ್ತರನ್ನಾಗಿ ನೇಮಿಸಿದೆ.