Home ಬೆಂಗಳೂರು ನಗರ ಟೆಂಡರ್ ಪೂರ್ವ ಪರಿಶೀಲನೆಗೆ ನ್ಯಾಯಮೂರ್ತಿ ರತ್ನಕಲಾ ಅಧ್ಯಕ್ಷತೆಯ ಸಮಿತಿ ರಚನೆ

ಟೆಂಡರ್ ಪೂರ್ವ ಪರಿಶೀಲನೆಗೆ ನ್ಯಾಯಮೂರ್ತಿ ರತ್ನಕಲಾ ಅಧ್ಯಕ್ಷತೆಯ ಸಮಿತಿ ರಚನೆ

88
0
Justice Rathnakala heads panel to vet Karnataka tenders above Rs 50 crore
ನ್ಯಾಯಮೂರ್ತಿ ಶ್ರೀಮತಿ ರತ್ನಕಲಾ

ಆಡಳಿತದಲ್ಲಿ ಪಾರದರ್ಶಕತೆ ಮತ್ತು ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಬಸವರಾಜ ಬೊಮ್ಮಾಯಿ ದಿಟ್ಟ ಹೆಜ್ಜೆ

ಬೆಂಗಳೂರು:

ರಾಜ್ಯದಲ್ಲಿ ವಿವಿಧ ಸರಕು ಮತ್ತು ಸೇವೆ ಪಡೆಯಲು ಕರೆಯುವ ಟೆಂಡರ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ದುಂದು ವೆಚ್ಚಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಡಿಸೆಂಬರ್ ನಲ್ಲಿ ಸರ್ಕಾರ ಹೊರಡಿಸಿದ ಆದೇಶದಂತೆ ಉಚ್ಛನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ಶ್ರೀಮತಿ ರತ್ನಕಲಾ ಅವರ ಅಧ್ಯಕ್ಷತೆಯಲ್ಲಿ ಟೆಂಡರ್ ಪೂರ್ವ ಪರಿಶೀಲನಾ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Justice Rathnakala heads panel to vet Karnataka tenders above Rs 50 crore
Justice Rathnakala heads panel to vet Karnataka tenders above Rs 50 crore

ಜಲ ಸಂಪನ್ಮೂಲ ಇಲಾಖೆಯ ನಿವೃತ್ತ ಕಾರ್ಯದರ್ಶಿ ಬಿ.ಜಿ. ಗುರುಪಾದಸ್ವಾಮಿ (ಎಂಜಿನಿಯರಿಂಗ್ ಪರಿಣತ) ಹಾಗೂ ರಾಜ್ಯ ಲೆಕ್ಕಪತ್ರ ಇಲಾಖೆಯ ನಿವೃತ್ತ ನಿರ್ದೇಶಕ ಕೆ. ನಂದಕುಮಾರ್ (ಹಣಕಾಸು ವಿಷಯ ಪರಿಣತ) ಈ ಸಮಿತಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ.

ಈ ಸಮಿತಿಯು ಈಗಾಗಲೇ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳಂತೆ 50 ಕೋಟಿ ರೂ. ಗಳಿಗೂ ಹೆಚ್ಚು ಮೊತ್ತದ ಟೆಂಡರು ಗಳು ಪಾರದರ್ಶಕ, ನ್ಯಾಯಸಮ್ಮತವಾಗಿರುವ ಕುರಿತು ಪರಿಶೀಲನೆ ನಡೆಸಲಿದೆ.

ಯೋಜನೆಯನ್ನು ರೂಪಿಸಲಾಗಿರುವ ರೀತಿ, ಅದಕ್ಕೆ ತಗುಲುವ ವೆಚ್ಚ ದ ಕುರಿತು ಸಮಿತಿ ಪರಿಶೀಲನೆ ನಡೆಸಲಿದೆ.

LEAVE A REPLY

Please enter your comment!
Please enter your name here