ಕರ್ನಾಟಕ ಆಡಳಿತ ನ್ಯಾಯಮಂಡಳಿಯ ಭವಿಷ್ಯ ಕುರಿತು ನ್ಯಾಯಾಂಗ ಪರಿಣಾಮ ಮೌಲ್ಯಮಾಪನ ವರದಿ ಸಿಎಂಗೆ ಸಲ್ಲಿಕೆ
ಬೆಂಗಳೂರು, ಆಗಸ್ಟ್ 4: ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (ಕೆಎಟಿ)ಯನ್ನು ಮುಂದುವರಿಸಬೇಕೇ ಅಥವಾ ರದ್ದುಗೊಳಿಸಬೇಕೇ ಎಂಬ ಕುರಿತು ಅಧ್ಯಯನ ನಡೆಸಿದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಉಮೇಶ್ ಎಂ. ಅಡಿಗ ಅವರ ನೇತೃತ್ವದ ಸಮಿತಿಯು ಮಂಗಳವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ನ್ಯಾಯಾಂಗ ಪರಿಣಾಮ ಮೌಲ್ಯಮಾಪನ (Judicial Impact Assessment) ವರದಿಯನ್ನು ಸಲ್ಲಿಸಿತು.
ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಸಮಿತಿಯು ವರದಿಯನ್ನು ಮುಖ್ಯಮಂತ್ರಿಗಳಿಗೆ ಹಸ್ತಾಂತರಿಸಿತು.
ಈ ಸಂದರ್ಭದಲ್ಲಿ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
