Home ಕಲಬುರ್ಗಿ ಕೋವಿಡ್ ಲಸಿಕೆ ಪಡೆದ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ

ಕೋವಿಡ್ ಲಸಿಕೆ ಪಡೆದ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ

103
0
bengaluru

ಕಲಬುರಗಿ:

ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ಜಿಲ್ಲೆಯಲ್ಲಿ ಮೊದಲಿಗರಾಗಿ ಖುದ್ದು ಕೋವಿಶೀಲ್ಡ್ ಲಸಿಕೆ ಪಡೆಯುವ ಮೂಲಕ ಕೋವಿಡ್ ನಿಯಂತ್ರಣಕ್ಕೆ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ, ನಗರಾಭಿವೃದ್ಧಿ, ಗೃಹ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿ-ಸಿಬ್ಬಂದಿಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ನೀಡಲಾಗುತ್ತಿರುವ ಲಸಿಕಾಕರಣ ಕಾರ್ಯಕ್ಕೆ ಚಾಲನೆ ನೀಡಿದರು.

Kalaburagi deputy commissioner IAS VV Jyotsna takes covid vaccination

ನಂತರ ಮಾತನಾಡಿದ ಅವರು ಕಳೆದ ಜನವರಿ 16 ರಿಂದ ಆರೋಗ್ಯ ಕಾರ್ಯಕರ್ತರಿಗೆ ಮೊದಲ ಹಂತದಲ್ಲಿ ಕೋವಿಡ್ ಲಸಿಕೆ ನೀಡಲಾಗಿದೆ. ಅದೇ ರೀತಿ ದಿನನಿತ್ಯದ ಜೀವನದಲ್ಲಿ ಸಾರ್ವಜನಿಕರ ಸಂಪರ್ಕದಲ್ಲಿ ಬರುವ ಹೆಚ್ಚಿನ ರಿಸ್ಕ್ ಹೊಂದಿರುವ ಕಂದಾಯ, ನಗರಾಭಿವೃದ್ಧಿ, ಗೃಹ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿ-ಸಿಬ್ಬಂದಿಗಳಿಗೆ ಇಂದಿನಿಂದ ಫೆಬ್ರವರಿ 10ರ ವರೆಗೆ ಮೂರು ದಿನಗಳ ಕಾಲ ಲಸಿಕೆ ನೀಡಲಾಗುತ್ತಿದೆ ಎಂದರು.

ದೇಶದಲ್ಲಿ ನೀಡಲಾಗುತ್ತಿರುವ ಕೋವಿಡ್ ಲಸಿಕೆ ಅತ್ಯಂತ ಸುರಕ್ಷಿತವಾಗಿದ್ದು, ಯಾವುದೇ ಅಡ್ಡಪರಿಣಾಮ ಇಲ್ಲ. ಹೀಗಾಗಿ ಅಧಿಕಾರಿ-ಸಿಬ್ಬಂದಿಗಳು ಭಯಪಡದೆ ಲಸಿಕೆ ಹಾಕಿಸಿಕೊಳ್ಳಬೇಕು. ಈಗ ನಾನು ಲಸಿಕೆ ಹಾಕಿಕೊಂಡಿದ್ದು, ಏನು ತೊಮದರೆ ಇಲ್ಲ ಎಂದರು.

bengaluru
bengaluru

LEAVE A REPLY

Please enter your comment!
Please enter your name here