ಕಲಬುರಗಿ:
ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಮತ್ತಷ್ಟು ಕಠಿಣ ಕ್ರಮಗಳು ಕೈಗೊಂಡಿದ್ದು, ಇದೇ ವಾರದಿಂದ ಮೂರು ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ.
ಜಿಲ್ಲಾದ್ಯಂತ ಈ ವಾರದ ಗುರುವಾರ, ಶುಕ್ರವಾರ ಮತ್ತು ಶನಿವಾರ ಸಂಪೂರ್ಣ ಲಾಕ್ ಡೌನ್ ಜಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಘೋಷಿಸಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 20ರ ಬೆಳಿಗ್ಗೆ 6ರಿಂದ ಮೇ 23ರ ಬೆಳಿಗ್ಗೆ 6 ಗಂಟೆವರೆಗೆ ಮೂರು ದಿನ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತದೆ. ಇದನ್ನು ನೋಡಿಕೊಂಡು ಮುಂದಿನ ದಿನಗಳಲ್ಲಿ ಲಾಕ್ ಡೌನ್ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಕೋವಿಡ್ ಎರಡನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಕಲಬುರಗಿ ಜಿಲ್ಲೆಯಾದ್ಯಂತ ಮೇ.20ರ ಬೆಳಿಗ್ಗೆ 6 ರಿಂದ ಮೇ.23ರ ಬೆಳಿಗ್ಗೆ 6 ಗಂಟೆ ವರೆಗೆ ಅತ್ಯಗತ್ಯ ಸೇವೆಗಳು ಹೊರತುಪಡಿಸಿ ಎಲ್ಲಾ ರೀತಿಯ ಚಟುವಟಿಕೆಗಳನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಆದೇಶ ಹೊರಡಿಸಿದ್ದಾರೆ@CMofKarnataka @KarnatakaVarthe @mla_sudhakar pic.twitter.com/f1FVt27r5g
— DIPR-KALABURAGI (@Kalaburgivarthe) May 18, 2021