ಕಲಬುರಗಿ:
ಓವರ್‌ಹೆಡ್ ಟ್ಯಾಂಕ್ ನಿರ್ಮಾಣ ಕಾಮಗಾರಿಯ ಗುಂಡಿಗೆ ಬಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಮೃತರನ್ನು ಅಜಯ್ (12) ಮತ್ತು ಅಭಿಷೇಕ್ (11) ಎಂದು ಗುರುತಿಸಲಾಗಿದೆ.
ಆಟವಾಡಲು ಹೋಗಿದ್ದ ಮುೂವರು ಮಕ್ಕಳು ಶನಿವಾರ ಸಂಜೆಯಿಂದ ನಾಪತ್ತೆಯಾಗಿದ್ದರು. ಈ ಪೈಕಿ ಇಬ್ಬರು ಬಾಲಕರು ಓವರ್ ಹೆಡ್ ಟ್ಯಾಂಕ್ ನಿರ್ಮಾಣಕ್ಕಾಗಿ ಮಾಡಲಾದ ಗುಂಡಿಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವುದಾಗಿ ಭಾನುವಾರ ಬೆಳಿಗ್ಗೆ ತಿಳಿದುಬಂದಿತು ಎಂದು ಬಿಜೆಪಿ ಮುಖಂಡ ಚಂದು ಪಾಟೀಲ್ ತಿಳಿಸಿದ್ದಾರೆ.
ಕಳೆದ ವರ್ಷದಿಂದ ಆರಂಭಗೊಂಡಿದ್ದ ಓವರ್ ಹೆಡ್ ಟ್ಯಾಂಕ್ ನಿರ್ಮಾಣ ಕಾಮಗಾರಿ ಕೆಲ ಸಮಸ್ಯೆಗಳಿಂದ ಆರು ತಿಂಗಳಿಂದ ಸ್ಥಗಿತಗೊಂಡಿತ್ತು. ಇದರ ಸುತ್ತ ಕಾಮಗಾರಿ ನಡೆಸುತ್ತಿರುವ ಸಂಸ್ಥೆ ಯಾವುದೇ ಬೇಲಿ ನಿರ್ಮಿಸದಿರುವುದು ಮಕ್ಕಳ ಸಾವಿಗೆ ಕಾರಣವಾಗಿದೆ. ಕಂಪನಿಯ ನಿರ್ಲಕ್ಷ್ಯದಿಂದ ನಾವು ಇಬ್ಬರು ಮಕ್ಕಳನ್ನು ಕಳೆದುಕೊಂಡಿದ್ದೇವೆ ಎಂದು ಅವರು ಹೇಳಿದರು.
ಓವರ್ ಹೆಡ್ ವಾಟರ್ ಟ್ಯಾಂಕ್ ನಿರ್ಮಾಣಕ್ಕಾಗಿ ಕಾಮಗಾರಿಯನ್ನು ಕಳೆದ ಒಂದು ವರ್ಷದಿಂದ ಮಾಡುತ್ತಿದ್ದು, ಅದಕ್ಕಾಗಿ ಗುಂಡಿಯನ್ನು ನಿರ್ಮಾಣ ಮಾಡಿದೆ.