Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • Kambala| ಕಂಬಳ ಬೆಂಗಳೂರಿನಲ್ಲಿ ಪ್ರತಿ ವರ್ಷ ಮುಂದುವರೆಸುವಂತಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
  • ಬೆಂಗಳೂರು ನಗರ

Kambala| ಕಂಬಳ ಬೆಂಗಳೂರಿನಲ್ಲಿ ಪ್ರತಿ ವರ್ಷ ಮುಂದುವರೆಸುವಂತಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

The Bengaluru Live November 25, 2023 10:30 PM 1 minute read
Kambala should be continued every year in Bengaluru: Chief Minister Siddaramaiah

Kambala| ಕಂಬಳ ಬೆಂಗಳೂರಿನಲ್ಲಿ ಪ್ರತಿ ವರ್ಷ ಮುಂದುವರೆಸುವಂತಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಕಂಬಳ ಉಳಿಸಿ ಬೆಳಸಬೇಕು, ತುಳು ಭಾಷೆಗೆ ಕರ್ನಾಟಕದಲ್ಲಿ ಹೆಚ್ಚುವರಿ ಭಾಷೆ ಸ್ಥಾನಮಾನ: ಚರ್ಚಿಸಿ ತೀರ್ಮಾನ: ಮುಖ್ಯಮಂತ್ರಿ ಭರವಸೆ

ಬೆಂಗಳೂರು:

ಕರ್ನಾಟಕದಲ್ಲಿ ತುಳು ಭಾಷೆಗೆ ಹೆಚ್ಚುವರಿ ಭಾಷೆಯ ಸ್ಥಾನಮಾನ ದೊರಕಬೇಕೆಂದು ಕೋರಿಕೆಯಿದ್ದು ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಅವರು ಇಂದು ಬೆಂಗಳೂರು ಕಂಬಳ ಸಮಿತಿ ಇವರ ವತಿಯಿಂದ ಬೆಂಗಳೂರಿನ ಅರಮನೆ ಮೈದಾನ ದಲ್ಲಿ ಆಯೋಜಿಸಿರುವ ಕಂಬಳ ಉತ್ಸವ ಹಾಗೂ ತುಳುನಾಡಿನ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಂಬಳ ಕರಾವಳಿ ಭಾಗದ ಜನಪ್ರಿಯ ಕ್ರೀಡೆ. ಮಂಗಳೂರು, ಉಡುಪಿ ಜಿಲ್ಲೆಗಳ ಜಾನಪದ ಕ್ರೀಡೆ. ಅಶೋಕ್ ರೈ ಅವರ ನೇತೃತ್ವದಲ್ಲಿ ಕರಾವಳಿ ಪ್ರದೇಶದ ಜಾನಪದ ಕ್ರೀಡೆಯನ್ನು ಬೆಂಗಳೂರು ನಗರಕ್ಕೆ ಪರಿಚಯಿಸುವುದು ನಿಜಕ್ಕೂ ಶ್ಲಾಘನೀಯ ಎಂದರು.

ಮುಖ್ಯಮಂತ್ರಿ @siddaramaiah ಅವರು ಇಂದು ಬೆಂಗಳೂರು ಕಂಬಳ ಸಮಿತಿ ಇವರ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಕರಾವಳಿಯ ಜಾನಪದ ಕ್ರೀಡೆ "ಕಂಬಳ ಉತ್ಸವ" ಹಾಗೂ ತುಳುನಾಡಿನ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. pic.twitter.com/aFm8Nukn6h

— CM of Karnataka (@CMofKarnataka) November 25, 2023

ಕ್ರೀಡೆ ಪ್ರೋತ್ಸಾಹಿಸುವ ಅವಕಾಶ

ಕಂಬಳ ನೋಡಲು ಇಷ್ಟು ಜನರು ಆಗಮಿಸುವ ನಿರೀಕ್ಷೆ ಇರಲಿಲ್ಲ. ಕಂಬಳ ಕರಾವಳಿ ಪ್ರದೇಶದ ಕ್ರೀಡೆಯಾದಾರೂ ಬೆಂಗಳೂರಿನಲ್ಲಿ ಲಕ್ಷಾಂತರ ಜನ ಕರಾವಳಿ ಪ್ರದೇಶದವರು ವಾಸಿಸುತ್ತಿದ್ದು ಕ್ರೀಡೆ ಅವರಿಗೆ ಮಾತ್ರವಲ್ಲದೇ ಬೆಂಗಳೂರಿನ ಜನ ಸೇರಿದಂತೆ ರಾಜ್ಯದ ಮೂಲೆ ಮೂಲೆಯಿಂದ ಜನ ಬಂದು ನೋಡುವ , ಪ್ರೋತ್ಸಾಹಿಸುವ ಅವಕಾಶ ದೊರೆತಿದೆ ಎಂದರು.

ಹಿಂದೊಮ್ಮೆ ಉಡುಪಿ ಹಾಗೂ ಬಂಟ್ವಾಳ ಭಾಗದಲ್ಲಿ ಕಂಬಳ ಉದ್ಘಾಟಿಸಿದ್ದನ್ನು ಮುಖ್ಯಮಂತ್ರಿಗಳು ಸ್ಮರಿಸಿದರು. ಪುರಾತನ ಕಾಲದಿಂದ ನಡೆದುಕೊಂಡು ಬಂದಿರುವ ಜನರ ಕಲೆಯನ್ನು ಬಹಳ ಜನ ಮೈಗೂಡಿಸಿಕೊಂಡಿದ್ದಾರೆ. ಬಹಳ ಜನ ಇದಕ್ಕೆ ಪ್ರೋತ್ಸಾಹ ನೀಡುತ್ತಾರೆ. ತಮಿಳುನಾಡಿನಲ್ಲಿ ಜಲ್ಲಿಕಟ್ಟು ಕ್ರೀಡೆ ಇದ್ದಂತೆ ಕಂಬಳದಲ್ಲಿ ಕೋಣಗಳಿಗೆ ನೊಗ ಹಾಕಿ ಓಡಿಸುತ್ತಾರೆ ಎಂದರು.

ಕೋಣಗಳನ್ನು ಸಾಕುವುದು ಬಹಳ ಕಷ್ಟದ ಕೆಲಸ. ಕೋಣ ಸಾಕಲು ಒಂದು ವರ್ಷಕ್ಕೆ 15 ಲಕ್ಷದವರೆಗೆ ವೆಚ್ಚವಾಗುತ್ತದೆ. ತಿಂಗಳಿಗೆ 1 ಲಕ್ಷಕ್ಕಿಂತ ಹೆಚ್ಚಾಗುತ್ತದೆ. ನವೆಂಬರ್, ಡಿಸೆಂಬರ್, ಫೆಬ್ರವರಿ ಮಾರ್ಚ್ ತಿಂಗಳುಗಳಲ್ಲಿ ವ್ಯವಸಾಯ ಇಲ್ಲದಿದ್ದಾಗ ಜನ ಜಾನುವಾರುಗಳ ಉತ್ಸವ ಮಾಡಿ ಮನರಂಜನೆ ಪಡೆಯುತ್ತಿದ್ದರು. ಗದ್ದೆಗಳಲ್ಲಿ ಮಣ್ಣನ್ನು ಹದಗೊಳಿಸಿ ಕಂಬಳ ಆಡಿಸುತ್ತಿದ್ದರು. ಕೋಣಗಳನ್ನು ಓಡುವವರಿಗೆ ಅಭ್ಯಾಸವಿರಬೇಕು. ಕ್ರೀಡಾಪಟುವಾಗಿದ್ದರೆ ಮಾತ್ರ ಕೋಣಗಳ ಜೊತೆಗೆ ಓಡಲು ಸಾಧ್ಯ. ಜನಪ್ರಿಯ ಕ್ರೀಡೆ ಕಂಬಳವನ್ನು ಬೆಂಗಳೂರಿನಲ್ಲಿ ಪ್ರತಿ ವರ್ಷ ಮುಂದುವರೆಸುವಂತಾಗಬೇಕು. ನವೆಂಬರ್, ಡಿಸೆಂಬರ್ ಮಾಹೆಯಲ್ಲಿ ಆಯೋಜಿಸಿದರೆ ಜನ ನೋಡುತ್ತಾರೆ. ಇದೊಂದು ಮನರಂಜನೆಯ ಕ್ರೀಡೆ ಯಾಗುತ್ತದೆ ಎಂದು ಮುಖ್ಯಮಂತ್ರಿ ಗಳು ಅಭಿಪ್ರಾಯಪಟ್ಟರು.

ಮನರಂಜನೆಯ ಕ್ರೀಡೆ

ಜಲ್ಲಿಕಟ್ಟು, ಕಂಬಳ ನಡೆಸಬಾರದು ಎಂದು ನ್ಯಾಯಾಲಯ ತೀರ್ಪು ನೀಡಿದೆ. ಇದಕ್ಕೆ ಸುಗ್ರೀವಾಜ್ಞೆ ಹೊರಡಿಸಿ ಜನಪ್ರಿಯ ಕ್ರೀಡೆ ಉಳಿಸುವ ಕೆಲಸವಾಗಿದೆ. ಇದನ್ನು ಬೆಳಸಬೇಕು ಎಂದರು.

ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಸಮುದಾಯ ಭವನಕ್ಕಾಗಿ ನಿವೇಶನ ಕೋರಿದ್ದು ,ಇದಕ್ಕೆ ಪ್ರಯತ್ನ ಮಾಡಲಾಗುವುದು ಎಂದರು.

ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ, ಗೌರವಾಧ್ಯಕ್ಷ ಪ್ರಕಾಶ್ ಶೆಟ್ಟಿ, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ಮೇಲ್ಮನೆ ಸದಸ್ಯ ಮಂಜುನಾಥ್ ಭಂಡಾರಿ, ಕಾರ್ಯಾಧ್ಯಕ್ಷ ಗುರುಕಿರಣ್, ರಂಜನ್ ಶೆಟ್ಟಿ, ರಾಜೇಂದ್ರ ಕುಮಾರ್, ಶಂಕುತಲಾ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.

About the Author

The Bengaluru Live

Administrator

Visit Website View All Posts

Post navigation

Previous: Karnataka Administrative Reforms Commission| ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಆರನೇ ವರದಿ ಮುಖ್ಯಮಂತ್ರಿ ಗೆ ಸಲ್ಲಿಕೆ
Next: BY Vijayendra’s raises question| ಕಾಂಗ್ರೆಸ್ ಪಕ್ಷಕ್ಕೆ ಡಾ.ಅಂಬೇಡ್ಕರ್ ಹೆಸರು ಹೇಳುವ ನೈತಿಕತೆ ಇದೆಯೇ: ಬಿ. ವೈ. ವಿಜಯೇಂದ್ರ ಪ್ರಶ್ನೆ

Related Stories

ಸಿಸಿಬಿ ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳನ್ನು ತೋರಿಸುವ ಬೆಂಗಳೂರು ನಗರ ಪೊಲೀಸ್ ವಿಡಿಯೊದ ದೃಶ್ಯ
  • ಅಪರಾಧ
  • ಬೆಂಗಳೂರು ನಗರ

ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಲ್ಲಿ 32 ವರ್ಷದ ವ್ಯಕ್ತಿಯನ್ನು ಬಂಧಿಸಿದ ಬೆಂಗಳೂರು ಸಿಸಿಬಿ

The Bengaluru Live November 11, 2026 8:20 AM
ಹೆಣ್ಣೂರು–ಬಾಗಲೂರು ರಸ್ತೆಯಲ್ಲಿ ಹೊಸದಾಗಿ ಹಾಕಿದ ಕಾಂಕ್ರೀಟ್ ಪಕ್ಕದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು.
  • ಬೆಂಗಳೂರು ನಗರ

ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ

The Bengaluru Live November 11, 2026 1:28 AM
ಎತ್ತರಿಸಿದ ಹಳಿಗಳ ಮೇಲೆ ಸಾಗುತ್ತಿರುವ ನಮ್ಮ ಮೆಟ್ರೋ ರೈಲು
  • ಬೆಂಗಳೂರು ನಗರ
  • ಕರ್ನಾಟಕ

ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್

The Bengaluru Live November 11, 2026 12:25 AM

Latest Post

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ parameshwara-file-photo
  • ಕರ್ನಾಟಕ

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ

November 12, 2026 7:13 PM
ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್ cm-scst-council-meeting-20261112
  • ಕರ್ನಾಟಕ

ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್

November 12, 2026 7:10 PM
ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ tejasvi-surya-metro-presser-20261112
  • ಕರ್ನಾಟಕ

ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ

November 12, 2026 7:07 PM
ಬಿರ್ಸಾ ಮುಂಡಾ 151ನೇ ಜನ್ಮ ಜಯಂತಿ: ನ.15ಕ್ಕೆ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮ, ಛಲವಾದಿ ನಾರಾಯಣಸ್ವಾಮಿ ಮಾಹಿತಿ bjp-chalavadi-complaint-commissioner-20261107-1738
  • ಕರ್ನಾಟಕ

ಬಿರ್ಸಾ ಮುಂಡಾ 151ನೇ ಜನ್ಮ ಜಯಂತಿ: ನ.15ಕ್ಕೆ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮ, ಛಲವಾದಿ ನಾರಾಯಣಸ್ವಾಮಿ ಮಾಹಿತಿ

November 12, 2026 7:04 PM
ಓಕಳೀಪುರಂ ಅಷ್ಟಪಥ ಕಾರಿಡಾರ್ ಸುತ್ತ ರಸ್ತೆ ಡಾಂಬರೀಕರಣ ಓಕಳಿಪುರಂ ಎಂಟು ಪಥದ ಕಾರಿಡಾರ್ ಬಳಿ ರಾತ್ರಿ ಡಾಂಬರೀಕರಣ ಕಾಮಗಾರಿಯಲ್ಲಿ ರಸ್ತೆ ರೋಲರ್
  • ಬೆಂಗಳೂರು

ಓಕಳೀಪುರಂ ಅಷ್ಟಪಥ ಕಾರಿಡಾರ್ ಸುತ್ತ ರಸ್ತೆ ಡಾಂಬರೀಕರಣ

November 12, 2026 3:58 PM
ಪಿಂಕ್ ಲೈನ್ ಉದ್ಘಾಟನೆಯ ಅಂತಿಮ ಪಟ್ಟಿಯಿಂದ ನನ್ನ ಭಾಷಣ ಕೈಬಿಟ್ಟಿದ್ದಾರೆ: ಕೃಷ್ಣ ಬೈರೇಗೌಡ ಮೆಟ್ರೋ ಕಾಮಗಾರಿ ಸ್ಥಳದಲ್ಲಿ ಕೃಷ್ಣ ಬೈರೇಗೌಡ ಮತ್ತು ಅಧಿಕಾರಿಗಳು
  • ಬೆಂಗಳೂರು

ಪಿಂಕ್ ಲೈನ್ ಉದ್ಘಾಟನೆಯ ಅಂತಿಮ ಪಟ್ಟಿಯಿಂದ ನನ್ನ ಭಾಷಣ ಕೈಬಿಟ್ಟಿದ್ದಾರೆ: ಕೃಷ್ಣ ಬೈರೇಗೌಡ

November 12, 2026 3:50 PM

ನೀವು ತಪ್ಪಿಸಿಕೊಂಡಿರಬಹುದು

parameshwara-file-photo
  • ಕರ್ನಾಟಕ

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ

The Bengaluru Live November 12, 2026 7:13 PM
cm-scst-council-meeting-20261112
  • ಕರ್ನಾಟಕ

ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್

The Bengaluru Live November 12, 2026 7:10 PM
tejasvi-surya-metro-presser-20261112
  • ಕರ್ನಾಟಕ

ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ

The Bengaluru Live November 12, 2026 7:07 PM
bjp-chalavadi-complaint-commissioner-20261107-1738
  • ಕರ್ನಾಟಕ

ಬಿರ್ಸಾ ಮುಂಡಾ 151ನೇ ಜನ್ಮ ಜಯಂತಿ: ನ.15ಕ್ಕೆ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮ, ಛಲವಾದಿ ನಾರಾಯಣಸ್ವಾಮಿ ಮಾಹಿತಿ

The Bengaluru Live November 12, 2026 7:04 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ
  • ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್
  • ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ
  • ಬಿರ್ಸಾ ಮುಂಡಾ 151ನೇ ಜನ್ಮ ಜಯಂತಿ: ನ.15ಕ್ಕೆ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮ, ಛಲವಾದಿ ನಾರಾಯಣಸ್ವಾಮಿ ಮಾಹಿತಿ
©Copyright 2025 The Bengaluru Live All rights reserved. | MoreNews by AF themes.