Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • Kannada Rajyotsava | ಶಕ್ತಿಯಿಲ್ಲದವರಿಗೆ ಶಕ್ತಿ ತುಂಬುವುದೇ ಪಂಚಗ್ಯಾರಂಟಿಗಳ ಉದ್ದೇಶ, ಸಮಾಜಕ್ಕೆ ಕೊಡುಗೆ ನೀಡಿ ಸಮಾಜದ ಋಣ ತೀರಿಸಲು ಸಾಧ್ಯ: : ಮುಖ್ಯಮಂತ್ರಿ ಸಿದ್ದರಾಮಯ್ಯ
  • ಬೆಂಗಳೂರು ನಗರ

Kannada Rajyotsava | ಶಕ್ತಿಯಿಲ್ಲದವರಿಗೆ ಶಕ್ತಿ ತುಂಬುವುದೇ ಪಂಚಗ್ಯಾರಂಟಿಗಳ ಉದ್ದೇಶ, ಸಮಾಜಕ್ಕೆ ಕೊಡುಗೆ ನೀಡಿ ಸಮಾಜದ ಋಣ ತೀರಿಸಲು ಸಾಧ್ಯ: : ಮುಖ್ಯಮಂತ್ರಿ ಸಿದ್ದರಾಮಯ್ಯ

The Bengaluru Live November 1, 2023 10:50 PM 1 minute read
Karnataka Rajyotsava celebration Chief Minister Siddaramaiah Kannada and Culture department

Kannada Rajyotsava | ಶಕ್ತಿಯಿಲ್ಲದವರಿಗೆ ಶಕ್ತಿ ತುಂಬುವುದೇ ಪಂಚಗ್ಯಾರಂಟಿಗಳ ಉದ್ದೇಶ, ಸಮಾಜಕ್ಕೆ ಕೊಡುಗೆ ನೀಡಿ ಸಮಾಜದ ಋಣ ತೀರಿಸಲು ಸಾಧ್ಯ: : ಮುಖ್ಯಮಂತ್ರಿ ಸಿದ್ದರಾಮಯ್ಯ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ
  • ನಾಡದೇವಿ ಭುವನೇಶ್ವರಿ ಹೆಸರಿನಲ್ಲಿ ದೊಡ್ಡ ಕನ್ನಡ ಭವನ ನಿರ್ಮಾಣ

ಬೆಂಗಳೂರು:

ಕರ್ನಾಟಕ ಸಂಭ್ರಮ 50ರ ಸವಿನೆನಪಿಗಾಗಿ ನಾಡದೇವಿ ಭುವನೇಶ್ವರಿ ಹೆಸರಿನಲ್ಲಿ ದೊಡ್ಡ ಕನ್ನಡ ಭವನವನ್ನು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಅವರು ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

1956ರ ನವೆಂಬರ್ 1 ರಂದು ಕನ್ನಡ ಭಾಷಿಕ ಪ್ರದೇಶಗಳು ಏಕೀಕರಣಗೊಂಡು ಮೈಸೂರು ರಾಜ್ಯ ಉದಯವಾಯಿತು‌. ನಂತರ 1973ರಲ್ಲಿ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಅವರ ಅವಧಿಯಲ್ಲಿ ಮೈಸೂರು ರಾಜ್ಯವನ್ನು ‘ಕರ್ನಾಟಕ’ ಎಂದು ಮರು ನಾಮಕರಣ ಮಾಡಲಾಯಿತು ಎಂದರು.

ಮುಖ್ಯಮಂತ್ರಿ @siddaramaiah ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. pic.twitter.com/MKsus1TJJ9

— CM of Karnataka (@CMofKarnataka) November 1, 2023

ಕನ್ನಡದ ಹಿರಿಮೆ ಬಿಂಬಿಸುವ ಕರ್ನಾಟಕ ಸಂಭ್ರಮ – 50: ಕರ್ನಾಟಕಕ್ಕೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಈ ಹಿಂದಿನ ಸರ್ಕಾರ ಸಂಭ್ರಮಾಚರಣೆ ಮಾಡಬೇಕಿತ್ತು. ಆದರೆ ಅವರು ಮಾಡಲಿಲ್ಲ. ನಮ್ಮ ಸರ್ಕಾರ ಈ ಸಂಭ್ರಮಾಚರಣೆಯನ್ನು ಆಚರಿಸುವು ನಮ್ಮ ಕರ್ತವ್ಯವೆಂದು ಭಾವಿಸಿ, ಇಡೀ ವರ್ಷಕನ್ನಡ ನೆಲ, ಜಲ ಸಾಹಿತ್ಯ, ಸಂಸ್ಕೃತಿ, ಪರಂಪರೆಗಳನ್ನು ಬಿಂಬಿಸುವ ‘ಕರ್ನಾಟಕ ಸಂಭ್ರಮ- 50’ ಕಾರ್ಯಕ್ರಮಗಳನ್ನು ಸರ್ಕಾರ ರೂಪಿಸಿದೆ. ‘ಹೆಸರಾಯಿತು ಕರ್ನಾಟಕ- ಉಸಿರಾಗಲಿ ಕನ್ನಡ’ ಎಂಬ ಘೋಷ ವಾಕ್ಯದಡಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನಮ್ಮ ಉಸಿರು ಕನ್ನಡವಾಗಬೇಕು. ಇಡೀ ರಾಜ್ಯದಲ್ಲಿ ಕನ್ನಡದ ವಾತಾವರಣ ನಿರ್ಮಾಣವಾಗಬೇಕು ಎಂದು ತಿಳಿಸಿದರು.

ಅವಕಾಶ ವಂಚಿತರು ಮುಖ್ಯವಾಹಿನಿಗೆ ಬರಬೇಕು: ವಚನಗಳು ಭಾರತಕ್ಕೆ ಮಾತ್ರವಲ್ಲ. ಇಡೀ ವಿಶ್ವಕ್ಕೆ ಅಗತ್ಯ. ಜಾತಿ ವ್ಯವಸ್ಥೆ ಕಾರಣಕ್ಕಾಗಿ, ಸಾಮಾಜಿಕ, ಆರ್ಥಿಕ, ರಾಜಕೀಯ ಅಸಮಾನತೆ ನಿರ್ಮಾಣವಾಗಿದೆ. ಶತಮಾನಗಳಿಂದ ಶೂದ್ರರು ಹಾಗೂ ಮಹಿಳೆಯರು ಶಿಕ್ಷಣ ಸಂಸ್ಕೃತಿಯಿಂದ ವಂಚಿತರಾಗಿದ್ದರು.ಸಮ ಸಮಾಜ ನಿರ್ಮಾಣವಾಗಬೇಕಾದರೆ ಅವಕಾಶವಂಚಿತರು, ದುರ್ಬಲರು ಮುಖ್ಯವಾಹಿನಿಗೆ ಬರಬೇಕು. ಅಂತಹ ಜನರನ್ನು ಗುರುತಿಸಿ, ಸಾಮಾಜಿಕ, ಆರ್ಥಿಕ ನ್ಯಾಯ ಕೊಡುವ ಬಗ್ಗೆ ಸಂವಿಧಾನದಲ್ಲಿ ಉಲ್ಲೇಖಿಸಲಾಗಿದೆ ಎಂದರು.

ವಚನ ಸಂಸ್ಕೃತಿ ಅಭಿಯಾನ : ಅಸಮಾನತೆ ಇರುವ ಸಮಾಜದಲ್ಲಿ ಕೇವಲ ರಾಜಕೀಯ ಸ್ವಾತಂತ್ರ್ಯವಲ್ಲ. ಪ್ರತಿಯೊಬ್ಬರಿಗೂ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ಸಿಕ್ಕಾಗ ಮಾತ್ರ ಸ್ವಾತಂತ್ರ್ಯ ಸಾರ್ಥಕವಾಗುತ್ತದೆ. ಇಂತಹ ಾಶಯಗಳನ್ನೇ ಬಸವಣ್ಣನವರು, ಅಂಬೇಡ್ಕರ್ ರವರು ತಿಳಿಸಿದರು. ಶ್ರೀ ನಿಜಗುಣ ಸ್ವಾಮೀಜಿ ಅವರು ಹೇಳಿದಂತೆ ವಚನ ಸಂಸ್ಕೃತಿ ಅಭಿಯಾನ ಸರ್ಕಾರ ಹಮ್ಮಿಕೊಳ್ಳಲಿದೆ ಎಂದು ತಿಳಿಸಿದರು.

ಶಕ್ತಿಯಿಲ್ಲದವರಿಗೆ ಶಕ್ತಿ ತುಂಬುವ ಯೋಜನೆಗಳು: ಸರ್ಕಾರದ ಪಂಚಗ್ಯಾರಂಟಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯಡಿ 86 ಕೋಟಿ ಮಹಿಳೆಯರು ಸರ್ಕಾರಿ ಬಸ್ ನಲ್ಲಿ ಉಚಿತ ಪ್ರಯಾಣ ಮಾಡಿದ್ದಾರೆ. ಶಕ್ತಿ ‌ಇರುವವರಿಗೆ ಶಕ್ತಿ ಕೊಡುವುದಲ್ಲ. ಶಕ್ತಿ ಇಲ್ಲದವರಿಗೆ ಶಕ್ತಿ ತುಂಬ ಬೇಕೆನ್ನುವುದೇ ಪಂಚ ಗ್ಯಾರಂಟಿ ಯೋಜನೆಗಳ ಉದ್ದೇಶ ಎಂದರು.

ಸಮಾಜಸೇವೆಯ ಮೂಲಕ ಋಣ ತೀರಿಸಲು ಸಾಧ್ಯ : ಪ್ರೀತಿ, ವಿಶ್ವಾಸ, ಮನುಷ್ಯತ್ವ ಬಹಳ ಮುಖ್ಯ. ಮನುಷ್ಯತ್ವ ಇಲ್ಲದಿದ್ದರೆ ಅದು ಸಮಾಜವೇ ಅಲ್ಲ. ನಾವೆಲ್ಲರೂ ಕೂಡ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ಕೊಟ್ಟರೆ ಮಾತ್ರ ಬದುಕು ಸಾರ್ಥಕವಾಗುತ್ತದೆ. ನಾವು ಹುಟ್ಟಿದ ಮೇಲೆ ಸಮಾಜದಿಂದ ಎಲ್ಲವನ್ನೂ ಪಡೆದಿದ್ದೇವೆ ಎಂದ ಮೇಲೆ , ಸಮಾಜದ ಪರ ಕೆಲಸ ಮಾಡುವ ಮೂಲಕ ಸಮಾಜದ ಋಣ ತೀರಿಸಲು ಸಾಧ್ಯ. ಇಂತಹ ಕೆಲಸವೇ ಸಮಾಜ ಸೇವೆ ಎಂದರು.

ಅರ್ಹತೆಯುಳ್ಳವರಿಗೆ ಪ್ರಶಸ್ತಿ : ಕರ್ನಾಟಕ ಸಂಭ್ರಮದ ಶುಭಸಂದರ್ಭದಲ್ಲಿ ಪ್ರಶಸ್ತಿಗೆ ಭಾಜನರಾಗಿರುವ ಎಲ್ಲ 68 ಪ್ರಶಸ್ತಿ ಪುರಸ್ಕೃತರ ಸಾಧನೆ ಎಲ್ಲರಿಗೂ ಮಾದರಿಯಾಗಿದೆ. ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಈ ಬಾರಿ 10 ಸಂಘ- ಸಂಸ್ಥೆಗಳಿಗೆ ಈ ವಿಶೇಷವಾಗಿ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ. ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಹೆಚ್ಚು ಅರ್ಹತೆ ಇದ್ದವರನ್ನು ಆಯ್ಕೆ ಮಾಡಬೇಕೆಂಬ ಸೂಚನೆಯನ್ನು ನೀಡಲಾಗಿತ್ತು. ರಾಜ್ಯದ ಮುಖ್ಯಮಂತ್ರಿಯಾಗಿ ನಾನು ಒಂದು ಹೆಸರನ್ನು ಬಿಟ್ಟು ಬೇರೆ ಯಾರ ಹೆಸರನ್ನು ನಾನು ಸೂಚಿಸಿಲ್ಲ‌. ಬಹುತೇಕವಾಗಿ ಆಯ್ಕೆ ಸಮಿತಿ ಶಿಫಾರಸ್ಸು ಮಾಡಿದವರಿಗೆ ಪ್ರಶಸ್ತಿ ನೀಡಲಾಗಿದೆ ಎಂದು ತಿಳಿಸಿದರು.

About the Author

The Bengaluru Live

Administrator

Visit Website View All Posts

Post navigation

Previous: Randeep Singh Surjewala warns | ಪಕ್ಷ, ಸರ್ಕಾರದ ಆಂತರಿಕ ವಿಚಾರ ಸಾರ್ವಜನಿಕವಾಗಿ ಮಾತಾಡಿದರೆ ಸಚಿವರು, ಶಾಸಕರ ವಿರುದ್ಧ ಶಿಸ್ತು ಕ್ರಮ: ರಣದೀಪ್ ಸಿಂಗ್ ಸುರ್ಜೇವಾಲ ಎಚ್ಚರಿಕೆ
Next: Chief Minister Siddaramaiah | ಬಿಜೆಪಿ ಸಂಸದರು ಕೇಂದ್ರದಿಂದ ಬರಪರಿಹಾರ ಕೊಡಿಸಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

Related Stories

ರೈಲು ನಿಲ್ದಾಣದ ಟಿಕೆಟ್ ಕೌಂಟರ್‌ಗಳ ಮುಂದೆ ಸರತಿ ಸಾಲಿನ ಕಂಬಗಳ ಬಳಿ ನಿಂತಿರುವ ಪ್ರಯಾಣಿಕರು
  • ಕರ್ನಾಟಕ
  • ಬೆಂಗಳೂರು ನಗರ

ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್

The Bengaluru Live November 22, 2026 8:08 AM
ಪರಿಶೀಲನೆ ವೇಳೆ ಮರಗಳಿರುವ ಕೆರೆಯ ದಡದಲ್ಲಿ ನಿಂತಿರುವ ಅಧಿಕಾರಿಗಳು
  • ಬೆಂಗಳೂರು ನಗರ

ಪಶ್ಚಿಮ ನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಐದು ವಿಭಾಗಗಳ ಪರಿಶೀಲನೆ: ಕಸ ತೆರವು, ಕೆರೆ ಹೂಳೆತ್ತುವಿಕೆ, ಜಂಕ್ಷನ್ ಕಾಮಗಾರಿಗೆ ಸೂಚನೆ

The Bengaluru Live November 21, 2026 7:39 PM
ರಾತ್ರಿ ವೇಳೆ ರಸ್ತೆಯಲ್ಲಿ ಬಿಳಿ ಅಂಗಿ ಧರಿಸಿದ ಅಧಿಕಾರಿಗಳು ನಿಂತಿದ್ದು ಒಬ್ಬರು ಜೆಟ್ ಹೋಸ್‌ನಿಂದ ನೀರು ಚಿಮ್ಮಿಸುತ್ತಿದ್ದಾರೆ
  • ಬೆಂಗಳೂರು ನಗರ

ಕೇಂದ್ರ ನಗರ ಪಾಲಿಕೆಯ ಪ್ರತಿ ವಿಭಾಗಕ್ಕೆ ಒಂದು ಜೆಟ್ ಸ್ಪ್ರೇ ವಾಹನ: ವಿಧಾನಸೌಧ ಬಳಿ ಪ್ರಾತ್ಯಕ್ಷಿಕೆ ಪರಿಶೀಲಿಸಿದ ಆಯುಕ್ತ ಜಗದೀಶ್

The Bengaluru Live November 21, 2026 7:36 PM

Latest Post

ಕೆಇಎ ಪಿಯು ಕಾಲೇಜು ಪ್ರಾಂಶುಪಾಲರ ಪರೀಕ್ಷೆಗೆ ಶೇ 82ರಷ್ಟು ಹಾಜರಾತಿ, 2,349 ಅಭ್ಯರ್ಥಿಗಳು ಭಾಗಿ ಕೆಇಎ ಹೆಸರು ಮತ್ತು ಲಾಂಛನದ ಮುಂದೆ ಕುಳಿತಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರ ಕಡತ ಚಿತ್ರ
  • ಶಿಕ್ಷಣ

ಕೆಇಎ ಪಿಯು ಕಾಲೇಜು ಪ್ರಾಂಶುಪಾಲರ ಪರೀಕ್ಷೆಗೆ ಶೇ 82ರಷ್ಟು ಹಾಜರಾತಿ, 2,349 ಅಭ್ಯರ್ಥಿಗಳು ಭಾಗಿ

November 22, 2026 9:22 PM
ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ

November 22, 2026 2:01 PM
ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ

November 22, 2026 11:32 AM
ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ ಸಾಂಪ್ರದಾಯಿಕ ಉಡುಪಿನಲ್ಲಿರುವ ಮಹಿಳೆಯೊಂದಿಗೆ ಮೈಕ್‌ನಲ್ಲಿ ಮಾತನಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಸುತ್ತ ಕುಳಿತಿರುವ ಜನರು
  • ಕರ್ನಾಟಕ

ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ

November 22, 2026 11:16 AM
ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್ ರೈಲು ನಿಲ್ದಾಣದ ಟಿಕೆಟ್ ಕೌಂಟರ್‌ಗಳ ಮುಂದೆ ಸರತಿ ಸಾಲಿನ ಕಂಬಗಳ ಬಳಿ ನಿಂತಿರುವ ಪ್ರಯಾಣಿಕರು
  • ಕರ್ನಾಟಕ
  • ಬೆಂಗಳೂರು ನಗರ

ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್

November 22, 2026 8:08 AM
ಪಿಜಿ ಆಯುಷ್: ಮೊದಲ ಸುತ್ತಿನ ಸೀಟು ಹಂಚಿಕೆಯ ಅಣಕು ಫಲಿತಾಂಶ ಪ್ರಕಟ, 887 ಮಂದಿಗೆ ಸೀಟು, ನ.24ರವರೆಗೆ ಆಯ್ಕೆ ಬದಲಾವಣೆಗೆ ಅವಕಾಶ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಸರಿನ ಫಲಕ ಮತ್ತು ಲಾಂಛನದ ಮುಂದೆ ತಮ್ಮ ಮೇಜಿನ ಬಳಿ ಮಾತನಾಡುತ್ತಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ
  • ಶಿಕ್ಷಣ

ಪಿಜಿ ಆಯುಷ್: ಮೊದಲ ಸುತ್ತಿನ ಸೀಟು ಹಂಚಿಕೆಯ ಅಣಕು ಫಲಿತಾಂಶ ಪ್ರಕಟ, 887 ಮಂದಿಗೆ ಸೀಟು, ನ.24ರವರೆಗೆ ಆಯ್ಕೆ ಬದಲಾವಣೆಗೆ ಅವಕಾಶ

November 22, 2026 8:06 AM

ನೀವು ತಪ್ಪಿಸಿಕೊಂಡಿರಬಹುದು

ಕೆಇಎ ಹೆಸರು ಮತ್ತು ಲಾಂಛನದ ಮುಂದೆ ಕುಳಿತಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರ ಕಡತ ಚಿತ್ರ
  • ಶಿಕ್ಷಣ

ಕೆಇಎ ಪಿಯು ಕಾಲೇಜು ಪ್ರಾಂಶುಪಾಲರ ಪರೀಕ್ಷೆಗೆ ಶೇ 82ರಷ್ಟು ಹಾಜರಾತಿ, 2,349 ಅಭ್ಯರ್ಥಿಗಳು ಭಾಗಿ

The Bengaluru Live November 22, 2026 9:22 PM
ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ

The Bengaluru Live November 22, 2026 2:01 PM
ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ

The Bengaluru Live November 22, 2026 11:32 AM
ಸಾಂಪ್ರದಾಯಿಕ ಉಡುಪಿನಲ್ಲಿರುವ ಮಹಿಳೆಯೊಂದಿಗೆ ಮೈಕ್‌ನಲ್ಲಿ ಮಾತನಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಸುತ್ತ ಕುಳಿತಿರುವ ಜನರು
  • ಕರ್ನಾಟಕ

ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ

The Bengaluru Live November 22, 2026 11:16 AM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಕೆಇಎ ಪಿಯು ಕಾಲೇಜು ಪ್ರಾಂಶುಪಾಲರ ಪರೀಕ್ಷೆಗೆ ಶೇ 82ರಷ್ಟು ಹಾಜರಾತಿ, 2,349 ಅಭ್ಯರ್ಥಿಗಳು ಭಾಗಿ
  • ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ
  • ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ
  • ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ
©Copyright 2025 The Bengaluru Live All rights reserved. | MoreNews by AF themes.