ಬೆಂಗಳೂರು:
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರೆಸ್ಸೆಸ್) ಎರಡನೇ ಅತಿ ಉನ್ನತ ಜವಾಬ್ದಾರಿಗೆ ಕರ್ನಾಟಕದ ದತ್ತಾತ್ರೇಯ ಹೊಸಬಾಳೆ ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಹೊರವಲದ ಚೆನ್ನೇನಹಳ್ಳಿ ಜನ ಸೇವಾ ವಿದ್ಯಾಕೇಂದ್ರದಲ್ಲಿ ನಡೆಯುತ್ತಿರುವ ಅಖಿಲ ಭಾರತೀಯ ಪ್ರತಿನಿಧಿ ಸಭಾ(ಎಬಿಪಿಎಸ್)ದಲ್ಲಿ ನಡೆದ ಚುನಾವಣೆಯಲ್ಲಿ ಇವರು ಆಯ್ಕೆಯಾಗಿದ್ದಾರೆ.
ಆರೆಸ್ಸೆಸ್ ನಲ್ಲಿ ಸರಸಂಘಚಾಲಕ್ ಮತ್ತು ಸರಕಾರ್ಯವಾಹ ಅತ್ಯುನ್ನತ ಹುದ್ದೆ ಹಾಗೂ ಜವಾಬ್ದಾರಿಯಾಗಿದೆ. ಡಾ. ಮೋಹನ್ ಭಾಗವತ್ ಅವರು ಸರ ಸಂಘ ಚಾಲಕರಾಗಿದ್ದಾರೆ. ಭೈಯಾಜಿ ಜೋಶಿ ಅವರು 2009ರಿಂದ ಸರಕಾರ್ಯವಾಹರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಶನಿವಾರ ಎಬಿಪಿಎಸ್ ನಲ್ಲಿ ನಡೆದ ಆರೆಸ್ಸೆಸ್ ನ ಆಂತರಿಕ ಚುನಾವಣೆಯಲ್ಲಿ ಕರ್ನಾಟಕದ ದತ್ತಾತ್ರೇಯ ಹೊಸಬಾಳೆಯವರಿಗೆ ಸರಕಾರ್ಯವಾಹ ಜವಾಬ್ದಾರಿ ಲಭಿಸಿದೆ.
Bangaluru : Akhil Bharatiya Pratinidhi Sabha of RSS elected Shri Dattatreya Hosabale as its ‘Sarkaryavah’. He was Sah Sarkaryavah of RSS since 2009. pic.twitter.com/ZZetAvuTo4
— RSS (@RSSorg) March 20, 2021
ಕರ್ನಾಟಕದಿಂದ ಹೋ.ವೇ.ಶೇಷಾದ್ರಿ ಅವರು ಸರಕಾರ್ಯವಾಹರಾಗಿ ಹಲವು ವರ್ಷ ಸೇವೆ ಸಲ್ಲಿಸಿದ್ದರು. ಈಗ ಕನ್ನಡಿಗರಾದ ದತ್ತಾತ್ರೇಯ ಹೊಸಬಾಳೆಯವರು ಇದೇ ಹುದ್ದೆಗೆ ನೇಮಕಗೊಂಡಿದ್ದಾರೆ. ದತ್ತಾತ್ರೇಯ ಹೊಸಬಾಳೆಯವರು ಸಹ ಸರಕಾರ್ಯವಾಹರಾಗಿ ಸೇವೆ ಸಲ್ಲಿಸುತ್ತಿದ್ದರು. ಅದಕ್ಕೂ ಮೊದಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಲ್ಲಿ ರಾಷ್ಟ್ರೀಯ ಜವಾಬ್ದಾರಿ ಹೊಂದಿದ್ದರು. ಇವರು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಸಬಾಳೆಯವರಾಗಿದ್ದಾರೆ. ಕಾಲೇಜು ಶಿಕ್ಷಣದ ನಂತರ ಸಂಘದ ಪೂರ್ಣಾವಧಿ ಕಾರ್ಯಕರ್ತ(ಪ್ರಚಾರಕ) ಸೇವೆ ಸಲ್ಲಿಸುತ್ತಿದ್ದಾರೆ. ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.