ಬೆಂಗಳೂರು :
ಕರ್ನಾಟಕ ಹೈಕೋರ್ಟ್‍ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪಿ.ಎಸ್.ದಿನೇಶ್ ಕುಮಾರ್ (Dinesh Kumar) ಅವರನ್ನು ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ದಿನೇಶ್ ಕುಮಾರ್ ಅವರು ಇದೇ ಫೆ.24ರಂದು ಸೇವೆಯಿಂದ ನಿವೃತ್ತರಾಗಲಿದ್ದಾರೆ. ನ್ಯಾ.ದಿನೇಶ್ ಕುಮಾರ್ ಅವರು 2015ರಿಂದ ಕರ್ನಾಟಕ ಹೈಕೋರ್ಟ್‍ನ ನ್ಯಾಯಮೂರ್ತಿಯಾಗಿದ್ದಾರೆ.
ಸಾಮಾನ್ಯವಾಗಿ ಹೈಕೋರ್ಟ್‍ನ ಸಿಜೆಯನ್ನಾಗಿ ಬೇರೆ ಹೈಕೋರ್ಟ್‍ನ ನ್ಯಾಯಮೂರ್ತಿಗಳನ್ನು ನೇಮಕ ಮಾಡುವುದು ವಾಡಿಕೆ. ಆದರೆ, ದಿನೇಶ್‍ಕುಮಾರ್ ಆಡಳಿತದ ಅನುಭವ, ದಕ್ಷತೆ, ಪ್ರಮಾಣಿಕತೆಯನ್ನು ಪರಿಗಣಿಸಿ ಅವರನ್ನು ಹೈಕೋರ್ಟ್ ಸಿಜೆಯನ್ನಾಗಿ ನೇಮಕ ಮಾಡಲಾಗುತ್ತಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.