ಬೆಂಗಳೂರು:
ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ಅಕ್ಟೋಬರ್ 1 ರಿಂದ ಜಾರಿಗೆ ಬರುವಂತೆ ಪೊಲೀಸ್ ತರಬೇತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಅಲೋಕ್ ಕುಮಾರ್ ಅವರನ್ನು ಮೂರು ತಿಂಗಳ ಹಿಂದೆಯಷ್ಟೇ ಕಾನೂನು ಮತ್ತು ಸುವ್ಯವಸ್ಥೆಯಿಂದ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿತ್ತು. ಇದೀಗ ಮತ್ತೆ ವರ್ಗಾವಣೆ ಮಾಡಲಾಗಿದೆ.