Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • Karnataka All Party Meeting: ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ಸರ್ವಪಕ್ಷ ಸಭೆ ಆರಂಭ
  • ಬೆಂಗಳೂರು ನಗರ

Karnataka All Party Meeting: ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ಸರ್ವಪಕ್ಷ ಸಭೆ ಆರಂಭ

Vighnesh Pawar August 23, 2023 1:00 PM 1 minute read
Karnataka All party meeting begins on Cauvery, Mekedatu and Mahadayi water disputes

Karnataka All party meeting begins on Cauvery, Mekedatu and Mahadayi water disputes

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ವಪಕ್ಷ ಸಭೆ ನಡೆಯಿತು.

ಸಭೆಯ ಪ್ರಾರಂಭದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ನೀರಾವರಿ ವಿಷಯದಲ್ಲಿ ರಾಜ್ಯದ ಹಿತ ರಕ್ಷಣೆಯಲ್ಲಿ ಯಾವುದೇ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿ, ಸರ್ಕಾರದ ಕಾನೂನು ಹೋರಾಟ ಮುಂದುವರೆಯಲಿದ್ದು, ಈ ನಿಟ್ಟಿನಲ್ಲಿ ಎಲ್ಲ ಪಕ್ಷಗಳ ಮುಖಂಡರ ಸಹಕಾರ ಕೋರಿದರು.

ನೀರಾವರಿ ವಿಷಯದಲ್ಲಿ ರಾಜಕೀಯ ಪಕ್ಕಕ್ಕಿಡೋಣ. ರಾಜ್ಯದ ಹಿತ ರಕ್ಷಣೆಯಲ್ಲಿ ಯಾವುದೇ ರಾಜಿ ಇಲ್ಲ. ಸರ್ಕಾರದ ಕಾನೂನು ಹೋರಾಟ ಮುಂದುವರೆಯಲಿದ್ದು, ಈ ನಿಟ್ಟಿನಲ್ಲಿ ಎಲ್ಲ ಪಕ್ಷಗಳ ಮುಖಂಡರು ಸಹಕರಿಸಬೇಕು. ಎಲ್ಲರೂ ಒಟ್ಟಾಗಿ ರಾಜ್ಯದ ಹಿತ ಕಾಯೋಣ ಎಂದರು.

WhatsApp Image 2023 08 23 at 12.55.31 PM

ಕರ್ನಾಟಕ ಮತ್ತು ಕೇರಳದ ಕಾವೇರಿ ಕಣಿವೆಯ ಪ್ರದೇಶದಲ್ಲಿ ನೈಋತ್ಯ ಮಾನ್ಸೂನ್‌ ವೈಫಲ್ಯದಿಂದಾಗಿ 2023-24ರ ಜಲ ವರ್ಷವು ಸಂಕಷ್ಟದ ವರ್ಷವಾಗಿದೆ.

ಕಾವೇರಿ ನೀರು ನಿಯಂತ್ರಣ ಸಮಿತಿಯು ತನ್ನ ಸಭೆಯಲ್ಲಿ ಜೂನ್‌ ವರೆಗಿನ ಮಳೆಯ ಕೊರತೆಯನ್ನು ಗಮನಿಸಿದೆ. ಆಗಸ್ಟ್‌ 10 ರಂದು 1,5000 ಕ್ಯೂಸೆಕ್‌ ನೀರು ಬಿಡಲು ಸೂಚಿಸಿತು. ಇದನ್ನು ರಾಜ್ಯ ಬಲವಾಗಿ ವಿರೋಧಿಸಿದ್ದು, ನೀರಿನ ಪ್ರಮಾಣ 10,000 ಕ್ಯೂಸೆಕ್‌ಗೆ ಇಳಿಕೆ ಮಾಡಿದೆ. ಇದರಿಂದ ಅಸಮಾಧಾನಗೊಂಡ ತಮಿಳುನಾಡು ಸುಪ್ರೀಂ ಕೋರ್ಟಿನಲ್ಲಿ ನೀರು ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದ್ದು, ಶುಕ್ರವಾರ ಮೂರು ನ್ಯಾಯಾಧೀಶರ ಪೀಠದ ಮುಂದೆ ವಿಚಾರಣೆಗೆ ಬರಲಿದೆ ಎಂದು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಮಾಹಿತಿ ಹಂಚಿಕೊಂಡರು.

ಸಭೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ವೀರಪ್ಪ ಮೊಯಿಲಿ, ಸಂಸದರಾದ ಸುಮಲತಾ, ಜಗ್ಗೇಶ್, ಡಾ. ಹನುಮಂತಯ್ಯ, ಮುನಿಸ್ವಾಮಿ, ಜಿ.ಎಂ. ಸಿದ್ದೇಶ್ವರ, ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಮೊದಲಾದವರು ರಾಜ್ಯದ ಕಾನೂನು ಹೋರಾಟಕ್ಕೆ ಬೆಂಬಲ ಸೂಚಿಸಿದರು. ಹಾಗೂ ಸಂಕಷ್ಟ ಹಂಚಿಕೆ ಸೂತ್ರವನ್ನು ಇನ್ನಷ್ಟು ನಿರ್ದಿಷ್ಟಪಡಿಸುವ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.

WhatsApp Image 2023 08 23 at 12.55.45 PM

ಸಭೆಯಲ್ಲಿ ಜಲ ಸಂಪನ್ಮೂಲ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್‌, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ, ಜಗದೀಶ ಶೆಟ್ಟರ, ಡಿ.ವಿ. ಸದಾನಂದಗೌಡ, ವೀರಪ್ಪ ಮೊಯಿಲಿ, ಸಚಿವರಾದ ಹೆಚ್‌.ಕೆ. ಪಾಟೀಲ, ಚಲುವರಾಯಸ್ವಾಮಿ, ಡಾ. ಜಿ. ಪರಮೇಶ್ವರ, ಕೆ.ಜೆ. ಜಾರ್ಜ್‌, ಕೃಷ್ಣ ಬೈರೇಗೌಡ, ನವದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಎಲ್ಲ ಪಕ್ಷಗಳ ಶಾಸಕರು ಸಂಸದರು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ, ಹಿರಿಯ ವಕೀಲರಾದ ಮೋಹನ್‌ ಕಾತರಕಿ ಮತ್ತು ಇತರ ಕಾನೂನು ತಜ್ಞರು, ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

(ಸಭೆಯ ಆರಂಭಿಕ ಅಂಶಗಳು- ಸಭೆ ಮುಂದುವರೆದಿದೆ)

About the Author

Vighnesh Pawar

Subscriber

View All Posts

Post navigation

Previous: BBMP: ದಕ್ಷಿಣ ವಲಯ ಆಯುಕ್ತ ಜಯರಾಮ್ ರಾಯಪುರ ರವರಿಂದ ದಾಸಪ್ಪ ಹೆರಿಗೆ ಆಸ್ಪತ್ರೆ ಹಾಗೂ ಆವರಣ ಪರಿಶೀಲನೆ
Next: ಕನ್ನಡ ನಾಡು-ನುಡಿ-ಜಲ-ಭೂಮಿ-ಸಂಸ್ಕೃತಿಯ ಹಿತ ಕಾಪಾಡುವ ವಿಚಾರದಲ್ಲಿ ರಾಜಿಯ ಮಾತೇ ಇಲ್ಲ : ಸಿಎಂ ಸಿದ್ದರಾಮಯ್ಯ

Related Stories

ಪತ್ರಿಕಾಗೋಷ್ಠಿಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನ ಐದು ನಗರ ಪಾಲಿಕೆಗಳ ಸುಮಾರು 24 ಲಕ್ಷ ಆಸ್ತಿ ಮಾಲೀಕರಿಗೆ ವಾಟ್ಸಾಪ್‌ನಲ್ಲಿ ಉಚಿತ ಇ-ಖಾತಾ ವಿತರಣೆ: ಜಿಬಿಎ

The Bengaluru Live November 17, 2026 8:24 PM
ಪತ್ರಿಕಾಗೋಷ್ಠಿಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಜಕ್ಕೂರು ರೈಲ್ವೆ ಮೇಲ್ಸೇತುವೆ, ಗೆದ್ದಲಹಳ್ಳಿ ರೈಲ್ವೆ ವೆಂಟ್ ಉದ್ಘಾಟನೆ; ₹436 ಕೋಟಿ ವೆಚ್ಚದ ಐಓಸಿ ಜಂಕ್ಷನ್ ರೋಟರಿ ಮೇಲ್ಸೇತುವೆಗೆ ನ.18ರಂದು ಶಂಕುಸ್ಥಾಪನೆ

The Bengaluru Live November 17, 2026 8:21 PM
ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ ಕಚೇರಿಯ ಕಮಾನು ಪ್ರವೇಶದ್ವಾರ
  • ಬೆಂಗಳೂರು ನಗರ

ತಲಘಟ್ಟಪುರ ಕೆರೆ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳ ಬಗ್ಗೆ ಲೋಕಾಯುಕ್ತ ಅಸಮಾಧಾನ; ದಕ್ಷಿಣ ನಗರ ಪಾಲಿಕೆಗೆ ಮತ್ತೊಂದು ಅವಕಾಶ

The Bengaluru Live November 17, 2026 6:07 PM

Latest Post

ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ ಬೆಂಗಳೂರಿನಲ್ಲಿ ಗೋಲ್ಡನ್ ಅಂಬೇಡ್ಕರ್ ಫೌಂಡೇಷನ್ ಸನ್ಮಾನ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿರುವವರು
  • ಕರ್ನಾಟಕ

ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ

November 17, 2026 11:59 PM
ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ ಬೆಂಗಳೂರಿನ ಆರೋಗ್ಯ ಸೌಧದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಿರುವ ಆರೋಗ್ಯ ಸಚಿವರು
  • ಕರ್ನಾಟಕ

ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ

November 17, 2026 11:02 PM
ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್ ಬೈಕಂಪಾಡಿಯ ಸಂಗ್ರಹಾಗಾರದಲ್ಲಿ ವಶಪಡಿಸಿಕೊಂಡ ಅಡುಗೆ ಎಣ್ಣೆಯ ಕ್ಯಾನ್‌ಗಳ ರಾಶಿ
  • ಕರ್ನಾಟಕ

ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್

November 17, 2026 11:02 PM
ಕರ್ನಾಟಕ ಇಸ್ರೇಲ್ ಸಹಭಾಗಿತ್ವ: ಕ್ವಾಂಟಮ್, ಜಲ ನಿರ್ವಹಣೆ ಸಂಶೋಧನೆಗೆ ಆಸಕ್ತಿ; ಕ್ವಾಂಟಮ್ ಸಿಟಿ, ಕ್ವಾಂಟಮ್ ಇಂಡಿಯಾ ಬೆಂಗಳೂರು 2027ಕ್ಕೆ ಇಸ್ರೇಲ್ ಕಂಪನಿಗಳಿಗೆ ಆಹ್ವಾನ ಬೆಂಗಳೂರು ಟೆಕ್ ಸಮ್ಮಿಟ್ 2026ರ ಮಳಿಗೆಯಲ್ಲಿ ಕರ್ನಾಟಕದ ಅಧಿಕಾರಿಗಳು ಮತ್ತು ಇಸ್ರೇಲ್ ಪ್ರತಿನಿಧಿಗಳ ಗುಂಪು ಚಿತ್ರ
  • ಕರ್ನಾಟಕ

ಕರ್ನಾಟಕ ಇಸ್ರೇಲ್ ಸಹಭಾಗಿತ್ವ: ಕ್ವಾಂಟಮ್, ಜಲ ನಿರ್ವಹಣೆ ಸಂಶೋಧನೆಗೆ ಆಸಕ್ತಿ; ಕ್ವಾಂಟಮ್ ಸಿಟಿ, ಕ್ವಾಂಟಮ್ ಇಂಡಿಯಾ ಬೆಂಗಳೂರು 2027ಕ್ಕೆ ಇಸ್ರೇಲ್ ಕಂಪನಿಗಳಿಗೆ ಆಹ್ವಾನ

November 17, 2026 10:57 PM
ಬೆಳಗಾವಿ ಲೋಕಾಯುಕ್ತ ಬಲೆಗೆ ಸಹಾಯಕ ಆಯುಕ್ತರ ಕಚೇರಿ ಗುಮಾಸ್ತ ಪದ್ಮಾಕರ ಪಾಟೀಲ: ಕಾನೂನು ವಿದ್ಯಾರ್ಥಿಯಿಂದ ₹2,000 ಲಂಚ ಸ್ವೀಕಾರ, 38 ಪ್ರಕರಣಗಳಿಗೆ ₹30,000 ಬೇಡಿಕೆ ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ ಕಚೇರಿಯ ಕಮಾನು ಪ್ರವೇಶದ್ವಾರ
  • ಕರ್ನಾಟಕ

ಬೆಳಗಾವಿ ಲೋಕಾಯುಕ್ತ ಬಲೆಗೆ ಸಹಾಯಕ ಆಯುಕ್ತರ ಕಚೇರಿ ಗುಮಾಸ್ತ ಪದ್ಮಾಕರ ಪಾಟೀಲ: ಕಾನೂನು ವಿದ್ಯಾರ್ಥಿಯಿಂದ ₹2,000 ಲಂಚ ಸ್ವೀಕಾರ, 38 ಪ್ರಕರಣಗಳಿಗೆ ₹30,000 ಬೇಡಿಕೆ

November 17, 2026 10:49 PM
ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆ: 31 ಜಿಲ್ಲೆಗಳ 15,000 ಕಿ.ಮೀ. ರಸ್ತೆಗೆ ₹10,000 ಕೋಟಿ; 15 ತಿಂಗಳಲ್ಲಿ ಕಾಮಗಾರಿ ಪೂರ್ಣ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆ: 31 ಜಿಲ್ಲೆಗಳ 15,000 ಕಿ.ಮೀ. ರಸ್ತೆಗೆ ₹10,000 ಕೋಟಿ; 15 ತಿಂಗಳಲ್ಲಿ ಕಾಮಗಾರಿ ಪೂರ್ಣ

November 17, 2026 8:49 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರಿನಲ್ಲಿ ಗೋಲ್ಡನ್ ಅಂಬೇಡ್ಕರ್ ಫೌಂಡೇಷನ್ ಸನ್ಮಾನ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿರುವವರು
  • ಕರ್ನಾಟಕ

ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ

The Bengaluru Live November 17, 2026 11:59 PM
ಬೆಂಗಳೂರಿನ ಆರೋಗ್ಯ ಸೌಧದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಿರುವ ಆರೋಗ್ಯ ಸಚಿವರು
  • ಕರ್ನಾಟಕ

ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ

The Bengaluru Live November 17, 2026 11:02 PM
ಬೈಕಂಪಾಡಿಯ ಸಂಗ್ರಹಾಗಾರದಲ್ಲಿ ವಶಪಡಿಸಿಕೊಂಡ ಅಡುಗೆ ಎಣ್ಣೆಯ ಕ್ಯಾನ್‌ಗಳ ರಾಶಿ
  • ಕರ್ನಾಟಕ

ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್

The Bengaluru Live November 17, 2026 11:02 PM
ಬೆಂಗಳೂರು ಟೆಕ್ ಸಮ್ಮಿಟ್ 2026ರ ಮಳಿಗೆಯಲ್ಲಿ ಕರ್ನಾಟಕದ ಅಧಿಕಾರಿಗಳು ಮತ್ತು ಇಸ್ರೇಲ್ ಪ್ರತಿನಿಧಿಗಳ ಗುಂಪು ಚಿತ್ರ
  • ಕರ್ನಾಟಕ

ಕರ್ನಾಟಕ ಇಸ್ರೇಲ್ ಸಹಭಾಗಿತ್ವ: ಕ್ವಾಂಟಮ್, ಜಲ ನಿರ್ವಹಣೆ ಸಂಶೋಧನೆಗೆ ಆಸಕ್ತಿ; ಕ್ವಾಂಟಮ್ ಸಿಟಿ, ಕ್ವಾಂಟಮ್ ಇಂಡಿಯಾ ಬೆಂಗಳೂರು 2027ಕ್ಕೆ ಇಸ್ರೇಲ್ ಕಂಪನಿಗಳಿಗೆ ಆಹ್ವಾನ

The Bengaluru Live November 17, 2026 10:57 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ
  • ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ
  • ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್
  • ಕರ್ನಾಟಕ ಇಸ್ರೇಲ್ ಸಹಭಾಗಿತ್ವ: ಕ್ವಾಂಟಮ್, ಜಲ ನಿರ್ವಹಣೆ ಸಂಶೋಧನೆಗೆ ಆಸಕ್ತಿ; ಕ್ವಾಂಟಮ್ ಸಿಟಿ, ಕ್ವಾಂಟಮ್ ಇಂಡಿಯಾ ಬೆಂಗಳೂರು 2027ಕ್ಕೆ ಇಸ್ರೇಲ್ ಕಂಪನಿಗಳಿಗೆ ಆಹ್ವಾನ
©Copyright 2025 The Bengaluru Live All rights reserved. | MoreNews by AF themes.