Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ಪ್ರಾಥಮಿಕ-ಪ್ರೌಢ ಶಾಲೆಗಳಲ್ಲಿ ಕನಿಷ್ಠ ಒಂದು ಗಂಟೆ ಕ್ರೀಡೆಗೆ ಮೀಸಲಿಡಿ- ಕ್ರೀಡಾ ಸಚಿವ ಡಾ. ನಾರಾಯಣಗೌಡ ಮನವಿ.
  • ಬೆಂಗಳೂರು ನಗರ

ಪ್ರಾಥಮಿಕ-ಪ್ರೌಢ ಶಾಲೆಗಳಲ್ಲಿ ಕನಿಷ್ಠ ಒಂದು ಗಂಟೆ ಕ್ರೀಡೆಗೆ ಮೀಸಲಿಡಿ- ಕ್ರೀಡಾ ಸಚಿವ ಡಾ. ನಾರಾಯಣಗೌಡ ಮನವಿ.

The Bengaluru Live August 14, 2021 3:00 PM
ಪ್ರಾಥಮಿಕ-ಪ್ರೌಢ ಶಾಲೆಗಳಲ್ಲಿ ಕನಿಷ್ಠ ಒಂದು ಗಂಟೆ ಕ್ರೀಡೆಗೆ ಮೀಸಲಿಡಿ- ಕ್ರೀಡಾ ಸಚಿವ ಡಾ. ನಾರಾಯಣಗೌಡ ಮನವಿ.

ಪ್ರಾಥಮಿಕ-ಪ್ರೌಢ ಶಾಲೆಗಳಲ್ಲಿ ಕನಿಷ್ಠ ಒಂದು ಗಂಟೆ ಕ್ರೀಡೆಗೆ ಮೀಸಲಿಡಿ- ಕ್ರೀಡಾ ಸಚಿವ ಡಾ. ನಾರಾಯಣಗೌಡ ಮನವಿ.

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರಿಗೆ ಕ್ರೀಡಾ ಸಚಿವರಿಂದ ಪತ್ರ

ಬೆಂಗಳೂರು:

ಕಳೆದ ಓಲಂಪಿಕ್ ಕ್ರೀಡಾಕೂಟದಲ್ಲಿ ನಮ್ಮ ದೇಶ ಉತ್ತಮ ಸಾಧನೆ ಮಾಡಿದೆ. ಇನ್ನೂ ಹೆಚ್ಚಿನ ಸಾಧನೆ ಆಗಬೇಕೆಂದರೆ ಈಗಲೇ ಸಿದ್ದತೆ ಮಾಡಬೇಕು. ಬಾಲ್ಯದಲ್ಲಿಯೇ ಕ್ರೀಡೆಯಲ್ಲಿ ಆಸಕ್ತಿ ಮೂಡುವಂತಾಗಬೇಕು. ಸೂಕ್ತ ತರಬೇತಿಯೂ ಸಿಗಬೇಕು. ಆಗ ಮಾತ್ರ ಕ್ರೀಡೆಯಲ್ಲಿ ಸಾಧನೆ ಸಾಧ್ಯ. ಅದಕ್ಕಾಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಕ್ರೀಡೆಗೆ ಹೆಚ್ಚಿನ ಅವಕಾಶ ನೀಡಬೇಕು. ಖಾಲಿ ಇರುವ ದೈಹಿಕ ಶಿಕ್ಷಕರ ಹುದ್ದೆ ಭರ್ತಿಯಾಗಬೇಕು. ಶಾಲೆಯಲ್ಲಿ ಪ್ರತಿ ನಿತ್ಯ ವ್ಯಾಯಾಮ, ಕ್ರೀಡೆಗೆ ಒಂದು ಗಂಟೆ ಸಮಯ ಮೀಸಲಿಡಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರಿಗೆ ಪತ್ರ ಮುಖೇನ ಮನವಿ ಮಾಡಿದ್ದಾರೆ.

ವಿದ್ಯಾರ್ಥಿ ದೆಸೆಯಲ್ಲೇ ಕ್ರೀಡೆಯ ತರಬೇತಿ ಆಗಬೇಕು. ಆಸಕ್ತಿ ಇರುವ ಸಮರ್ಥ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಮುಂದುವರೆಯುತ್ತಾರೆ. ಕ್ರೀಡಾಂಗಣ, ಕ್ರೀಡಾ ಸೌಲಭ್ಯ ಇದ್ದ ಮಾತ್ರಕ್ಕೆ ಸಾಧನೆ ಆಗಲಾರದು. ಬುನಾದಿ ಸರಿಯಾಗಿರಬೇಕು. ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಂತದಲ್ಲೇ ವ್ಯಾಯಾಮ, ಕ್ರೀಡೆ ಬಗ್ಗೆ ಸೂಕ್ತ ತರಬೇತಿ ನೀಡುವ ಪ್ರಕ್ರಿಯೆ ಆರಂಭವಾಗಬೇಕು. ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ 39,308 ದೈಹಿಕ ಶಿಕ್ಷಕರ ಹುದ್ದೆಗಳು ಖಾಲಿ ಇದೆ. ಇದು ಬೆಳೆವ ಸಿರಿಯನ್ನು ಮೊಳಕೆಯಲ್ಲೇ ಚಿವುಟಿದಂತೆ ಆಗುತ್ತಿದೆ. ಮುಂದಿನ ಓಲಂಪಿಕ್ ಗೆ ನಮ್ಮ ರಾಜ್ಯದಿಂದ 100 ಕ್ರೀಡಾಪಟುಗಳನ್ನು ಕಳುಹಿಸುವ ಗುರಿ ಹೊಂದಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕ್ರೀಡಾಪಟುಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕಳುಹಿಸಬೇಕೆಂದರೆ ಈಗಿನಿಂದಲೇ ಸಿದ್ದತೆ ಆಗಬೇಕು. ದೈಹಿಕ ಶಿಕ್ಷಕರ ನೇಮಕವಾಗಬೇಕು. ಮಾನಸಿಕ ಹಾಗೂ ದೈಹಿಕ ಸದೃಢತೆಗೆ ಇದು ಸಹಕಾರಿಯಾಗುತ್ತದೆ. ಶಿಕ್ಷಣ ಸಚಿವರು ಕಡ್ಡಾಯವಾಗಿ ದೈಹಿಕ ಶಿಕ್ಷಕರ ನೇಮಕಕ್ಕೆ ಕ್ರಮ ತೆಗೆದುಕೊಳ್ಳಿ ಎಂದು ಸಚಿವರು ಪತ್ರದಲ್ಲಿ ಮನವಿ ಮಾಡಿದ್ದಾರೆ.

Karnataka sports minister writes to Education Minister

ಕೇವಲ ಕ್ರೀಡಾಪಟುವಾಗುವುದಕ್ಕೆ ಮಾತ್ರವಲ್ಲ, ನಮ್ಮ ಜೀವನವನ್ನು ಸುಂದರವಾಗಿ ರೂಪಿಸುವಲ್ಲಿ ವ್ಯಾಯಾಮ ಮತ್ತು ಕ್ರೀಡೆಗಳು ಅತ್ಯಂತ ಮಹತ್ವ ಪಾತ್ರ ವಹಿಸುತ್ತವೆ. ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ವ್ಯಾಯಾಮ ಮತ್ತು ಕ್ರೀಡೆಗಳು ಸುಲಭವಾದ ಮಾರ್ಗಗಳು. ಕ್ರೀಡೆ ಮತ್ತು ವ್ಯಾಯಾಮ ಸ್ಪರ್ಧಾತ್ಮಕ ಭಾವನೆ, ಸ್ನೇಹಪರ ಭಾವನೆ, ಶಿಸ್ತು, ಆತ್ಮಸ್ಥೈರ್ಯ, ಕೌಶಲ್ಯತೆಯನ್ನು ಮೂಡಿಸಿ ಶಾರೀರಿಕ ಸಂಪತ್ತನ್ನು ಹಾಗೂ ಬೌದ್ದಿಕ ಸಾಮಥ್ರ್ಯವನ್ನು ವೃದ್ಧಿಸುತ್ತದೆ. ಕ್ರೀಡೆಯು ಮನರಂಜನೆ ನೀಡುವುದರೊಂದಿಗೆ ಪ್ರೀತಿ, ಸಹಕಾರ, ಸಹಬಾಳ್ವೆ, ದೇಶಪ್ರೇಮದ ಭಾವೈಕ್ಯತೆಯನ್ನು ಬೆಳೆಸುತ್ತದೆ. ಪ್ರತಿನಿತ್ಯ ವ್ಯಾಯಾಮ ಮಾಡುವುದರಿಂದ ಶಾರೀರಿಕ ಬೆಳವಣಿಗೆಯೊಂದಿಗೆ ಆರೋಗ್ಯದ ಸಮತೋಲನವನ್ನು ಕಾಪಾಡಿಕೊಳ್ಳಲು ಸಾಧ್ಯ. ದೈಹಿಕ ಆರೋಗ್ಯ, ವ್ಯಕ್ತಿತ್ವ ನಿರ್ಮಾಣ ಮತ್ತು ಬೌದ್ಧಿಕ ಬೆಳವಣಿಗೆಯನ್ನು ಶಾರೀರಿಕ ಚಟುವಟಿಕೆಗಳ ಮೂಲಕ ಸಾಧಿಸುವುದು ದೈಹಿಕ ಶಿಕ್ಷಣದ ಮುಖ್ಯ ಉದ್ದೇಶ. ದೈಹಿಕ ಶಿಕ್ಷಣದಿಂದ ನಾಯಕತ್ವ, ಹೋರಾಟ ಮನೋಭಾವ, ಸೋಲನ್ನು ಎದುರಿಸುವ ಶಕ್ತಿ, ಮುಂತಾದ ಗುಣಗಳು ಬೆಳೆಯುತ್ತವೆ. ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪಠ್ಯಕ್ರಮಗಳು ಎಷ್ಟು ಮುಖ್ಯವೋ ಪಠ್ಯೇತರ ಚಟುವಟಿಕೆಗಳು ಕೂಡ ಅಷ್ಟೇ ಮುಖ್ಯ.

ಈ ಹಿಂದೆ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಪ್ರತಿನಿತ್ಯ ಒಂದು ಗಂಟೆ ಅವಧಿ ವಿದ್ಯಾರ್ಥಿಗಳ ದೈಹಿಕ ಶಿಕ್ಷಣಕ್ಕಾಗಿ ಮೀಸಲಿಡಲಾಗುತ್ತಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಈ ಪದ್ಧತಿಯನ್ನು ಕೈಬಿಟ್ಟಿರುವುದು, ಕ್ರಮೇಣವಾಗಿ ಕಡಿಮೆ ಮಾಡುತ್ತಿರುವುದು ವಿಷಾದದ ಸಂಗತಿ. ವಿದ್ಯಾರ್ಥಿಗಳ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವೂ ಸಹ ಮುಖ್ಯವಾಗಿರುವುದರಿಂದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಪ್ರತಿನಿತ್ಯ ಒಂದು ಗಂಟೆ ಅವಧಿಯನ್ನು ದೈಹಿಕ ಶಿಕ್ಷಣಕ್ಕಾಗಿ ಮೀಸಲಿಡುವುದು ಅತ್ಯವಶ್ಯಕವಾಗಿದೆ. ಇದನ್ನು ಹೊಸ ಶಿಕ್ಷಣ ನೀತಿಯಲ್ಲೂ ಸಹ ಉಲ್ಲೇಖಿಸಲಾಗಿದೆ.

ಆದುದರಿಂದ, ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳಲ್ಲಿ ಖಡ್ಡಾಯವಾಗಿ ಪ್ರತಿನಿತ್ಯ ಕನಿಷ್ಠ ಒಂದು ಗಂಟೆ ಅವಧಿಯನ್ನು ವಿದ್ಯಾರ್ಥಿಗಳ ದೈಹಿಕ ಶಿಕ್ಷಣಕ್ಕಾಗಿ ಮೀಸಲಿಡುವಂತೆ ಸೂಚಿಸುವಂತೆ ಶಿಕ್ಷಣ ಸಚಿವರಿಗೆ ಕ್ರೀಡಾ ಸಚಿವ ಡಾ. ನಾರಾಯಣಗೌಡ ಪತ್ರ ಬರೆದು ಮನವಿ ಮಾಡಿದ್ದಾರೆ. ಸಂಬಂಧಪಟ್ಟವರಿಗೆಲ್ಲಾ ಕಟ್ಟುನಿಟ್ಟಾಗಿ ನಿರ್ದೇಶನಗಳನ್ನು ನೀಡುವಂತೆ ಕೋರಿದ್ದಾರೆ.

ಖಾಲಿ ಇರುವ ದೈಹಿಕ ಶಿಕ್ಷಕ ಹುದ್ದೆಗಳನ್ನು ಆದ್ಯತೆಯ ಮೇಲೆ ಶೀಘ್ರವಾಗಿ ಭರ್ತಿ ಮಾಡಿ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಲು ಅನುಕೂಲ ಕಲ್ಪಿಸುವಂತೆಯೂ ಪತ್ರದಲ್ಲಿ ಮನವಿ ಮಾಡಿದ್ದಾರೆ.

About the Author

The Bengaluru Live

Administrator

Visit Website View All Posts

Post navigation

Previous: 3 ವರ್ಷ ಮೇಲ್ಪಟ್ಟ ಎಲ್ಲಾ ಮಕ್ಕಳು ಕೂಡ ಮಾಸ್ಕ್ ಧರಿಸಿರುವಂತೆ ಬಿಬಿಎಂಪಿ ಸಲಹೆ
Next: ಸರ್ಕಾರ ಹೆಚ್ಚು ದಿನ ಬಾಳುವುದಿಲ್ಲ : ಸಿದ್ದರಾಮಯ್ಯ

Related Stories

ಹೆಣ್ಣೂರು–ಬಾಗಲೂರು ರಸ್ತೆಯಲ್ಲಿ ಹೊಸದಾಗಿ ಹಾಕಿದ ಕಾಂಕ್ರೀಟ್ ಪಕ್ಕದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು.
  • ಬೆಂಗಳೂರು ನಗರ

ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ

The Bengaluru Live November 11, 2026 1:28 AM
ಎತ್ತರಿಸಿದ ಹಳಿಗಳ ಮೇಲೆ ಸಾಗುತ್ತಿರುವ ನಮ್ಮ ಮೆಟ್ರೋ ರೈಲು
  • ಬೆಂಗಳೂರು ನಗರ
  • ಕರ್ನಾಟಕ

ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್

The Bengaluru Live November 11, 2026 12:25 AM
ಡಾ. ಸಮೀಕ್ಷಾ ರೆಡ್ಡಿ ಅವರ ಭಾವಚಿತ್ರ ಮತ್ತು ಬನ್ನೇರುಘಟ್ಟದಲ್ಲಿ ನೀರಾನೆ ಮರಿಯ ಸಮೀಕ್ಷಾ ನಾಮಫಲಕದ ಬಳಿಯ ಸಂದರ್ಶಕರು
  • ಕರ್ನಾಟಕ
  • ಬೆಂಗಳೂರು ನಗರ

ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು

The Bengaluru Live November 10, 2026 10:14 PM

Latest Post

ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ ಹೆಣ್ಣೂರು–ಬಾಗಲೂರು ರಸ್ತೆಯಲ್ಲಿ ಹೊಸದಾಗಿ ಹಾಕಿದ ಕಾಂಕ್ರೀಟ್ ಪಕ್ಕದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು.
  • ಬೆಂಗಳೂರು ನಗರ

ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ

November 11, 2026 1:28 AM
ಬಿಹಾರ ಕಾರ್ಟ್ರಿಡ್ಜ್ ವಶ ಪ್ರಕರಣದ ಚಿತ್ರಕ್ಕೆ ಆಕ್ಷೇಪ: ಪ್ರಿಯಾಂಕ್ ಖರ್ಗೆ ವಿರುದ್ಧ ತೇಜಸ್ವಿ ಸೂರ್ಯ, ಗಿರೀಶ್ ಭಾರದ್ವಾಜ್ ವಾಗ್ದಾಳಿ ಕೊಚ್ಚಿಯ ಮುಸ್ಲಿಂ ಯೂತ್ ಲೀಗ್ ರ‍್ಯಾಲಿಯಲ್ಲಿ ವೇದಿಕೆಯಲ್ಲಿ ಸಂವಿಧಾನದ ಪ್ರತಿ ಹಿಡಿದು ಮಾತನಾಡುತ್ತಿರುವ ಪ್ರಿಯಾಂಕ್ ಖರ್ಗೆ
  • ಕರ್ನಾಟಕ
  • ರಾಜಕೀಯ

ಬಿಹಾರ ಕಾರ್ಟ್ರಿಡ್ಜ್ ವಶ ಪ್ರಕರಣದ ಚಿತ್ರಕ್ಕೆ ಆಕ್ಷೇಪ: ಪ್ರಿಯಾಂಕ್ ಖರ್ಗೆ ವಿರುದ್ಧ ತೇಜಸ್ವಿ ಸೂರ್ಯ, ಗಿರೀಶ್ ಭಾರದ್ವಾಜ್ ವಾಗ್ದಾಳಿ

November 11, 2026 1:14 AM
ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್ ಎತ್ತರಿಸಿದ ಹಳಿಗಳ ಮೇಲೆ ಸಾಗುತ್ತಿರುವ ನಮ್ಮ ಮೆಟ್ರೋ ರೈಲು
  • ಬೆಂಗಳೂರು ನಗರ
  • ಕರ್ನಾಟಕ

ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್

November 11, 2026 12:25 AM
ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ ವಿಧಾನಸೌಧದಲ್ಲಿ ಮಧ್ಯಂತರ ಬರ ಪರಿಹಾರ ಪಾವತಿಗೆ ಚಾಲನೆ ನೀಡಿದ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ

November 10, 2026 11:27 PM
ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು ಡಾ. ಸಮೀಕ್ಷಾ ರೆಡ್ಡಿ ಅವರ ಭಾವಚಿತ್ರ ಮತ್ತು ಬನ್ನೇರುಘಟ್ಟದಲ್ಲಿ ನೀರಾನೆ ಮರಿಯ ಸಮೀಕ್ಷಾ ನಾಮಫಲಕದ ಬಳಿಯ ಸಂದರ್ಶಕರು
  • ಕರ್ನಾಟಕ
  • ಬೆಂಗಳೂರು ನಗರ

ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು

November 10, 2026 10:14 PM
ನ.13ರಂದು ಬೆಂಗಳೂರಿನಲ್ಲಿ ₹160 ಕೋಟಿ ವೆಚ್ಚದ ಸಂಕುಚಿತ ಜೈವಿಕ ಅನಿಲ ಘಟಕಕ್ಕೆ ಪ್ರಧಾನಿ ಮೋದಿ ವರ್ಚುವಲ್ ಶಿಲಾನ್ಯಾಸ ಪರಿಶೀಲನೆಯ ವೇಳೆ ಜೈವಿಕ ಅನಿಲ ಘಟಕದಲ್ಲಿ ಹಸಿರು ಚೌಕಟ್ಟಿನ ಗ್ಯಾಸ್ ಸಿಲಿಂಡರ್‌ಗಳ ಸುತ್ತ ನಿಂತಿರುವ ಪುರುಷರು
  • ಬೆಂಗಳೂರು

ನ.13ರಂದು ಬೆಂಗಳೂರಿನಲ್ಲಿ ₹160 ಕೋಟಿ ವೆಚ್ಚದ ಸಂಕುಚಿತ ಜೈವಿಕ ಅನಿಲ ಘಟಕಕ್ಕೆ ಪ್ರಧಾನಿ ಮೋದಿ ವರ್ಚುವಲ್ ಶಿಲಾನ್ಯಾಸ

November 10, 2026 5:55 PM

ನೀವು ತಪ್ಪಿಸಿಕೊಂಡಿರಬಹುದು

ಹೆಣ್ಣೂರು–ಬಾಗಲೂರು ರಸ್ತೆಯಲ್ಲಿ ಹೊಸದಾಗಿ ಹಾಕಿದ ಕಾಂಕ್ರೀಟ್ ಪಕ್ಕದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು.
  • ಬೆಂಗಳೂರು ನಗರ

ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ

The Bengaluru Live November 11, 2026 1:28 AM
ಕೊಚ್ಚಿಯ ಮುಸ್ಲಿಂ ಯೂತ್ ಲೀಗ್ ರ‍್ಯಾಲಿಯಲ್ಲಿ ವೇದಿಕೆಯಲ್ಲಿ ಸಂವಿಧಾನದ ಪ್ರತಿ ಹಿಡಿದು ಮಾತನಾಡುತ್ತಿರುವ ಪ್ರಿಯಾಂಕ್ ಖರ್ಗೆ
  • ಕರ್ನಾಟಕ
  • ರಾಜಕೀಯ

ಬಿಹಾರ ಕಾರ್ಟ್ರಿಡ್ಜ್ ವಶ ಪ್ರಕರಣದ ಚಿತ್ರಕ್ಕೆ ಆಕ್ಷೇಪ: ಪ್ರಿಯಾಂಕ್ ಖರ್ಗೆ ವಿರುದ್ಧ ತೇಜಸ್ವಿ ಸೂರ್ಯ, ಗಿರೀಶ್ ಭಾರದ್ವಾಜ್ ವಾಗ್ದಾಳಿ

The Bengaluru Live November 11, 2026 1:14 AM
ಎತ್ತರಿಸಿದ ಹಳಿಗಳ ಮೇಲೆ ಸಾಗುತ್ತಿರುವ ನಮ್ಮ ಮೆಟ್ರೋ ರೈಲು
  • ಬೆಂಗಳೂರು ನಗರ
  • ಕರ್ನಾಟಕ

ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್

The Bengaluru Live November 11, 2026 12:25 AM
ವಿಧಾನಸೌಧದಲ್ಲಿ ಮಧ್ಯಂತರ ಬರ ಪರಿಹಾರ ಪಾವತಿಗೆ ಚಾಲನೆ ನೀಡಿದ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ

The Bengaluru Live November 10, 2026 11:27 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ
  • ಬಿಹಾರ ಕಾರ್ಟ್ರಿಡ್ಜ್ ವಶ ಪ್ರಕರಣದ ಚಿತ್ರಕ್ಕೆ ಆಕ್ಷೇಪ: ಪ್ರಿಯಾಂಕ್ ಖರ್ಗೆ ವಿರುದ್ಧ ತೇಜಸ್ವಿ ಸೂರ್ಯ, ಗಿರೀಶ್ ಭಾರದ್ವಾಜ್ ವಾಗ್ದಾಳಿ
  • ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್
  • ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ
©Copyright 2025 The Bengaluru Live All rights reserved. | MoreNews by AF themes.