ಬೆಂಗಳೂರು:
10ಕ್ಕಿಂತ ಹೆಚ್ಚು ಕಾರ್ಮಿಕರನ್ನು ಹೊಂದಿರುವ ವಾಣಿಜ್ಯ ಮಳಿಗೆಗಳು ವಾರದ ಏಳೂ ದಿನ, ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಕಾರ್ಮಿಕ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಮುಂದಿನ ಮೂರು ವರ್ಷ ಈ ಅಧಿಸೂಚನೆ ಅನ್ವಯವಾಗಲಿದ್ದು, ಅಂಗಡಿ ಮತ್ತು ವಾಣಿಜ್ಯ ಮಳಿಗೆಗಳು ತಮ್ಮ ನೌಕರರಿಗೆ ಕಡ್ಡಾಯವಾಗಿ ವಾರದಲ್ಲಿ ಒಂದು ದಿನ ರಜೆ ನೀಡಬೇಕು. ಅದನ್ನು ಅಂಗಡಿಯಲ್ಲಿ ಎಲ್ಲರಿಗೂ ಕಾಣುವಂತೆ ಪ್ರದರ್ಶಿಸಬೇಕು ಎಂದು ತಿಳಿಸಲಾಗಿದೆ.
ರಜೆ ಹಾಗು ವಾರದ ರಜೆಯಲ್ಲಿರುವ ಉದ್ಯೋಗಿಯ ಮಾಹಿತಿಯನ್ನು ಎಲ್ಲರಿಗೂ ಕಾಣಿಸುವಂತೆ ಪ್ರದರ್ಶನ ಮಾಡಬೇಕು. ಕಾರ್ಮಿಕರ ಸಂಬಳ ಮತ್ತು ಹೆಚ್ಚುವರಿ ಅವಧಿಯ ಭತ್ಯೆಯನ್ನು 1963ರ ಸಂಬಳ ಮತ್ತು ಭತ್ಯೆ ಕಾಯ್ದೆ ಅನ್ವಯ ನೀಡಬೇಕು. UNI