ರಾಜ್ಯವ್ಯಾಪಿ ಅನ್ವಯವಾಗುವಂತೆ — ಪ್ರತಿ ದಿನ ನೈಟ್ ಕರ್ಫ್ಯೂ ರಾತ್ರಿ 07.00 ಗಂಟೆಯಿಂದ ಬೆಳಗ್ಗೆ 05 ಗಂಟೆವರೆಗೆ; ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 07.00 ಗಂಟೆಯಿಂದ ಸೋಮವಾರ ಬೆಳಿಗ್ಗ 05.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ
ಬೆಂಗಳೂರು:
ರಾಜ್ಯದಲ್ಲಿ ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವಂತ 16 ಜಿಲ್ಲೆಗಳಲ್ಲಿ ಅನ್ ಲಾಕ್ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.
ಮುಖ್ಯಮಂತ್ರಿಯವರು ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಶೇ.50ರಷ್ಟು ಪ್ರಯಾಣಿಕರೊಂದಿಗೆ ಸಾರಿಗೆ ಸಂಚಾರ, ಹೋಟೆಲ್, ಬಾರ್ (ಮದ್ಯಪಾನ ಹೊರತುಪಡಿಸಿ) ಅಂಡ್ ರೆಸ್ಟೋರೆಂಟ್ ಗಳನ್ನು ಸಹ ಶೇ.50ರಷ್ಟು ಜನರೊಂದಿಗೆ ತೆರೆಯೋದಕ್ಕೂ ಅವಕಾಶ ನೀಡಿದ್ದಾರೆ.
ಇದನ್ನೂ ಓದಿ: Bengaluru Metro: ಸೋಮವಾರ ಬೆಳಗ್ಗೆ 7 ಗಂಟೆಯಿಂದಲೇ ಸಂಚಾರ ಶುರು https://kannada.thebengalurulive.com/karnataka-allows-bus-and-metro-with-50-capacity-from-monday-chief-minister-bs-yediyurappa/
ಜುಲೈ 5ರವರೆಗೆ ಈ ಮಾರ್ಗಸೂಚಿ ಕ್ರಮಗಳು ಜಾರಿಯಲ್ಲಿದ್ದು, ನೈಟ್ ಹಾಗೂ ವಾರಾಂತ್ಯ ಕರ್ಪ್ಯೂ ರಾಜ್ಯಾಧ್ಯಂತ ಮುಂದುವರೆಯಲಿದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.
Revised-Extension-of-Guidelines-Unlock-2.0ಜೂನ್ 21,2021ರಿಂದ ರಾಜ್ಯವ್ಯಾಪಿ
— Rakesh Singh IAS 🇮🇳 (@PRO_Shankar) June 19, 2021
ಅನ್ವಯವಾಗುವಂತೆ
•ಪ್ರತಿ ದಿನ ನೈಟ್ ಕರ್ಫ್ಯೂ ರಾತ್ರಿ 7ರಿಂದ ಬೆಳಗ್ಗೆ 5ಗಂಟೆವರೆಗೆ ಇರುತ್ತದೆ
•ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7ರಿಂದ ಸೋಮವಾರ ಬೆಳಿಗ್ಗೆ 5ಗಂಟೆಯವರೆಗೆ ಜಾರಿಯಲ್ಲಿರುತ್ತದೆ
•ಬಸ್ & ಮೆಟ್ರೋ ಸಂಚಾರವು ಶೇ 50 ಪ್ರಯಾಣಿಕರಿಗೆ ಮಿತಿಗೊಳಿಸಿ ಸಂಚಾರಕ್ಕೆ ಅನುಮತಿಸಿದೆ pic.twitter.com/PMrmN0PsQT
ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ 5% ಗಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 % ಇದ್ದು, ಮೈಸೂರಿನಲ್ಲಿ ಶೇ 10 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ.
• ಈ ಪಾಜಿಟಿವಿಟಿ ದರದ ಆಧಾರದ ಮೇಲೆ ನಿರ್ಬಂಧಗಳ ಸಡಿಲಿಕೆಗಳನ್ನು ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಈ ಕೆಳಕಂಡಂತೆ ತೀರ್ಮಾನಿಸಲಾಗಿದೆ.
• ಶೇ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿ.ಬಿ.ಎಂ.ಪಿ ಸೇರಿದಂತೆ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ ಜಿಲ್ಲೆಗಳಿಗೆ ಈ ಕೆಳಕಂಡ ಸಡಿಲಿಕೆಗಳನ್ನು ನೀಡಲಾಗಿದೆ.
• ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ಮಾಡಿಕೊಡಲಾಗುವುದು.
• ಎಸಿ. ಚಾಲನೆಗೊಳಿಸದೇ ಹೋಟೆಲ್, ಕ್ಲಬ್ಸ್, ರೆಸ್ಟೋರೆಂಟ್‌ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5.00 ಗಂಟೆವರೆಗೆ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ಮಾಡಿಕೊಡಲಾಗುವುದು.
• ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ.
• ಬಸ್ ಮತ್ತು ಮೆಟ್ರೋ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಣೆಗೆ ಅವಕಾಶ ನೀಡಿದೆ.
• ಹೊರಾಂಗಣ ಕ್ರೀಡೆಗಳಿಗೆ, ವೀಕ್ಷಕರಿಲ್ಲದೇ ಅನುಮತಿ ನೀಡಲಾಗಿದೆ.
• ಸರ್ಕಾರಿ/ಖಾಸಗಿ ಕಛೇರಿಗಳಿಗೆ ಶೇ 50 ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ.
• ಲಾಡ್ಜ್ ಗಳಲ್ಲಿ ಮತ್ತು ರೆಸಾರ್ಟ್ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.
• ಜಿಮ್ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ ನೀಡಿದೆ.
• ಶೇ 5 ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಿಗೆ ದಿನಾಂಕ: 11-06-2021 ಆದೇಶದಲ್ಲಿ ನೀಡಿರುವ ಸಡಿಲಿಕೆಗಳು ಮಾತ್ರ ಅನ್ವಯಿಸುತ್ತವೆ.
• ಶೇ. 10 ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ ಮೈಸೂರು ಜಿಲ್ಲೆಯಲ್ಲಿ ಯಥಾಸ್ಥಿತಿ ನಿರ್ಬಂಧಗಳು ಮುಂದುವರೆಯುವುದು.
ರಾಜ್ಯವ್ಯಾಪಿ ಅನ್ವಯವಾಗುವಂತೆ:
• ಪ್ರತಿ ದಿನ ನೈಟ್ ಕರ್ಫ್ಯೂ ರಾತ್ರಿ 07.00 ಗಂಟೆಯಿಂದ ಬೆಳಗ್ಗೆ 05 ಗಂಟೆವರೆಗೆ ಇರುತ್ತದೆ.
• ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 07.00 ಗಂಟೆಯಿಂದ ಸೋಮವಾರ ಬೆಳಿಗ್ಗ 05.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ
• ಬಸ್ ಮತ್ತು ಮೆಟ್ರೋ ಸಂಚಾರವು ಶೇ. 50 ಪ್ರಯಾಣಿಕರಿಗೆ ಮಿತಿಗೊಳಿಸಿ ಸಂಚಾರಕ್ಕೆ ಅನುಮತಿಸಿದೆ.