Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ಜನವರಿ 26 ರಿಂದ 5 ಜಿಲ್ಲೆಗಳಲ್ಲಿ ಗ್ರಾಮ ಸೇವಾ ಯೋಜನೆಗೆ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
  • ಬೆಂಗಳೂರು ನಗರ

ಜನವರಿ 26 ರಿಂದ 5 ಜಿಲ್ಲೆಗಳಲ್ಲಿ ಗ್ರಾಮ ಸೇವಾ ಯೋಜನೆಗೆ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

The Bengaluru Live September 23, 2021 5:35 PM 1 minute read
Karnataka announces Grama Seva project in 5 districts from January 26 Basavaraj Bommai

ಜನವರಿ 26 ರಿಂದ 5 ಜಿಲ್ಲೆಗಳಲ್ಲಿ ಗ್ರಾಮ ಸೇವಾ ಯೋಜನೆಗೆ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಗ್ರಾಮ ಪಂಚಾಯಿತಿ ಮಟ್ಟದಲ್ಲೇ ಆನ್ ಲೈನ್ ಮೂಲಕ ನಾಗರಿಕ ಸೇವೆಗಳು ಲಭ್ಯ

ಬೆಂಗಳೂರು:

ನಾಗರಿಕ ಸೇವೆಗಳನ್ನು ಗ್ರಾಮ ಪಂಚಾಯಿತಿ ಹಂತದಲ್ಲಿಯೇ ಆನ್ ಲೈನ್ ಮೂಲಕ ಒದಗಿಸುವ ವಿನೂತನ “ಗ್ರಾಮ ಸೇವಾ” ಯೋಜನೆಯನ್ನು ಪ್ರಾಯೋಗಿಕವಾಗಿ ರಾಜ್ಯದ 5 ಜಿಲ್ಲೆಗಳಲ್ಲಿ ಮುಂಬರುವ ಗಣರಾಜ್ಯೋತ್ಸವ ಜನವರಿ 26 ರಿಂದ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಘೋಷಿಸಿದರು.

ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಲಾಗಿದ್ದ ಅಮೃತ ಗ್ರಾಮ ಪಂಚಾಯತ್ ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಅಭಿವೃದ್ಧಿ ಜನರ ಸುತ್ತ ಆಗಬೇಕು; ಜನರು ಅಭಿವೃದ್ಧಿ ಸುತ್ತ ಸುತ್ತುವಂತಾಗಬಾರದು. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಗಳು ಜನರಿಗೆ ವಿವಿಧ ಸೇವೆಗಳನ್ನು ಒದಗಿಸುವ ಗ್ರಾಮ ಸೇವಾ ಸಂಸ್ಥೆಯಾಗಬೇಕು. ಮನೆ ಬಾಗಿಲಿಗೆ ಸೌಲಭ್ಯಗಳು ತಲುಪಬೇಕು. ಈ ಆಶಯದೊಂದಿಗೆ ‘ಗ್ರಾಮ ಸೇವಾ ಯೋಜನೆ’ಯನ್ನು ಜಾರಿಗೊಳಿಸಲಾಗುವುದು. ಇದಕ್ಕೆ ಅಧಿಕಾರಿಗಳು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

Karnataka announces Grama Seva project in 5 districts from January 26 Basavaraj Bommai

ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಹಾಗೂ ಅಂದಿನ ಗ್ರಾಮೀಣಾಭಿವೃದ್ಧಿ ಸಚಿವ ಅಬ್ದುಲ್ ನಝೀರ್ ಸಾಬ್ ರಾಜ್ಯದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯ ರೂವಾರಿಗಳು ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು.

ಜನರ ಸಹಭಾಗಿತ್ವದಿಂದ ಮಾತ್ರ ಪ್ರಜಾ ಪ್ರಭುತ್ವ ಯಶಸ್ವಿಯಾಗಲು ಸಾಧ್ಯ. ಆದರೆ ಇಂದು ಜನರನ್ನು ಫಲಾನುಭವಿಗಳನ್ನಾಗಿಸಿದ್ದೇವೆ. ಅವರನ್ನು ಭಾಗೀದಾರರನ್ನಾಗಿಸಬೇಕಾಗಿದೆ. ಜನರೂ ಸಕ್ರಿಯವಾಗಿ ಭಾಗವಹಿಸಿದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ ಎಂದು ಅವರು ಹೇಳಿದರು.

‘ ಪ್ರೋತ್ಸಾಹ ಧನ ‘

ಇಂದು ಉದ್ಘಾಟನೆಯಾಗಿರುವ ಅಮೃತ ಯೋಜನೆಯಡಿ 750 ಗ್ರಾಮ ಪಂಚಾಯಿತಿಗಳ ಸರ್ವಾಂಗೀಣ ಅಭಿವೃದ್ಧಿ ಮಾಡುವ ಗುರಿ ಹೊಂದಲಾಗಿದೆ. ಇದಕ್ಕಾಗಿ ಪ್ರತಿ ಪಂಚಾಯಿತಿಗೆ ಸರಾಸರಿ 3 ಕೋಟಿ ರೂ. ಗಳಂತೆ ಸುಮಾರು 2300 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಮಾರ್ಚ್ 31 ರೊಳಗೆ ಯೋಜನೆ ಪೂರ್ಣಗೊಳಿಸಿದ ಪಂಚಾಯಿತಿಗಳಿಗೆ 25 ಲಕ್ಷ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಎಲ್ಲ ಗ್ರಾಮ ಪಂಚಾಯಿತಿಗಳು ಇದನ್ನು ಪೂರ್ಣಗೊಳಿಸಿದರೆ ಮುಂದಿನ ವರ್ಷ 1500 ಪಂಚಾಯಿತಿಗಳಲ್ಲಿ ಈ ಕಾರ್ಯಕ್ರಮ ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ನುಡಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆ ಜಲ ಜೀವನ್ ಮಿಷನ್ ಅನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ 2000 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Karnataka announces Grama Seva project in 5 districts from January 26 Basavaraj Bommai

ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಗ್ರಾಮಾಭಿವೃದ್ಧಿಯಾದಾಗ ಅಲ್ಲಿನ ಜೀವನ ಮಟ್ಟ ಸುಧಾರಿಸುತ್ತದೆ. ಗ್ರಾಮಗಳಲ್ಲಿ ಆರ್ಥಿಕ ಚಟುವಟಿಕೆ ಹೆಚ್ಚಾಗಬೇಕು. ಸ್ತ್ರೀಶಕ್ತಿ ಸ್ವಸಹಾಯ ಸಂಘಗಳು ಹಾಗೂ ಸಹಕಾರಿ ಸಂಸ್ಥೆಗಳಿಂದ ಇದು ಸಾಧ್ಯ. ಇಂದು ರಾಜ್ಯದ ತಲಾ ಆದಾಯಕ್ಕೆ ಶೇ. 25-30 ಜನಸಂಖ್ಯೆಯ ಕೊಡುಗೆ ಅತಿ ಹೆಚ್ಚು ಇದೆ. ಆದರೆ ಉಳಿದ ಜನರೂ ಹೆಚ್ಚಾಗಿ ಆರ್ಥಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ತಮ್ಮ ಆದಾಯ ಹೆಚ್ಚಿಸಿಕೊಳ್ಳುವುದಲ್ಲದೆ, ರಾಜ್ಯದ ತಲಾ ಆದಾಯ ಹೆಚ್ಚಳಕ್ಕೆ ಕೊಡುಗೆ ನೀಡುವಂತಾಗಬೇಕು ಎಂದು ಮುಖ್ಯಮಂತ್ರಿಗಳು ಆಶಿಸಿದರು.

ಗ್ರಾಮಾಭಿವೃದ್ಧಿಗಾಗಿ ಆತ್ಮವಿಶ್ವಾಸದಿಂದ ಕೆಲಸ ಮಾಡುವಂತೆ ಮುಖ್ಯಮಂತ್ರಿಗಳು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಪಿ.ಡಿ.ಓಗಳಿಗೆ ಸಿಎಂ ಕರೆ ನೀಡಿದರು.

‘ ಡಿಜಿಟಲ್ ಸಂಪರ್ಕ ‘

ಅಮೃತ ಗ್ರಾಮ ಪಂಚಾಯತ್ ಯೋಜನೆಗೆ ಚಾಲನೆ ನೀಡಿದ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಅವರು ರಾಜ್ಯದ ಗ್ರಾಮ ಪಂಚಾಯಿತಿಗಳ ಕಾರ್ಯನಿರ್ವಹಣೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಎಲ್ಲ ಗ್ರಾಮ ಪಂಚಾಯಿತಿಗಳು 2024 ರೊಳಗೆ ಡಿಜಿಟಲ್ ಕನೆಕ್ಟಿವಿಟಿ ಹೊಂದಿರಬೇಕು ಎಂದು ಆಶಿಸಿದ ಅವರು, ರಾಜ್ಯದಲ್ಲಿಯೂ ಈ ಯೋಜನೆಯನ್ನು ಆದ್ಯತೆಯ ಮೇರೆಗೆ ಜಾರಿಗೊಳಿಸುವಂತೆ ಸೂಚಿಸಿದರು.

"ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ಎಲ್ಲಾ ನಾಗರಿಕ ಸೇವೆಗಳು ಆನ್ ಲೈನ್ ಮೂಲಕ ಜನರಿಗೆ ಲಭ್ಯವಾಗಬೇಕು. ಐದು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ 'ಗ್ರಾಮ ಸೇವಾ ಯೋಜನೆ'ಗೆ, 2022 ರ ಜನವರಿ 26 ರಂದು ಚಾಲನೆ ನೀಡಲಾಗುವುದು" : ಮುಖ್ಯಮಂತ್ರಿ @BSBommai ಘೋಷಣೆ.@gokRDPR pic.twitter.com/tOCbt3jNve

— CM of Karnataka (@CMofKarnataka) September 23, 2021

ಅಕ್ಟೋಬರ್ 2 ರಂದು ದೇಶಾದ್ಯಂತ ಗ್ರಾಮ ಪಂಚಾಯಿತಿಗಳು ಗ್ರಾಮ ಸಭೆ ನಡೆಸಿ, ನನ್ನ ಗ್ರಾಮ, ನನ್ನ ಪರಂಪರೆ ಎಂಬ ಘೋಷಣೆಯಡಿ ತಮ್ಮ ಗ್ರಾಮಕ್ಕಾಗಿ ಶ್ರಮಿಸಿದ ಹಿರಿಯರು, ವಿದ್ವಾಂಸರು, ಸ್ವಾತಂತ್ರ್ಯಹೋರಾಟಗಾರರು ಮೊದಲಾದ ಗಣ್ಯರನ್ನು ಸ್ಮರಿಸುವ ಕೆಲಸವಾಗಬೇಕು. ಅಕ್ಟೋಬರ್ 1 ರಿಂದ 15 ರ ವರೆಗೆ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಕರೆ ನೀಡಿದರು.

ಪಂಚಾಯಿತಿಗಳು ಸಬಲವಾದರೆ ದೇಶ ಸಬಲವಾಗುತ್ತದೆ. ಈ ನಿಟ್ಟಿನಲ್ಲಿ ಭಾರತ ಸರ್ಕಾರ ಗ್ರಾಮೀಣಾಭಿವೃದ್ಧಿಗೆ ಹೆಚ್ಚು ಅನುದಾನ ನೀಡುತ್ತಿದೆ. ಕರ್ನಾಟಕದಲ್ಲಿ 12 ಮತ್ತು 13ನೇ ಹಣಕಾಸು ಆಯೋಗದಡಿ 2008ರಿಂದ 2014 ರ ನಡುವೆ 3988_ ಕೋಟಿ ರೂ. ಅನುದಾನ ಒದಗಿಸಲಾಗಿತ್ತು. 14 ಮತ್ತು 15ನೇ ಹಣಕಾಸು ಆಯೋಗದಲ್ಲಿ ಇದು ಎರಡೂವರೆ ಪಟ್ಟು ಹೆಚ್ಚಾಗಿದ್ದು 9626 ಕೋಟಿ ರೂ. ಗಳಿಗೆ ಹೆಚ್ಚಿದೆ.

ಗ್ರಾಮ ಸ್ವರಾಜ್ ಅಭಿಯಾನದಡಿ 2008-2014ರ ವರೆಗೆ 35 ಕೋಟಿ, 2014 ರಿಂದ ಈ ವರೆಗೆ 135 ಕೊಟಿ ಒದಗಿಸಲಾಗಿದೆ.

ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ @drashwathcn, ಸಹಕಾರ ಸಚಿವ @STSomashekarMLA, ತೋಟಗಾರಿಕೆ ಮತ್ತು ಯೋಜನೆ ಮತ್ತು ಸಾಂಖ್ಯಿಕ ಸಚಿವ @MunirathnaMLA, ಶಿಕ್ಷಣ ಸಚಿವ @BCNagesh_bjp, ಶಾಸಕ @ArshadRizwan, (2/3) pic.twitter.com/oCdXVcXSlQ

— CM of Karnataka (@CMofKarnataka) September 23, 2021

ಮಹಾತ್ಮಾಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ರಾಜ್ಯದ ಗುರಿಯನ್ನು ಹೆಚ್ಚಿಸಲು ರಾಜ್ಯದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪಅವರು ಮಾಡಿದ ಮನವಿಗೆ ಸ್ಪಂದಿಸಿದ ಸಚಿವರು, ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ `ಯೋಜನೆಯಡಿ ತರಬೇತಿ ಪಡೆದ ನಾಲ್ವರು ಯುವತಿಯರಿಗೆ ಉದ್ಯೋಗ ಪ್ರಮಾಣ ಪತ್ರ ನೀಡಲಾಯಿತು. ಇದೇ ಸಂದರ್ಭದಲ್ಲಿ ಕಲಬುರಗಿಯಲ್ಲಿ ನಿರ್ಮಿಸಲಾಗಿರುವ ಅಬ್ದುಲ್ ನಝೀರ್ ಸಾಬ್ ಗ್ರಾಮೀಣಾಭಿವೃದ್ಧಿ ತರಬೇತಿ ಸಂಸ್ಥೆಯ ಪ್ರಾದೇಶಿಕ ತರಬೇತಿ ಕೇಂದ್ರವನ್ನು ಉದ್ಘಾಟಿಸಲಾಯಿತು.

ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ, ತೋಟಗಾರಿಕೆ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಯೋಜನೆ ಮತ್ತು ಸಾಂಖ್ಯಿಕ ಸಚಿವ ಎನ್. ಮುನಿರತ್ನ, ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್ ಕೆ. ಅತೀಕ್, ಪ್ರಧಾನ ಕಾರ್ಯದರ್ಶಿ ಉಮಾ ಮಹಾದೇವನ್ ಮೊದಲಾದವರು ಸಮಾರಂಭದಲ್ಲಿ ಭಾಗವಹಿಸಿದ್ದರು.

About the Author

The Bengaluru Live

Administrator

Visit Website View All Posts

Post navigation

Previous: ಕೆ ಎಸ ಆರ್ ಪಿ ಕ್ಯಾಂಟೀನಲ್ಲಿ ನಡೆದ ಹಣ ಅವ್ಯವಹಾರದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ: ಗೃಹ ಸಚಿವ ಆರಗ ಜ್ಞಾನೇಂದ್ರ
Next: ಕೃಷಿ ಚಟುವಟಿಕೆಗಳ ಕೌಶಲ್ಯ ಬಲವರ್ಧನೆಗೆ ಒಡಂಬಡಿಕೆ

Related Stories

ಸಿಸಿಬಿ ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳನ್ನು ತೋರಿಸುವ ಬೆಂಗಳೂರು ನಗರ ಪೊಲೀಸ್ ವಿಡಿಯೊದ ದೃಶ್ಯ
  • ಅಪರಾಧ
  • ಬೆಂಗಳೂರು ನಗರ

ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಲ್ಲಿ 32 ವರ್ಷದ ವ್ಯಕ್ತಿಯನ್ನು ಬಂಧಿಸಿದ ಬೆಂಗಳೂರು ಸಿಸಿಬಿ

The Bengaluru Live November 11, 2026 8:20 AM
ಹೆಣ್ಣೂರು–ಬಾಗಲೂರು ರಸ್ತೆಯಲ್ಲಿ ಹೊಸದಾಗಿ ಹಾಕಿದ ಕಾಂಕ್ರೀಟ್ ಪಕ್ಕದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು.
  • ಬೆಂಗಳೂರು ನಗರ

ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ

The Bengaluru Live November 11, 2026 1:28 AM
ಎತ್ತರಿಸಿದ ಹಳಿಗಳ ಮೇಲೆ ಸಾಗುತ್ತಿರುವ ನಮ್ಮ ಮೆಟ್ರೋ ರೈಲು
  • ಬೆಂಗಳೂರು ನಗರ
  • ಕರ್ನಾಟಕ

ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್

The Bengaluru Live November 11, 2026 12:25 AM

Latest Post

ನಮ್ಮ ಮೆಟ್ರೋ ಪಿಂಕ್ ಲೈನ್‌ನ ಮೂರು ನಿಲ್ದಾಣಗಳ ಮರುನಾಮಕರಣಕ್ಕೆ ಕೇಂದ್ರದ ಒಪ್ಪಿಗೆ ಎತ್ತರಿಸಿದ ಹಳಿಗಳ ಮೇಲೆ ಸಾಗುತ್ತಿರುವ ನಮ್ಮ ಮೆಟ್ರೋ ರೈಲು
  • ಬೆಂಗಳೂರು

ನಮ್ಮ ಮೆಟ್ರೋ ಪಿಂಕ್ ಲೈನ್‌ನ ಮೂರು ನಿಲ್ದಾಣಗಳ ಮರುನಾಮಕರಣಕ್ಕೆ ಕೇಂದ್ರದ ಒಪ್ಪಿಗೆ

November 11, 2026 11:57 PM
ಎನ್‌ಡಿಎ ಪರೀಕ್ಷೆ ಮಹಿಳಾ ವಿಭಾಗದಲ್ಲಿ ಅಖಿಲ ಭಾರತ ಪ್ರಥಮ ರ‍್ಯಾಂಕ್: ಭದ್ರಾವತಿಯ ಶ್ರೇಯಾ ಎನ್. ಗೌಡ ಅವರಿಗೆ ರಾಜ್ಯಪಾಲರ ಅಭಿನಂದನೆ ತಿಳಿನೀಲಿ ಅಂಗಿ ಮತ್ತು 43 ಸಂಖ್ಯೆಯ ಕಪ್ಪು ಬಿಬ್ ಧರಿಸಿದ ಯುವತಿ ಭಾರತದ ಧ್ವಜದ ಮುಂದೆ ನಿಂತಿದ್ದು, ಹಿಂದೆ ಸಮವಸ್ತ್ರಧಾರಿ ಕೆಡೆಟ್‌ಗಳು ಸೆಲ್ಯೂಟ್ ಮಾಡುತ್ತಿರುವ ಚಿತ್ರ
  • ಕರ್ನಾಟಕ

ಎನ್‌ಡಿಎ ಪರೀಕ್ಷೆ ಮಹಿಳಾ ವಿಭಾಗದಲ್ಲಿ ಅಖಿಲ ಭಾರತ ಪ್ರಥಮ ರ‍್ಯಾಂಕ್: ಭದ್ರಾವತಿಯ ಶ್ರೇಯಾ ಎನ್. ಗೌಡ ಅವರಿಗೆ ರಾಜ್ಯಪಾಲರ ಅಭಿನಂದನೆ

November 11, 2026 10:40 PM
ಡಿ.4ರಿಂದ ‘ಬೆಂಗಳೂರು ಜಾತ್ರೆ’: ಪೂರ್ವ ನಗರ ಪಾಲಿಕೆಯಲ್ಲಿ ಸಿದ್ಧತೆಗೆ ಸೂಚನೆ; ನಾಲ್ಕು ತಿಂಗಳಾದರೂ ಒಂದೂ ಗುಂಡಿ ಮುಕ್ತ ವಾರ್ಡ್ ಇಲ್ಲ ಎಂದು ಆಯುಕ್ತರ ಅಸಮಾಧಾನ ಉದ್ದನೆಯ ಸಭಾ ಮೇಜಿನ ಸುತ್ತ ಕುಳಿತಿರುವ ಅಧಿಕಾರಿಗಳ ಪರಿಶೀಲನಾ ಸಭೆ
  • ಬೆಂಗಳೂರು

ಡಿ.4ರಿಂದ ‘ಬೆಂಗಳೂರು ಜಾತ್ರೆ’: ಪೂರ್ವ ನಗರ ಪಾಲಿಕೆಯಲ್ಲಿ ಸಿದ್ಧತೆಗೆ ಸೂಚನೆ; ನಾಲ್ಕು ತಿಂಗಳಾದರೂ ಒಂದೂ ಗುಂಡಿ ಮುಕ್ತ ವಾರ್ಡ್ ಇಲ್ಲ ಎಂದು ಆಯುಕ್ತರ ಅಸಮಾಧಾನ

November 11, 2026 10:23 PM
ಕೆ.ಆರ್. ಮಾರುಕಟ್ಟೆಯಲ್ಲಿ ದೀಪಾವಳಿ ಸ್ವಚ್ಛತೆ: ನಾಲ್ಕು ದಿನದಲ್ಲಿ 150 ಟನ್ ತ್ಯಾಜ್ಯ ತೆರವು ಸ್ವಚ್ಛತಾ ಕಾರ್ಯಾಚರಣೆ ವೇಳೆ ಬೆಂಗಳೂರಿನ ಕೆ.ಆರ್. ಮಾರುಕಟ್ಟೆ ಪ್ರದೇಶದಲ್ಲಿ ವ್ಯಾಪಾರಿಗಳು, ಗ್ರಾಹಕರು ಮತ್ತು ಮಳಿಗೆಗಳನ್ನು ತೋರಿಸುವ ನಾಲ್ಕು ಚಿತ್ರಗಳು
  • ಬೆಂಗಳೂರು

ಕೆ.ಆರ್. ಮಾರುಕಟ್ಟೆಯಲ್ಲಿ ದೀಪಾವಳಿ ಸ್ವಚ್ಛತೆ: ನಾಲ್ಕು ದಿನದಲ್ಲಿ 150 ಟನ್ ತ್ಯಾಜ್ಯ ತೆರವು

November 11, 2026 10:15 PM
ಹೊಸ ಕಸದ ಟೆಂಡರ್: 2.5 ತಿಂಗಳಲ್ಲಿ 30 ಪ್ಯಾಕೇಜ್ ಜಾರಿ, ಪ್ರತಿ ವಾಹನಕ್ಕೂ ಕ್ಯೂಆರ್ ಕೋಡ್: ಕೃಷ್ಣ ಬೈರೇಗೌಡ ಕಸದ ವಾಹನದ ಸುತ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಸೇರಿದ್ದು, ಚೆಕ್ಸ್ ಶರ್ಟ್ ಧರಿಸಿದ ವ್ಯಕ್ತಿಯೊಬ್ಬರು ವಾಹನದ ಒಳಭಾಗವನ್ನು ಪರಿಶೀಲಿಸುತ್ತಿರುವುದು
  • ಬೆಂಗಳೂರು

ಹೊಸ ಕಸದ ಟೆಂಡರ್: 2.5 ತಿಂಗಳಲ್ಲಿ 30 ಪ್ಯಾಕೇಜ್ ಜಾರಿ, ಪ್ರತಿ ವಾಹನಕ್ಕೂ ಕ್ಯೂಆರ್ ಕೋಡ್: ಕೃಷ್ಣ ಬೈರೇಗೌಡ

November 11, 2026 9:59 PM
ಐಎಎಸ್ ಅಧಿಕಾರಿ ಮೌದ್ಗಿಲ್ ದೂರು: 104 ‘ಅಕ್ರಮ’ ಇ-ಖಾತಾ ಪ್ರಕರಣದಲ್ಲಿ ಜಿಬಿಎ ಇಬ್ಬರು ಸಹಾಯಕ ಆಯುಕ್ತರ ವಿರುದ್ಧ ಎಫ್‌ಐಆರ್ ಎಡಭಾಗದಲ್ಲಿ ಹಳದಿ ಕುರ್ತಾ ಧರಿಸಿರುವ ಲೋಕಮಾತ ಡಿ.ಎಸ್. ಮತ್ತು ಬಲಭಾಗದಲ್ಲಿ ನಾಮಫಲಕವಿರುವ ಮೇಜಿನ ಬಳಿ ಕುಳಿತಿರುವ ಬಸವರಾಜ ಮಾಗಿ ಅವರ ಎರಡು ಚಿತ್ರಗಳ ಕೊಲಾಜ್
  • ಬೆಂಗಳೂರು

ಐಎಎಸ್ ಅಧಿಕಾರಿ ಮೌದ್ಗಿಲ್ ದೂರು: 104 ‘ಅಕ್ರಮ’ ಇ-ಖಾತಾ ಪ್ರಕರಣದಲ್ಲಿ ಜಿಬಿಎ ಇಬ್ಬರು ಸಹಾಯಕ ಆಯುಕ್ತರ ವಿರುದ್ಧ ಎಫ್‌ಐಆರ್

November 11, 2026 9:08 PM

ನೀವು ತಪ್ಪಿಸಿಕೊಂಡಿರಬಹುದು

ಎತ್ತರಿಸಿದ ಹಳಿಗಳ ಮೇಲೆ ಸಾಗುತ್ತಿರುವ ನಮ್ಮ ಮೆಟ್ರೋ ರೈಲು
  • ಬೆಂಗಳೂರು

ನಮ್ಮ ಮೆಟ್ರೋ ಪಿಂಕ್ ಲೈನ್‌ನ ಮೂರು ನಿಲ್ದಾಣಗಳ ಮರುನಾಮಕರಣಕ್ಕೆ ಕೇಂದ್ರದ ಒಪ್ಪಿಗೆ

The Bengaluru Live November 11, 2026 11:57 PM
ತಿಳಿನೀಲಿ ಅಂಗಿ ಮತ್ತು 43 ಸಂಖ್ಯೆಯ ಕಪ್ಪು ಬಿಬ್ ಧರಿಸಿದ ಯುವತಿ ಭಾರತದ ಧ್ವಜದ ಮುಂದೆ ನಿಂತಿದ್ದು, ಹಿಂದೆ ಸಮವಸ್ತ್ರಧಾರಿ ಕೆಡೆಟ್‌ಗಳು ಸೆಲ್ಯೂಟ್ ಮಾಡುತ್ತಿರುವ ಚಿತ್ರ
  • ಕರ್ನಾಟಕ

ಎನ್‌ಡಿಎ ಪರೀಕ್ಷೆ ಮಹಿಳಾ ವಿಭಾಗದಲ್ಲಿ ಅಖಿಲ ಭಾರತ ಪ್ರಥಮ ರ‍್ಯಾಂಕ್: ಭದ್ರಾವತಿಯ ಶ್ರೇಯಾ ಎನ್. ಗೌಡ ಅವರಿಗೆ ರಾಜ್ಯಪಾಲರ ಅಭಿನಂದನೆ

The Bengaluru Live November 11, 2026 10:40 PM
ಉದ್ದನೆಯ ಸಭಾ ಮೇಜಿನ ಸುತ್ತ ಕುಳಿತಿರುವ ಅಧಿಕಾರಿಗಳ ಪರಿಶೀಲನಾ ಸಭೆ
  • ಬೆಂಗಳೂರು

ಡಿ.4ರಿಂದ ‘ಬೆಂಗಳೂರು ಜಾತ್ರೆ’: ಪೂರ್ವ ನಗರ ಪಾಲಿಕೆಯಲ್ಲಿ ಸಿದ್ಧತೆಗೆ ಸೂಚನೆ; ನಾಲ್ಕು ತಿಂಗಳಾದರೂ ಒಂದೂ ಗುಂಡಿ ಮುಕ್ತ ವಾರ್ಡ್ ಇಲ್ಲ ಎಂದು ಆಯುಕ್ತರ ಅಸಮಾಧಾನ

The Bengaluru Live November 11, 2026 10:23 PM
ಸ್ವಚ್ಛತಾ ಕಾರ್ಯಾಚರಣೆ ವೇಳೆ ಬೆಂಗಳೂರಿನ ಕೆ.ಆರ್. ಮಾರುಕಟ್ಟೆ ಪ್ರದೇಶದಲ್ಲಿ ವ್ಯಾಪಾರಿಗಳು, ಗ್ರಾಹಕರು ಮತ್ತು ಮಳಿಗೆಗಳನ್ನು ತೋರಿಸುವ ನಾಲ್ಕು ಚಿತ್ರಗಳು
  • ಬೆಂಗಳೂರು

ಕೆ.ಆರ್. ಮಾರುಕಟ್ಟೆಯಲ್ಲಿ ದೀಪಾವಳಿ ಸ್ವಚ್ಛತೆ: ನಾಲ್ಕು ದಿನದಲ್ಲಿ 150 ಟನ್ ತ್ಯಾಜ್ಯ ತೆರವು

The Bengaluru Live November 11, 2026 10:15 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ನಮ್ಮ ಮೆಟ್ರೋ ಪಿಂಕ್ ಲೈನ್‌ನ ಮೂರು ನಿಲ್ದಾಣಗಳ ಮರುನಾಮಕರಣಕ್ಕೆ ಕೇಂದ್ರದ ಒಪ್ಪಿಗೆ
  • ಎನ್‌ಡಿಎ ಪರೀಕ್ಷೆ ಮಹಿಳಾ ವಿಭಾಗದಲ್ಲಿ ಅಖಿಲ ಭಾರತ ಪ್ರಥಮ ರ‍್ಯಾಂಕ್: ಭದ್ರಾವತಿಯ ಶ್ರೇಯಾ ಎನ್. ಗೌಡ ಅವರಿಗೆ ರಾಜ್ಯಪಾಲರ ಅಭಿನಂದನೆ
  • ಡಿ.4ರಿಂದ ‘ಬೆಂಗಳೂರು ಜಾತ್ರೆ’: ಪೂರ್ವ ನಗರ ಪಾಲಿಕೆಯಲ್ಲಿ ಸಿದ್ಧತೆಗೆ ಸೂಚನೆ; ನಾಲ್ಕು ತಿಂಗಳಾದರೂ ಒಂದೂ ಗುಂಡಿ ಮುಕ್ತ ವಾರ್ಡ್ ಇಲ್ಲ ಎಂದು ಆಯುಕ್ತರ ಅಸಮಾಧಾನ
  • ಕೆ.ಆರ್. ಮಾರುಕಟ್ಟೆಯಲ್ಲಿ ದೀಪಾವಳಿ ಸ್ವಚ್ಛತೆ: ನಾಲ್ಕು ದಿನದಲ್ಲಿ 150 ಟನ್ ತ್ಯಾಜ್ಯ ತೆರವು
©Copyright 2025 The Bengaluru Live All rights reserved. | MoreNews by AF themes.