Home ಬೆಂಗಳೂರು ನಗರ 2750.55 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಅನುಮೋದ000ನೆ

2750.55 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಅನುಮೋದ000ನೆ

14
0
Karnataka approves Rs 2750.55 crore projects
bengaluru

ರಾಜ್ಯದಲ್ಲಿ ಒಟ್ಟು 8619 ಜನರಿಗೆ ಉದ್ಯೋಗವಕಾಶ ಸೃಷ್ಟಿ: ನಿರಾಣಿ

ಬೆಂಗಳೂರು:

ರಾಜ್ಯದಲ್ಲಿ ಬಂಡವಾಳ ಹೂಡಿಕೆ ಹಾಗೂ ಉದ್ಯಮಿದಾರರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯು ಒಟ್ಟು ₹ 2750.55 ಕೋಟಿ ರೂ. ಮೊತ್ತದ 53 ಯೋಜನೆಗಳಿಗೆ ಅನುಮೋದನೆ ನೀಡಿದೆ.

ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಶನಿವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರುಗೇಶ್ ಆರ್ ನಿರಾಣಿ ನೇತೃತ್ವದಲ್ಲಿ ನಡೆದ 134 ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಈ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಯಿತು.

ಒಟ್ಟು 53 ಯೋಜನೆಗಳಿಂದ 2750.55 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, ಇವುಗಳಿಂದ 8619 ಜನರಿಗೆ ಉದ್ಯೋಗವಕಾಶ ಲಭ್ಯವಾಗಲಿದೆ ಎಂದು ಸಚಿವ ಮುರುಗೇಶ್ ನಿರಾಣಿ ಅವರು ತಿಳಿಸಿದ್ದಾರೆ.

bengaluru

Also Read: Single Window Panel Clears More Than Rs 2,750 Cr Investments in Karnataka

50 ಕೋಟಿ ರೂ. ಗೂ ಹೆಚ್ಚು ಬಂಡವಾಳ ಹೂಡಿಕೆಯ ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಇವುಗಳಿಂದ ರೂ. 1670.69 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 4000 ಜನರಿಗೆ ಉದ್ಯೋಗಾವಕಾಶ ಲಭ್ಯವಾಗಲಿದೆ ಎಂದು ಹೇಳಿದರು.

ಇದೇ ರೀತಿ 15 ಕೋಟಿ ರೂ. ಯಿಂದ ರೂ.50 ಕೋಟಿ ರೂ. ಒಳಗಿನ ಬಂಡವಾಳ ಹೂಡಿಕೆಯ 41 ಹೊಸ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇದರಿಂದ 1062.01 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು ಅಂದಾಜು 4311 ಜನರಿಗೆ ಉದ್ಯೋಗಗಳು ಸೃಜನೆಯಾಗಲಿವೆ.

ಹೆಚ್ಚುವರಿ ಬಂಡವಾಳ ಹೂಡಿಕೆಯ 3 ಯೋಜನೆಗೆ ಅನುಮೋದನೆ ನೀಡಿದ್ದು, ಇದರಿಂದ 17.85 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದೆ. ಒಟ್ಟು 53 ಯೋಜನೆಗಳಿಂದ ರೂ. 2750.55 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಇವುಗಳಿಂದ 8619 ಜನರಿಗೆ ಉದ್ಯೋಗವಕಾಶ ಲಭ್ಯವಾಗಲಿದೆ.

ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣರೆಡ್ಡಿ, ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಓ, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಹೂಡಿಕೆ ಹಾಗೂ ಉದ್ಯೋಗಗಳು

ಉಕೇಮ್ ಅಗ್ರೀ ಇನ್ಪಾ ಲಿ. ₹497.95 ಕೋಟಿ ರೂ.ಹೂಡಿಕೆ, ಉದ್ಯೋಗ – 425

ಸುಂದರಿ ಶುಗರ್ಸ್ ಲಿಮಿಟೆಡ್ – ₹402.24 ಕೋಟಿ ರೂ. ಹೂಡಿಕೆ, ಉದ್ಯೋಗ-270

ಎವರೆಸ್ಟ್ ಇಂಡಸ್ಟ್ರೀಸ್ ಲಿಮಿಟೆಡ್ ₹187 ಕೋಟಿ ರೂ. ಹೂಡಿಕೆ, ಉದ್ಯೋಗ-120

ಕೊಪ್ಪಳ ಟಾಯ್ಸ್ ಮೋಲ್ಡಿಂಗ್ ಕೋ ಪ್ರೈವೇಟ್ ಲಿಮಿಟೆಡ್-131.94 ಕೋಟಿ ರೂ.ಹೂಡಿಕೆ, ಉದ್ಯೋಗ-800

ಅಕ್ವೀಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್-118.27 ಕೋಟಿ ರೂ. ಹೂಡಿಕೆ, ಉದ್ಯೋಗ-485

ಕೆಆರ್ ಬಿಎಲ್ ಲಿಮಿಟೆಡ್-110.25 ಕೋಟಿ ರೂ. ಹೂಡಿಕೆ, ಉದ್ಯೋಗ-140

ಅಕ್ವೀಸ್ ಟಾಯ್ಸ್ ಪ್ರೈವೇಟ್ ಲಿಮಿಟೆಡ್ ಡಿಟಿಎ ಯುನಿಟ್- 72.58 ಕೋಟಿ ರೂ. ಹೂಡಿಕೆ, ಉದ್ಯೋಗ-550

ಹೆಲ್ಲಾ ಇನ್ಫ್ರಾ ಮಾರ್ಕೆಟ್ ಪ್ರೈವೇಟ್ ಲಿಮಿಟೆಡ್-71.66 ಕೋಟಿ ರೂ. ಹೂಡಿಕೆ, ಉದ್ಯೋಗ -1500

ಸಾವಿತ್ರಿ ಪ್ಲೈಬೋರ್ಡ್ ಇಂಡಿಯಾ ಪ್ರೈವೇಟ್ ಲಿಮಿಟೆಡ್- 49.86 ಕೋಟಿ ರೂ. ಹೂಡಿಕೆ, ಉದ್ಯೋಗ-515

bengaluru

LEAVE A REPLY

Please enter your comment!
Please enter your name here