ಬೆಂಗಳೂರು:
ಬಹಿರಂಗ ಪ್ರಚಾರಕ್ಕೆ ಇಂದು ಅಧಿಕೃತವಾಗಿ ತೆರೆ ಬಿದ್ದಿದೆ. ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಮಂಗಳವಾರ (May 9) ಸಂಜೆ 6 ಗಂಟೆಯವರೆಗೂ ಮತ ಕೇಳಬಹುದು.
ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾದ ಇಂದು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಅಬ್ಬರದ ರೋಡ್ ಶೋ, ಪ್ರಚಾರ ಸಭೆಗಳ ಮೂಲಕ ಭರ್ಜರಿ ಶಕ್ತಿ ಪ್ರದರ್ಶನ ನಡೆಸಿದರು.