ಬೆಂಗಳೂರು:
ರಾಜ್ಯ ವಿಧಾನಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಇಲ್ಲಿಯವರೆಗೂ ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸ್ ಮತ್ತು ಆದಾಯ ತೆರಿಗೆ ಅಧಿಕಾರಿಗಳು ಸೇರಿದಂತೆ ಎಲ್ಲ ತಂಡಗಳು ಒಟ್ಟು ರೂ. 305 ಕೋಟಿ ಮೌಲ್ಯದ ನಗದು ಸೇರಿದಂತೆ ಮದ್ಯ, ಮಾದಕ ದ್ರವ್ಯ ಇತ್ಯಾದಿ ವಸ್ತುಗಳನ್ನು ವಶಪಡಿಸಿಕೊಂಡಿವೆ ಎಂದು ಚುನಾವಣಾ ಆಯೋಗ ಭಾನುವಾರ ತಿಳಿಸಿದೆ.
ನೀತಿ ಸಂಹಿತೆ ವಿರೋಧಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ದಿನಾಂಕ 30/04/2023 ರ ರಾಜ್ಯಾದ್ಯಂತ ಮಾಡಲಾದ ಜಪ್ತಿ ವಿವರ ಹೀಗಿದೆ. pic.twitter.com/mwS88FCz5s
— Chief Electoral Officer, Karnataka (@ceo_karnataka) April 30, 2023
110 ಕೋಟಿ ನಗದು, 74 ಕೋಟಿ ರೂ. ಮೌಲ್ಯದ ಮದ್ಯ, 81 ಕೋಟಿ ರೂ.ಮೌಲ್ಯದ ಚಿನ್ನಾಭರಣ, ರೂ. 22 ಕೋಟಿ ಮೌಲ್ಯದ ಉಚಿತ ಕೊಡುಗೆ, ಉಡುಗೊರೆ ವಸ್ತುಗಳು, 18 ಕೋಟಿ ರೂ. ಮೌಲ್ಯದ ಮಾದಕ ದ್ರವ್ಯವನ್ನು ವಶಪಡಿಸಿಕೊಂಡಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಮಾಹಿತಿ ನೀಡಿದೆ. ವಶಕ್ಕೆ ಪಡೆಯಲಾದ ಪ್ರಕರಣಗಳಿಗೆ ಸಂಬಂಧಿಸಿದಂತೆ 2,346 ಕ್ಕೂ ಅಧಿಕ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.
Also Read: Seizures total Rs 305 cr in poll-bound Karnataka
ಮೇ 10 ರ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಗೂ ಮುನ್ನ ಮಾರ್ಚ್ 9 ರಿಂದ 27ರ ಅವಧಿಯಲ್ಲಿ ಒಟ್ಟು 58 ಕೋಟಿ ವಶಕ್ಕೆ ಪಡೆಯಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.