ನವದೆಹಲಿ/ಬೆಂಗಳೂರು:
ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳ ಆಯ್ಕೆಗಾಗಿ ಸ್ಕ್ರೀನಿಂಗ್ ಕಮಿಟಿಯನ್ನು ಸೋಮವಾರ ರಚಿಸಿದೆ. ಮೋಹನ್ ಪ್ರಕಾಶ್ (ರಾಜಸ್ಥಾನದ ಹಿರಿಯ ಕಾಂಗ್ರೆಸ್ ಮುಖಂಡ) ಅವರು ಈ ಕಮಿಟಿಗೆ ಚೇರ್‌ಮನ್. ಮುಂಬರುವ ಕರ್ನಾಟಕ ಚುನಾವಣೆಗೆ ಸ್ಕ್ರೀನಿಂಗ್ ಕಮಿಟಿ ರಚನೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದಿಸಿದ್ದಾರೆ.

ಚೇರ್‌ಮನ್ – ಮೋಹನ್ ಪ್ರಕಾಶ್
ಸದಸ್ಯರು – ನೀರಜ್ ಡಾಂಗಿ, ಮೊಹಮ್ಮದ್ ಜಾವೇದ್ ಮತ್ತು ಸಪ್ತಗಿರಿ ಉಲಕ
ಪದನಿಮಿತ್ಯ ಸದಸ್ಯರು – ಕರ್ನಾಟಕದಲ್ಲಿ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಹಿರಿಯ ನಾಯಕರಾದ ಬಿ.ಕೆ. ಹರಿಪ್ರಸಾದ್, ಎಂ.ಬಿ. ಪಾಟೀಲ, ಡಾ. ಜಿ ಪರಮೇಶ್ವರ್ ಮತ್ತು ಎಐಸಿಸಿ ರಾಜ್ಯ ಉಸ್ತುವಾರಿ ಕಾರ್ಯದರ್ಶಿಗಳು.